T20 World Cup 2022 Live: ಟಿ20 ವಿಶ್ವಕಪ್ ಗೆದ್ದು ಬೀಗಿದ ಇಂಗ್ಲೆಂಡ್

ಟಿ20 ವಿಶ್ವಕಪ್‌ನಲ್ಲಿ ಇಂದು (ಭಾನುವಾರ) ಫೈನಲ್ ಪಂದ್ಯ ನಡೆಯಲಿದ್ದು ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಈ ಅಂತಿಮ ಸುತ್ತಿನಲ್ಲಿ ಪ್ರಶಸ್ತಿಗಾಗಿ ಸ್ಪರ್ಧೆ ನಡೆಸಲಿದೆ. ಸಾಕಷ್ಟು ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿರುವ ಎರಡು ತಂಡಗಳು ತೀವ್ರ ಪೈಪೋಟಿ ನಡೆಸಲಿದ್ದು ಎರಡನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ಆತ್ಮವಿಶ್ವಾಸದಲ್ಲಿದೆ.
ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸಾಕಷ್ಟು ಏರಿಳಿತಗಳನ್ನು ಅನುಭವಿಸಿದೆ. ಟೂರ್ನಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ಹಾಗೂ ಜಿಂಬಾಬ್ವೆ ವಿರುದ್ಧ ಸೋಲು ಅನುಭವಿಸಿದ್ದ ಪಾಕ್ ಪಡೆ ಬಹುತೇಕ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಪಾಕಿಸ್ತಾನಕ್ಕೆ ಅದೃಷ್ಟವೂ ಸಾಥ್ ನೀಡಿದ ಕಾರಣ ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ್ದು ಫೈನಲ್‌ಗೆ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ತಂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದು ಫೈನಲ್‌ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಆತ್ಮವಿಶ್ವಾಸದಲ್ಲಿದೆ.
ನವೆಂಬರ್ 13ರಂದು ಮೆಲ್ಬೋರ್ನ್‌ನಲ್ಲಿ ನಡೆಯುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2022 ರಲ್ಲಿ ಚಾಂಪಿಯನ್ ಆಗುವ ತಂಡವು USD 1.6 ಮಿಲಿಯನ್ ಚೆಕ್ ಅನ್ನು ಮನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಈ ಹಿಂದೆಯೇ ದೃಢಪಡಿಸಿದೆ.
ಐಸಿಸಿ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಜೊತೆಗೆ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ವೆಸ್ಟ ಇಂಡೀಸ್ ದಾಖಲೆಯನ್ನ ಸರಿಗಟ್ಟಿದೆ.
ಇಂಗ್ಲೆಂಡ್ ಬೌಲರ್ ಸ್ಯಾಮ್ ಕರನ್‌ಗೆ ಪಂದ್ಯ ಪುರುಷೋತ್ತಮ ಮತ್ತು ಸರಣಿ ಶ್ರೇಷ್ಟ ಪ್ರಶಸ್ತಿ ಲಭಿಸಿದೆ
ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಅರ್ಧಶತಕ ದಾಖಲಿಸಿದ ಬೆನ್ ಸ್ಟೋಕ್ಸ್ ಅಜೇಯ 52 ರನ್ ಕಲೆಹಾಕಿದರು
ಎರಡನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಇಂಗ್ಲೆಂಡ್, 2010ರಲ್ಲಿ ಮೊದಲ ವಿಶ್ವಕಪ್ ಗೆದ್ದಿದ್ದ ಆಂಗ್ಲರು
ಟಿ20 ವಿಶ್ವಕಪ್ ಗೆದ್ದು ಬೀಗಿದ ಇಂಗ್ಲೆಂಡ್, 138 ರನ್‌ಗಳನ್ನ ಯಶಸ್ವಿಯಾಗಿ ಬೆನ್ನತ್ತಿದ ಜಾಸ್ ಬಟ್ಲರ್ ಪಡೆ
ಇಂಗ್ಲೆಂಡ್ 18 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿದೆ. ಗೆಲುವಿಗೆ 12 ಎಸೆತಗಳಲ್ಲಿ 7 ರನ್ ಬೇಕಿದೆ
ಇಂಗ್ಲೆಂಡ್ 17 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 125 ರನ್ ಕಲೆಹಾಕಿದೆ. ಗೆಲುವಿಗೆ 18 ಎಸೆತಗಳಲ್ಲಿ 12 ರನ್ ಬೇಕಿದೆ
ಇಂಗ್ಲೆಂಡ್ 16 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 110 ರನ್ ಕಲೆಹಾಕಿದೆ. ಗೆಲುವಿಗೆ 24 ಎಸೆತಗಳಲ್ಲಿ 28 ರನ್ ಬೇಕಿದೆ
ಇಂಗ್ಲೆಂಡ್ 15 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 94 ರನ್ ಕಲೆಹಾಕಿದೆ. ಗೆಲುವಿಗೆ 30 ಎಸೆತಗಳಲ್ಲಿ 41 ರನ್ ಬೇಕಿದೆ
ಇಂಗ್ಲೆಂಡ್ 14 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 89 ರನ್ ಕಲೆಹಾಕಿದೆ. ಗೆಲುವಿಗೆ 36 ಎಸೆತಗಳಲ್ಲಿ 49 ಬೇಕಿದೆ
10 ಓವರ್‌ಗಳ ಮುಕ್ತಾಯಕ್ಕೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 77 ರನ್ ಕಲೆಹಾಕಿದೆ. ಗೆಲುವಿಗೆ 60 ಎಸೆತಗಳಲ್ಲಿ 61 ರನ್ ಬೇಕಿದೆ.
8 ಓವರ್‌ಗಳ ಮುಕ್ತಾಯಕ್ಕೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 61 ರನ್ ಕಲೆಹಾಕಿದೆ
7 ಓವರ್‌ಗಳ ಮುಕ್ತಾಯಕ್ಕೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 54 ರನ್ ಕಲೆಹಾಕಿದೆ
6 ಓವರ್‌ಗಳ ಪವರ್‌ಪ್ಲೇ ಮುಕ್ತಾಯಕ್ಕೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 49 ರನ್ ಕಲೆಹಾಕಿದೆ
ಇಂಗ್ಲೆಂಡ್‌ನ 3ನೇ ವಿಕೆಟ್ ಪತನ, ಜಾಸ್ ಬಟ್ಲರ್ 26 ರನ್‌ಗಳಿಸಿ ಔಟ್
ಇಂಗ್ಲೆಂಡ್ 5 ಓವರ್ ಮುಕ್ತಾಯಕ್ಕೆ 2 ವಿಕೆಟ್ ನಷ್ಟಕ್ಕೆ 43 ರನ್ ಕಲೆಹಾಕಿದೆ. ಜಾಸ್ ಬಟ್ಲರ್ ಅಜೇಯ 26 ರನ್ ಗಳಿಸಿದ್ದಾರೆ.
ಇಂಗ್ಲೆಂಡ್ ಪರ ಸ್ಯಾಮ್ ಕರನ್ 3, ಆದಿಲ್ ರಶೀದ್ ಹಾಗೂ ಕ್ರಿಸ್ ಜೋರ್ಡಾನ್ 2, ಬೆನ್ ಸ್ಟೋಕ್ಸ್ 1 ವಿಕೆಟ್ ಪಡೆದರು
20 ಓವರ್‌ಗಳಲ್ಲಿ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 137 ರನ್ ಕಲೆಹಾಕಿದೆ. ಇಂಗ್ಲೆಂಡ್ ಗೆಲುವಿಗೆ 138 ರನ್ ಗುರಿ ನೀಡಿದೆ.
ಪಾಕಿಸ್ತಾನದ 8ನೇ ವಿಕೆಟ್ ಪತನ, ಮೊಹಮ್ಮದ್ ವಾಸಿಂ 4 ರನ್‌ಗಳಿಸಿ ಔಟ್
19 ಓವರ್ ಮುಕ್ತಾಯಕ್ಕೆ ಪಾಕಿಸ್ತಾನ 7 ವಿಕೆಟ್ ನಷ್ಟಕ್ಕೆ 131 ರನ್, ಇಂಗ್ಲೆಂಡ್ ಪರ 3 ವಿಕೆಟ್ ಪಡೆದ ಸ್ಯಾಮ್ ಕರನ್
ಪಾಕಿಸ್ತಾನದ 7ನೇ ವಿಕೆಟ್ ಪತನ , ಮೊಹಮ್ಮದ್ ನವಾಜ್ 5 ರನ್‌ಗಳಿಸಿ ಔಟ್
ಪಾಕಿಸ್ತಾನದ 6ನೇ ವಿಕೆಟ್ ಪತನ ಶದಾಬ್ ಖಾನ್ 20 ರನ್ ಗಳಿಸಿ ಔಟ್
ಪಾಕಿಸ್ತಾನದ 5ನೇ ವಿಕೆಟ್ ಪತನ, ಶಾನ್ ಮಸೂದ್ 38 ರನ್‌ಗಳಿಸಿ ಔಟ್
16 ಓವರ್ ಮುಕ್ತಾಯಕ್ಕೆ ಪಾಕಿಸ್ತಾನ 4 ವಿಕೆಟ್ ನಷ್ಟಕ್ಕೆ 119 ರನ್ ಕಲೆಹಾಕಿದೆ. ಶಾನ್ ಮಸೂದ್ 36, ಶದಾಬ್ ಖಾನ್ ಅಜೇಯ 20 ರನ್ ಕಲೆಹಾಕಿದ್ದಾರೆ.
14 ಓವರ್ ಮುಕ್ತಾಯಕ್ಕೆ ಪಾಕಿಸ್ತಾನ 4 ವಿಕೆಟ್ ನಷ್ಟಕ್ಕೆ 98 ರನ್ ಕಲೆಹಾಕಿದೆ
ಪಾಕಿಸ್ತಾನ 84 ರನ್‌ಗಳಿಗೆ 4ನೇ ವಿಕೆಟ್ ಕಳೆದುಕೊಂಡಿದೆ. ಇಫ್ತಿಕಾರ್ ಅಹ್ಮದ್ ಬೆನ್ ಸ್ಟೋಕ್ಸ್‌ಕೆ ತಮ್ಮ ವಿಕೆಟ್ ನೀಡಿ ಫೆವಿಲಿಯನ್ ಸೇರಿಕೊಂಡಿದ್ದಾರೆ
ಪಾಕಿಸ್ತಾನ ಮೊದಲಿಗೆ ಬ್ಯಾಟಿಂಗ್ ನಡೆಸುತ್ತಿದ್ದು ಮೊದಲ 10 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 69 ರನ್‌ಗಳಿಸಿದೆ.
ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಮೆಲ್ಬರ್ನ್‌ನಲ್ಲಿ ಆರಂಭವಾಗಿದ್ದು ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ಮಧ್ಯೆ ಚಾಂಪಿಯನ್ ಪಟ್ಟಕ್ಕಾಗಿ ಹೋರಾಟ ನಡೆಯುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿದ್ದು ಈ ಹಣಾಹಣಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ
ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ಗೆಲುವು ಸಾಧಿಸಬೇಕಾದರೆ ಇಂಗ್ಲೆಂಡ್ ತಂಡ 200 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳಿಸಿದರೆ ಸಾಕು ಎಂದಿದ್ದಾರೆ ಇಯಾನ್ ಮಾರ್ಗನ್. ಇಷ್ಟು ರನ್‌ಗಳಿಸಲು ಇಂಗ್ಲೆಂಡ್‌ಗೆ ಸಾಧ್ಯವಾದರೆ ಅದನ್ನು ಬೆನ್ನಟ್ಟಲು ಪಾಕಿಸ್ತಾನ ತಂಡಕ್ಕೆ ಸಾಧ್ಯವಾಗದು ಎಂಬ ಅಭಿಪ್ರಾಯವನ್ನು ಮಾರ್ಗನ್ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪಾಕಿಸ್ತಾನದ ಬೌಲರ್‌ಗಳಾದ ಹ್ಯಾರಿಸ್ ರೌಫ್, ಶಾಹೀನ್ ಶಾ ಅಫ್ರಿದಿ ನಸೀಮ್ ಶಾ ಹಾಗೂ ಶದಬ್ ಖಾನ್ ಪ್ರದರ್ಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಜೋಸ್ ಬಟ್ಲರ್ (ನಾಯಕ& ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಫಿಲ್ ಸಾಲ್ಟ್/ಡೇವಿಡ್ ಮಲನ್, ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರನ್, ಮಾರ್ಕ್ ವುಡ್/ಕ್ರಿಸ್ ಜೋರ್ಡಾನ್, ಆದಿಲ್ ರಶೀದ್ ಮತ್ತು ಕ್ರಿಸ್ ವೋಕ್ಸ್.
ಪಾಕಿಸ್ತಾನ ಸಂಭಾವ್ಯ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ ಮತ್ತು ನಸೀಮ್ ಶಾ.
ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಗುರುವಾರ ಮೆಲ್ಬರ್ನ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಟೀಮ್ ಇಂಡಿಯಾ ಎಡವಿದ್ದೆಲ್ಲಿ ಎಂಬುದನ್ನು ನಾಯಕ ರೋಹಿತ್ ಶರ್ಮಾ ಹೇಳಿಕೊಂಡಿದ್ದಾರೆ. "ಇದು ಆವು ಆಡಿದ ರೀತಿಯಿಂದಾಗಿ ಬಹಳಷ್ಟು ಬೇಸರವಾಗಿದೆ. ಅಂತಿಮವಾಗಿ ಗಳಿಸಿದ ರನ್‌ಗಳನ್ನು ನೋಡಿದಾಗ ನಾವು ಬ್ಯಾಟಿಂಗ್‌ನಲ್ಲಿ ಉತ್ತಮವಾಗಿಯೇ ಪ್ರದರ್ಶನ ನೀಡಿದ್ದೇವೆ ಎನಿಸಿತ್ತು. ಆದರೆ ಬೌಲಿಂಗ್‌ನಲ್ಲಿ ಪ್ರದರ್ಶನ ನಿರೀಕ್ಷಿತಮಟ್ಟದಲ್ಲಿರಲಿಲ್ಲ. ಇದು ಖಂಡಿತವಾಗಿಯೂ ಕೇವಲ 16 ಓವರ್‌ಗಳಲ್ಲಿ ನಾವು ನೀಡಿದ ಗುರಿಯನ್ನು ಬೆನ್ನಟ್ಟುವ ಪೊಚ್ ಆಗಿರಲಿಲ್ಲ. ಬೌಲಿಂಗ್‌ನಲ್ಲಿ ನಾವು ವಿಫಲವಾದೆವು" ಎಂದಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ.
ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಭಾರತ 2022ರ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ.
ಭಾರತ ನೀಡಿದ್ದ 169 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 16 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 170 ರನ್ ಗಳಿಸಿ, ಗೆಲುವು ಸಾಧಿಸಿದೆ.
ಭಾರತ ನೀಡಿದ್ದ 169 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 13.4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 144 ರನ್ ಗಳಿಸಿದೆ.
12 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 123 ರನ್ ಕಲೆಹಾಕಿದೆ
169 ರನ್ ಗುರಿ ಬೆನ್ನತ್ತಿರುವ ಇಂಗ್ಲೆಂಡ್ 10 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 98 ರನ್ ಕಲೆಹಾಕಿದೆ.
8 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 84 ರನ್ ಕಲೆಹಾಕಿದೆ. ಅಲೆಕ್ಸ್ ಹೇಲ್ಸ್ 28 ಎಸೆತಗಳಲ್ಲಿ 50 ರನ್ ಕಲೆಹಾಕಿದ್ದಾರೆ.
6 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 63 ರನ್ ಕಲೆಹಾಕಿದೆ.
5 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 52 ರನ್ ಕಲೆಹಾಕಿದೆ. ಅಲೆಕ್ಸ್ ಹೇಲ್ಸ್ ಅಜೇಯ 26, ಜಾಸ್ ಬಟ್ಲರ್ ಅಜೇಯ 24 ರನ್ ಕಲೆಹಾಕಿದ್ದಾರೆ.
3 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 33 ರನ್ ಕಲೆಹಾಕಿದೆ
2 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 21 ರನ್ ಕಲೆಹಾಕಿದ ಇಂಗ್ಲೆಂಡ್
ಮೊದಲ ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 13 ರನ್ ಕಲೆಹಾಕಿದ ಇಂಗ್ಲೆಂಡ್
ಭಾರತ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದ್ದು, ಇಂಗ್ಲೆಂಡ್ ತಂಡ ಗೆಲ್ಲಲು 169 ರನ್ ಗುರಿ ನೀಡಲಾಗಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ 29 ಎಸೆತಗಳಲ್ಲಿ 52 ರನ್ ಗಳಿಸಿ ಹಾರ್ದಿಕ್ ಪಾಂಡ್ಯ ಅರ್ಧಶತಕ ಗಳಿಸಿದರು.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 19 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 18 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ 40 ಎಸೆತಗಳಲ್ಲಿ 50 ರನ್ ಗಳಿಸಿ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದರು.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 17 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 16 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ 35 ಎಸೆತಗಳಲ್ಲಿ 43 ರನ್ ಗಳಿಸಿ ವಿರಾಟ್ ಕೊಹ್ಲಿ ಉತ್ತಮವಾಗಿ ಆಡುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 15 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 14 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 12 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿದೆ.
ಭಾರತ ತಂಡದ ಆಧಾರಸ್ತಂಭವಾಗಿದ್ದ ಸೂರ್ಯಕುಮಾರ್ ಯಾದವ್, 10 ಎಸೆತಗಳಲ್ಲಿ 14 ರನ್ ಗಳಿಸಿ ಆದಿಲ್ ರಶೀದ್‌ಗೆ ವಿಕೆಟ್ ಒಪ್ಪಿಸಿದರು.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 11 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ 28 ಎಸೆತಗಳಲ್ಲಿ 27 ರನ್ ಗಳಿಸಿ ಔಟಾದರು.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 8.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 6.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿದೆ.
ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತವಾಗಿದ್ದು, 5 ರನ್ ಗಳಿಸಿದ್ದ ಕೆಎಲ್ ರಾಹುಲ್ ಅವರ ವಿಕೆಟ್ ಕಳೆದುಕೊಂಡಿದೆ.
ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ 4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದೆ.
ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್
ಭಾರತ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ಡಬ್ಲ್ಯೂ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್
ಟಿ20 ವಿಶ್ವಕಪ್‌ನಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ಆರಂಭಕ್ಕೆ ಇನ್ನು ಕೆಲವೇ ಕ್ಷಣಗಳು ಬಾಕಿಯಿದೆ.
ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಅವರ ಸಾಮರ್ಥ್ಯವನ್ನು ಉಲ್ಲೇಖಿಸಿರುವ ಮಿಸ್ಬಾ ಉಲ್ ಹಕ್ ಅದಕ್ಕೆ ಪ್ರತಿತಂತ್ರವನ್ನು ಹೆಣೆಯುವಂತೆ ಸೂಚಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಬೌಲರ್‌ಗಳ ವೇಗವನ್ನು ಅದ್ಭುತವಾಗಿ ಬಳಸಿಕೊಂಡು ಬ್ಯಾಟಿಂಗ್ ನಡೆಸುತ್ತಾರೆ. ಅದಕ್ಕೆ ಇಂಗ್ಲೆಂಡ್ ಆಟಗಾರರು ಪ್ರತಿತಂತ್ರವನ್ನು ಹೆಣೆಯಬೇಕಿದೆ ಎಂದಿದ್ದಾರೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಮಾಜಿ ಕೋಚ್ ಮಿಸ್ಬಾ ಉಲ್ ಹಕ್ ಸಲಹೆ ನೀಡಿದ್ದಾರೆ.
"ನೀವು ಅಕ್ಷರ್ ಪಟೇಲ್ ಅವರಿಗೆ ಕೇವಲ 1-2 ಓವರ್‌ಗಳನ್ನು ಮಾತ್ರವೇ ನೀಡುತ್ತಿದ್ದೀರಿ ಎಂದಾದರೆ ಅವರನ್ನು ಪೂರ್ಣವಾಗಿ ಬಳಸಿಕೊಳ್ಳುತ್ತಿಲ್ಲ ಎಂದಾದರೆ ಅವರನ್ನು ಯಾವ ಕಾರಣಕ್ಕೆ ಆಯ್ಕೆ ಮಾಡುತ್ತೀರಿ? 7ನೇ ಕ್ರಮಾಂಕದಲ್ಲಿ ಅವರಿಂದ ರನ್ ಕೂಡ ಚೆನ್ನಾಗಿ ಬರುತ್ತಿಲ್ಲ. ಆತನೋರ್ವ ಉತ್ತಮ ಆಟಗಾರ, ವೆಸ್ಟ್ ಇಂಡೀಸ್‌ನಲ್ಲಿ ಆತನಿಂದ ಅದ್ಭುತ ಪ್ರದರ್ಶನ ಬಂದಿದೆ. ಆದರೆ ಆತನ ಮೇಲೆ ಬೌಲಿಂಗ್‌ನಲ್ಲಿ ನೀವು ನಂಬಿಕೆ ತೋರಿಸದಿದ್ದರೆ ಆತನ ಬದಲಿಗೆ ನಿಮಗೆ ನಂಬಿಕೆಯಿರುವ ಬೌಲರ್‌ನನ್ನು ಆಯ್ಕೆ ಮಾಡಿಕೊಳ್ಳಿ" ಎಂದು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ಗೆ ಸಲಹೆ ನೀಡಿದ್ದಾರೆ ಸುನಿಲ್ ಗವಾಸ್ಕರ್.
"ಟೀಮ್ ಇಂಡಿಯಾ ತನ್ನ ಬೌಲಿಂಗ್ ವಿಭಾಗದ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಇಬ್ಬರು ಸ್ಪಿನ್ನರ್‌ಗಳ ಪೈಕಿ ಓರ್ವ ಸ್ಪಿನ್ನರ್ ಬದಲಿಗೆ ಬ್ಯಾಟರ್‌ನೊಂದಿಗೆ ಕಣಕ್ಕಿಳಿಯಬಹುದು. ಪಂತ್ ಹಾಘೂ ದಿನೇಶ್ ಕಾರ್ತಿಕ್ ಜೊತೆಯಾಗಿ ಆಡಬಹುದು. ಅದು ಸಾಧ್ಯವಾದರೆ ಆಗ 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ 5ನೇ ಕ್ರಮಾಂಕದಲ್ಲಿ ರಿಷಭ್ ಪಂತ್, 6ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ, ಹಾಗೂ 7ನೇ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ ಕಣಕ್ಕಿಳಿಯಬಹುದು. ಈ ಮೂಲಕ ಬ್ಯಾಟಿಂಗ್ ವಿಭಾಗವನ್ನು ವಿಸ್ತರಿಸಿಕೊಳ್ಳಬಹುದು" ಎಂದಿದ್ದಾರೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್.
ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೆಣೆಸಾಟಕ್ಕೂ ಮುನ್ನ ಸಾಕಷ್ಟು ಚರ್ಚೆ ವಿಶ್ಲೇಷಣೆಗಳು ನಡೆಯುತ್ತಿದೆ. ಅನೇಕ ಕ್ರಿಕೆಟ್ ಪಂಡಿತರು ಹಾಗೂ ಮಾಜಿ ಕ್ರಿಕೆಟಿಗರು ಈ ಪಂದ್ಯಕ್ಕೂ ಮುನ್ನ ಸಾಕಷ್ಟು ಸಲಹೆಗಳನ್ನು ನೀಡಿದ್ದು ಟೀಮ್ ಇಂಡಿಯಾ ಯಾವ ಬದಲಾವನೆಯೊಂದಿಗೆ ಈ ಮಹತ್ವದ ಪಂದ್ಯಕ್ಕೆ ಕಣಕ್ಕಿಳಿಯಲಿದೆ ಎಂಬುದು ಕುತೂಹಲವಾಗಿದೆ. ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಿದ್ದಾರೆ.
ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಅಲೆಕ್ಸ್ ಹೇಲ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ ಸ್ಟನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್
ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್/ ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಟಿ20 ವಿಶ್ವಕಪ್‌ನಲ್ಲಿ ಗುರುವಾರ ಇಂಗ್ಲೆಂಡ್ ತಂಡದ ಸವಾಲನ್ನು ಎದುರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಅಡಿಲೇಡ್ ಓವಲ್‌ನಲ್ಲಿ ಗೆದ್ದು ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸುವ ತಂಡ ಯಾವುದು ಎಂಬುದು ಎಲ್ಲರ ಕುತೂಹಲ. ಈ ಸಂದರ್ಭದಲ್ಲಿ ಮೊದಲ ಸೆಮಿಫೈನಲ್ ಗೆದ್ದು ಫೈನಲ್‌ಗೆ ಅರ್ಹತೆ ಪಡೆದಿರುವ ಪಾಕಿಸ್ತಾನ ತಂಡದ ಪ್ರಮುಖ ಆಟಗಾರ ಮೊಹಮ್ಮದ್ ರಿಜ್ವಾನ್ ಪ್ರತಿಕ್ರಿಯಿಸಿದ್ದು ತಂಡದ ಆಟಗಾರರು ಯಾವ ತಂಡದ ವಿರುದ್ಧ ಫೈನಲ್‌ನಲ್ಲಿ ಸೆಣೆಸಾಡಲು ಎದುರು ನೋಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.
ಭಾರತದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್‌ನ ವೇಗದ ಬೌಲರ್ ಮಾರ್ಕ್ ವುಡ್ ಆಡುತ್ತಿಲ್ಲ.
ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ ಆಡುವುದನ್ನು ನೋಡಲು ಬಯಸುತ್ತೇನೆ ಎಂದು ಪಾಕಿಸ್ತಾನ ತಂಡದ ಮೆಂಟರ್ ಮ್ಯಾಥ್ಯೂ ಹೇಡನ್ ತಿಳಿಸಿದ್ದಾರೆ.
2007ರ ಫೈನಲ್ ಪಂದ್ಯವನ್ನು ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಗೆದ್ದಿತ್ತು. ಭಾರತ ಮತ್ತು ಪಾಕಿಸ್ತಾನದ ಅಭಿಮಾನಿಗಳು ಇತಿಹಾಸ ಪುನರಾವರ್ತನೆಯಾಗುತ್ತದೆ ಎಂದು ನಿರೀಕ್ಷಿಸುತ್ತಿದ್ದಾರೆ.
ಸುರೇಶ್ ರೈನಾ ಅವರು ಪಾಕಿಸ್ತಾನ ಕ್ರಿಕೆಟ್ ತಂಡದ ಕೋಚ್ ಮತ್ತು ಮೆಂಟರ್ ಮ್ಯಾಥ್ಯೂ ಹೇಡನ್ ಅವರನ್ನು ಸಹ ಶ್ಲಾಘಿಸಿದ್ದಾರೆ.
ಪಾಕಿಸ್ತಾನವು ವಿಶ್ವಕಪ್‌ನ ನಾಕ್-ಔಟ್ ಹಂತಗಳಲ್ಲಿ ಮೂರು ಬಾರಿ ನ್ಯೂಜಿಲೆಂಡ್ ತಂಡವನ್ನು ಎದುರಿಸಿತ್ತು ಮತ್ತು ಎಲ್ಲಾ ಮೂರು ಸಂದರ್ಭಗಳಲ್ಲಿ ವಿಜಯಶಾಲಿಯಾಗಿದೆ. ಈ ಬಾರಿಯೂ ಪಾಕಿಸ್ತಾನವು ತಮ್ಮ ದಾಖಲೆಯನ್ನು ಅಜೇಯವಾಗಿಟ್ಟುಕೊಂಡಿದೆ ಮತ್ತು ವಿಶ್ವಕಪ್‌ನ ನಾಕ್-ಔಟ್ ಹಂತಗಳಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು ಬಾರಿ ಸೋಲಿಸಿದೆ.
ಭಾರತ ಮತ್ತು ಇಂಗ್ಲೆಂಡ್ ಎರಡು ಬಲಿಷ್ಠ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿವೆ. 2007, 2009 ಮತ್ತು 2012ರಲ್ಲಿ ಪರಸ್ಪರ ವಿರುದ್ಧ ಆಡಿವೆ. ಗುರುವಾರ ಆಡಿದರೆ ನಾಲ್ಕು ಬಾರಿ ಮುಖಾಮುಖಿಯಾದಂತಾಗುತ್ತದೆ. ಈವರೆಗಿನ ವಿಶ್ವಕಪ್‌ನ ಮೂರು ಪಂದ್ಯಗಳಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಎರಡು ಬಾರಿ ಜಯ ಸಾಧಿಸಿದೆ ಮತ್ತು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಒಂದು ಬಾರಿ ಗೆಲುವು ಕಂಡಿದೆ.
ಪಾಕಿಸ್ತಾನ ತಂಡ ತಮ್ಮ ದಿನದಂದು ಉತ್ತಮ ಆಟ ಆಡಿತು, ತಮ್ಮ ಸಂಪೂರ್ಣ ಸಾಮರ್ಥ್ಯದೊಂದಿಗೆ ಆಟವಾಡಿತು. ಯಾವುದೇ ಹೆಚ್ಚಿನ ಅಡಚಣೆಗಳಿಲ್ಲದೆ ಅವರು ಫೈನಲ್ ತಲುಪುವುದನ್ನು ಖಚಿತಪಡಿಸಿಕೊಂಡರು. ದೊಡ್ಡ ಪಂದ್ಯದಲ್ಲಿ ಅದ್ಭುತ ಪ್ರದರ್ಶನಗಳನ್ನು ನೀಡಿದ ಆರಂಭಿಕ ಜೋಡಿ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ಅವರನ್ನು ಸಹ ಸುರೇಶ್ ರೈನಾ ಹೊಗಳಿದರು.
ಪಾಕಿಸ್ತಾನವು ಕೊನೆಯದಾಗಿ 2009ರಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ಶ್ರೀಲಂಕಾ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು ಮತ್ತು ಮತ್ತೊಂದು ಫೈನಲ್‌ಗೆ ಆಸ್ಟ್ರೇಲಿಯಾದಲ್ಲಿ ಪ್ರವೇಶ ಮಾಡಿದೆ.
ನ್ಯೂಜಿಲೆಂಡ್ ಪರ ಟ್ರೆಂಟ್ ಬೋಲ್ಟ್ 2, ಮಿಚೆಲ್ ಸ್ಯಾಂಟ್ನರ್ 1 ವಿಕೆಟ್ ಪಡೆದಿದ್ದಾರೆ.
ಪಾಕಿಸ್ತಾನ ಪರ ಬಾಬರ್ ಅಜಮ್ 53 ರನ್, ಮೊಹಮ್ಮದ್ ರಿಜ್ವಾನ್ 57ರನ್, ಮೊಹಮ್ಮದ್ ಹ್ಯಾರಿಸ್ 30 ರನ್, ಶಾನ್ ಮಸೂದ್ ಅಜೇಯ 3 ರನ್ ಕಲೆಹಾಕಿದ್ದಾರೆ.
153 ರನ್‌ಗಳನ್ನ ಗುರಿ ಬೆನ್ನತ್ತಿದ ಪಾಕಿಸ್ತಾನ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ.
ಐಸಿಸಿ ಟಿ20 ವಿಶ್ವಕಪ್ ಮೊದಲ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ 7 ವಿಕೆಟ್‌ಗಳ ಜಯ ಸಾಧಿಸಿದ್ದು, ಫೈನಲ್ ಪ್ರವೇಶಿಸಿದೆ.
ಪಾಕಿಸ್ತಾನದ 2ನೇ ವಿಕೆಟ್ ಪತನ, ಮೊಹಮ್ಮದ್ ರಿಜ್ವಾನ್ 57ರನ್‌ಗಳಿಸಿ ಔಟ್
ಪಾಕಿಸ್ತಾನ 16 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 127 ರನ್ ಕಲೆಹಾಕಿದೆ.
ಪಾಕಿಸ್ತಾನ 14 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 113 ರನ್ ಕಲೆಹಾಕಿದೆ.
36 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ ಮೊಹಮ್ಮದ್ ರಿಜ್ವಾನ್
ಪಾಕಿಸ್ತಾನದ ಮೊದಲ ವಿಕೆಟ್ ಪತನ, 53 ರನ್‌ಗಳಿಸಿ ಬಾಬರ್ ಅಜಮ್ ಔಟ್
12 ಓವರ್ ಮುಕ್ತಾಯಕ್ಕೆ ಪಾಕಿಸ್ತಾನ ವಿಕೆಟ್ ನಷ್ಟವಿಲ್ಲದೆ 102 ರನ್
38 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್
153 ರನ್ ಗುರಿ ಬೆನ್ನತ್ತಿರುವ ಪಾಕಿಸ್ತಾನ 10 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 87 ರನ್ ಕಲೆಹಾಕಿದೆ.
ಪಾಕಿಸ್ತಾನ 8 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 68 ರನ್ ಕಲೆಹಾಕಿದೆ.
6 ಓವರ್‌ಗಳ ಪವರ್‌ಪ್ಲೇ ಮುಕ್ತಾಯಕ್ಕೆ ಪಾಕಿಸ್ತಾನ ವಿಕೆಟ್ ನಷ್ಟವಿಲ್ಲದೆ 55 ರನ್ ಕಲೆಹಾಕಿದೆ. ಬಾಬರ್ ಅಜಮ್ ಅಜೇಯ 25 ರನ್, ಮೊಹಮ್ಮದ್ ರಿಜ್ವಾನ್ ಅಜೇಯ 28 ರನ್ ಕಲೆಹಾಕಿದ್ದಾರೆ.
ಪಾಕಿಸ್ತಾನ 5 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 47 ರನ್ ಕಲೆಹಾಕಿದೆ.
ನ್ಯೂಜಿಲೆಂಡ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 152 ರನ್ ಕಲೆಹಾಕಿದ್ದು, ಪಾಕಿಸ್ತಾನ ಗೆಲುವಿನಗೆ 153 ರನ್ ಗುರಿ ನೀಡಿದೆ.
ನ್ಯೂಜಿಲೆಂಡ್ 18 ಓವರ್ ಮುಕ್ತಾಯಕ್ಕೆ 4 ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿದೆ.
ನ್ಯೂಜಿಲೆಂಡ್‌ನ 4ನೇ ವಿಕೆಟ್ ಪತನ, 46 ರನ್‌ಗಳಿಸಿ ಕೇನ್ ವಿಲಿಯಮ್ಸನ್ ಔಟ್
ನ್ಯೂಜಿಲೆಂಡ್ 16 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 116 ರನ್ ಕಲೆಹಾಕಿದೆ.
ನ್ಯೂಜಿಲೆಂಡ್ 14 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 99 ರನ್ ಕಲೆಹಾಕಿದೆ.
ನ್ಯೂಜಿಲೆಂಡ್ 12 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 81 ರನ್ ಕಲೆಹಾಕಿದೆ. ಕೇನ್ ವಿಲಿಯಮ್ಸನ್ 28, ಡೆರಿಲ್ ಮಿಚೆಲ್ ಅಜೇಯ 21 ರನ್ ಕಲೆಹಾಕಿದ್ದಾರೆ.
ನ್ಯೂಜಿಲೆಂಡ್ 10 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 59 ರನ್ ಕಲೆಹಾಕಿದೆ
ನ್ಯೂಜಿಲೆಂಡ್‌ನ 3ನೇ ವಿಕೆಟ್ ಪತನ, 6 ರನ್‌ಗಳಿಸಿ ಕಾಟನ್ ಬೌಲ್ಡ್ ಆದ ಗ್ಲೆನ್ ಫಿಲಿಪ್ಸ್
7 ಓವರ್ ಮುಕ್ತಾಯಕ್ಕೆ ನ್ಯೂಜಿಲೆಂಡ್ 2 ವಿಕೆಟ್ ನಷ್ಟಕ್ಕೆ 44 ರನ್ ಕಲೆಹಾಕಿದೆ
ನ್ಯೂಜಿಲೆಂಡ್‌ನ 2ನೇ ವಿಕೆಟ್ ಪತನ, 21 ರನ್‌ಗಳಿಸಿ ರನೌಟ್ ಆದ ಡೆವೊನ್ ಕಾನ್ವೆ
ನ್ಯೂಜಿಲೆಂಡ್ 4 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 23 ರನ್ ಕಲೆಹಾಕಿದೆ
ನ್ಯೂಜಿಲೆಂಡ್ 2 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 14 ರನ್ ಕಲೆಹಾಕಿದೆ
ಪಂದ್ಯದ ಮೂರನೇ ಎಸೆತದಲ್ಲಿ ನ್ಯೂಜಿಲೆಂಡ್ ತಂಡ ಮೊದಲ ವಿಕೆಟ್ ಕಳೆದುಕೊಂಡಿದೆ. ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಶಾಹೀನ್ ಅಫ್ರಿದಿ ಪಾಕಿಸ್ತಾನಕ್ಕೆ ಮೊದಲ ಯಶಸ್ಸು ನೀಡಿದ್ದಾರೆ.
ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ ಬೆಂಚ್: ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್ ಬೆಂಚ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್
ಇನ್ನು ಈ ಪಂದ್ಯಕ್ಕಾಗಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ಎರಡು ತಂಡಗಳು ಕೂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ.
ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಪಾಕಿಸ್ತಾನ ತಂಡ ಮೊದಲಿಗೆ ಬೌಲಿಂಗ್ ದಾಳಿ ನಡೆಸುವ ಸವಾಲು ಸ್ವೀಕರಿಸಿದೆ.
"ನಾವು ಸಹಜವಾಗಿಯೇ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುವುದನ್ನು ನೋಡಲು ಇಷ್ಟವಿಲ್ಲ. ಈ ಎರಡು ತಂಡಗಳು ಮುಖಾಮುಖಿಯಾಗದಂತೆ ಮಾಡಲು ನಮ್ಮಿಂದ ಸಾಧ್ಯವಿರುವುದನ್ನು ನಾವು ಖಂಡಿತಾ ಮಾಡಲಿದ್ದೇವೆ"ಎಂದು ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ನೇರವಾಗಿಯೇ ಹೇಳಿಕೆ ನೀಡಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೈನಲ್ ಹಂತದಲ್ಲಿ ಮುಖಾಮುಖಿಯಾಗುವುದು ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್‌ಗೆ ಸಹಜವಾಗಿಯೇ ಇಷ್ಟವಿಲ್ಲ. ಯಾಕೆಂದರೆ ಅದು ಸಾಧ್ಯವಾಗಬೇಕಾದರೆ ಇಂಗ್ಲೆಂಡ್ ತಂಡ ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋಲಬೇಕಿದೆ. ಈ ಕಾರಣದಿಂದಾಗಿಯೇ 2007ರ ವಿಶ್ವಕಪ್‌ನಲ್ಲಿ ನಡೆದಂತೆ ಈ ಬಾರಿ ಖಂಡಿತವಾಗಿಯೂ ನಡೆಯಲು ಬಿಡುವುದಿಲ್ಲ ಎಂದಿದ್ದಾರೆ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್.
ಗುರುವಾರ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮಹತ್ವದ ಸೆಮಿಫೈನಲ್ ಕದನ ನಡೆಯಲಿದ್ದು ಈ ಪಂದ್ಯಕ್ಕೆ ಅಡಿಲೇಡ್ ಓವಲ್ ಆತಿಥ್ಯ ವಹಿಸಲಿದೆ. ಈ ಮುಖಾಮುಖಿಯಲ್ಲಿ ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಹಾಗೂ ಇಂಗ್ಲೆಂಡ್‌ನ ಆರಂಭಿಕ ಆಟಗಾರ ಜೋಸ್ ಬಟ್ಲರ್ ನಡುವಿನ ಸೆಣೆಸಾಟ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದರಲ್ಲಿ ಮೇಲುಗೈ ಸಾಧಿಸುವ ವಿಶ್ವಾಸವನ್ನು ಇಂಗ್ಲೆಂಡ್ ನಾಯಕ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಾರಿ ವಿಶ್ವಕಪ್‌ನಲ್ಲಿ ಹೊಸ ಚೆಂಡಿನಲ್ಲಿ ಟೀಮ್ ಇಂಡಿಯಾದ ಅನುಭವಿ ಭುವನೇಶ್ವರ್ ಕುಮಾರ್ ಅದ್ಭುತ ಪ್ರದರ್ಶನ ನೀಡಿ ಮಿಂಚುತ್ತಿದ್ದಾರೆ. ಭಾರತದ ಅನುಭವಿ ಬೌಲರ್‌ನ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ತಂಡ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದಿರುವ ಜೋಸ್ ಬಟ್ಲರ್ ವೈಯಕ್ತಿಕವಾಗಿ ತನಗೆ ಯಾರ ಭಯವೂ ಇಲ್ಲ ಎಂಬ ಮಾತನ್ನು ಹೇಳಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರವಾಗಿ ದಾಳಿಗೆ ತಾನು ಸಿದ್ಧ ಎಂಬ ಸೂಚನೆ ನೀಡಿದ್ದಾರೆ.
ಸೂರ್ಯಕುಮಾರ್ ಯಾದವ್ ಅವರ ಯಶಸ್ಸಿಗೆ ಬಹು ಮುಖ್ಯವಾದ ಕಾರಣ ದೇಶೀಯ ಕ್ರಿಕೆಟ್‌ನಲ್ಲಿನ ಅವರ ಅನುಭವ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಡುವ ಮುನ್ನ ಸೂರ್ಯಕುಮಾರ್ ಯಾದವ್ 200-250 ಪಂದ್ಯಗಳ ದೇಶೀಯ ಕ್ರಿಕೆಟ್‌ನ ಅನುಭವ ಹೊಂದಿದ್ದಾರೆ. ಅವರ ಆಟ ಅವರಿಗೆ ಚೆನ್ನಾಗಿ ಅರಿವಿದೆ. ಅವರು ಉತ್ತಮ ಚೆಂಡುಗಳಿಗೂ ಬಾರಿಸಬಲ್ಲರು, ಯಾಕೆಂದರೆ ಅವರ ಅಭ್ಯಾಸ ಆ ರೀತಿಯಾಗಿರುತ್ತದೆ. ಈ ಮಾದರಿಯಲ್ಲಿ ನೀವು ಬ್ಯಾಟರ್ ಆಗಿ ಬೆಳವಣಿಗೆ ಹೊಂದಬೇಕು, ನಿಮ್ಮ ಆಟದಲ್ಲಿ ಬೆಳವಣಿಗೆ ಕಾಣಿಸಬೇಕು" ಎಂದಿದ್ದಾರೆ ಶಾಹೀದ್ ಅಫ್ರಿದಿ.
ಹವಾಮಾನ ವರದಿ: ಪಂದ್ಯದ ದಿನ ಸಿಡ್ನಿ ಕ್ರೀಡಾಂಗಣದ ಪರಿಸರದಲ್ಲಿ ಮೋಡಕವಿದ ವಾತಾವರಣವಿರಲಿದೆ. 15-21 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದ್ದು ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳು ಇಲ್ಲ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯ ಬುಧವಾರ ಸಿಡ್ನಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ
ನಾಲ್ಕು ಪಂದ್ಯಗಳಲ್ಲಿ ಮಾರ್ಕ್ ವುಡ್ ಸರಾಸರಿ 12.00 ಮತ್ತು 7.71ರ ಎಕಾನಮಿ ದರದಲ್ಲಿ ಒಂಬತ್ತು ವಿಕೆಟ್‌ಗಳನ್ನು ಗಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಇದುವರೆಗಿನ ಅವರ ಅತ್ಯುತ್ತಮ ಬೌಲಿಂಗ್ 26 ರನ್ ನೀಡಿ 3 ವಿಕೆಟ್ ಪಡೆದಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡದ ವಿರುದ್ಧದ ಪಂದ್ಯಕ್ಕೂ ಎರಡು ದಿನಗಳ ಮೊದಲು, ಅಡಿಲೇಡ್‌ನಲ್ಲಿ ಅಭ್ಯಾಸ ಕೈಬಿಡಲು ನಿರ್ಧರಿಸಿದ ನಂತರ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಮಾರ್ಕ್ ವುಡ್ ತಂಡದ ಇತ್ತೀಚಿನ ಗಾಯಕ್ಕೆ ತುತ್ತಾದ ಆಟಗಾರನಾಗಿದ್ದಾರೆ. ಇದರಿಂದ ಇಂಗ್ಲೆಂಡ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
2022ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ಗೆ ಪಾಕಿಸ್ತಾನ ತಂಡವು ಅಸಾಮಾನ್ಯವಾಗಿ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಇದೀಗ ಬುಧವಾರ (ನವೆಂಬರ್ 9) ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತವಾಗಿದ್ದು, ನೆಟ್ಸ್‌ನಲ್ಲಿ ಅಭ್ಯಾಸದ ಅವಧಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರು ಮುಂಗೈ ಗಾಯಕ್ಕೆ ತುತ್ತಾಗಿದ್ದಾರೆ. ಪ್ರಬಲವಾದ ಹೊಡೆತ ಅನುಭವಿಸಿದ ಕಾರಣ ಭಾರತೀಯ ತಂಡವು ಮಂಗಳವಾರ ಬೆಳಗ್ಗೆ ದೊಡ್ಡ ಆತಂಕ ಅನುಭವಿಸಿದೆ.
ಟೀಮ್ ಇಂಡಿಯಾದ ಆಟಗಾರ ಸೂರ್ಯಕುಮಾರ್ ಯಾದವ್ ಪ್ರದರ್ಶನದ ಬಗ್ಗೆ ಸುನಿಲ್ ಗವಾಸ್ಕರ್ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದು ಆತ ಹೊಸ 360 ಡಿಗ್ರಿ ಆಟಗಾರ ಎಂದು ಕೊಂಡಾಡಿದ್ದಾರೆ. ಆದರೆ ಸೂರ್ಯಕುಮಾರ್ ಯಾದವ್ ಮಿಂಚುವಲ್ಲಿ ವಿಫಲವಾದರೆ ಟೀಮ್ ಇಂಡಿಯಾ 140-150 ರನ್‌ಗಳನ್ನು ಗಳಿಸಲು ಕೂಡ ಹರಸಾಹಸ ಪಡಲಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್. ಅತ್ಯುತ್ತಮ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್ ಈ ಬಾರಿಯ ವಿಶ್ವಕಪ್‌ನಲ್ಲಿ ಎರಡನೇ ಅತೀ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ.
ಆರ್ ಅಶ್ವಿನ್ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈವರೆಗೆ ಒಟ್ಟು 23 ಪಂದ್ಯಗಳಲ್ಲಿ 32 ವಿಕೆಟ್‌ಗಳನ್ನು ಸಂಪಾದಿಸಿದ್ದು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. 16.40 ಸರಾಸರಿ ಹೊಂದಿರುವ ಅವರು 6.32ರಷ್ಟು ಅದ್ಭುತ ಎಕಾನಮಿ ಹೊಂದಿದ್ದಾರೆ. 11 ರನ್‌ಗಳನ್ನು ನೀಡಿ 4 ವಿಕೆಟ್ ಪಡೆದಿರುವುದು ಅಶ್ವಿನ್ ಅವರ ಅತ್ಯುತ್ತಮ ಬೌಲಿಂಗ್ ಸಾಧನೆಯಾಗಿದೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಟೀಮ್ ಇಂಡಿಯಾ ಪರವಾಗಿ ಆರ್ ಅಶ್ವಿನ್ ವಿಶೇಷ ದಾಖಲೆಯನ್ನು ತಮ್ಮ ಪರವಾಗಿ ಬರೆದುಕೊಂಡಿದ್ದಾರೆ. ಐಸಿಸಿ ಟಿ20 ವಿಶ್ವಕಪ್‌ನ್ಲಲಿ ಭಾರತದ ಪರವಾಗಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತ ಬೌಲರ್ ಆಗಿ ಆರ್ ಅಶ್ವಿನ್ ಹೊರಹೊಮ್ಮಿದ್ದಾರೆ. ಭಾನುವಾರ ಜಿಂಬಾಬ್ವೆ ವಿರುದ್ಧ ಮೆಲ್ಬರ್ನ್‌ನಲ್ಲಿ ನಡೆದ ಪಂದ್ಯದಲ್ಲಿ ಅಶ್ವಿನ್ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾದರು.
ಹೀಗೆ ಮೈದಾನಕ್ಕೆ ನುಗ್ಗಿದ ಅಭಿಮಾನಿಗೆ ಈಗ ಭಾರೀ ದಂಡದ ಬರೆ ಬಿದ್ದಿದೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಅವರನ್ನು ಭೇಟಿಯಾಗುವ ದೃಷ್ಟಿಯಿಂದ ಮೈದಾನಕ್ಕೆ ನುಗ್ಗಿದ ಅಭಿಮಾನಿಗೆ ಮೈದಾನಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ 6.5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.
ಟಿ20 ವಿಶ್ವಕಪ್‌ನಲ್ಲಿ ಭಾರತ ಭಾನುವಾರ ಜಿಂಬಾಬ್ವೆ ವಿರುದ್ಧ ಸೂಪರ್ 12 ಹಂತದ ಅಂತಿಮ ಪಂದ್ಯವನ್ನು ಆಡಿದೆ. ಈ ಪಂದ್ಯದಲ್ಲಿ ಭಾರತ ಭರ್ಜರಿಯಾಗಿ ಪ್ರದರ್ಶನ ನೀಡಿದ್ದು ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ನಡೆಸುತ್ತಿದ್ದಾಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದು ರೋಹಿತ್ ಶರ್ಮಾ ಅವರ ಸನಿಹಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಮೈದಾನದ ಸಿಬ್ಬಂದಿಗಳು ಆತನನ್ನು ಹಿಡಿದು ಮೈದಾನದ ಆಚೆಗೆ ಕಳುಹಿಸಿದ್ದಾರೆ.
ಪಾಕಿಸ್ತಾನ-ನ್ಯೂಜಿಲೆಂಡ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನವೆಂಬರ್ 9ರಂದು ನಡೆಯಲಿದೆ. ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ನವೆಂಬರ್ 10ರಂದು ನಡೆಯಲಿದೆ.
ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ.
ಸೂರ್ಯಕುಮಾರ್ ಯಾದವ್ ತಮ್ಮ ಉತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ, ಪಂದ್ಯದ ಆಟಗಾರ ಪ್ರಶಸ್ತಿಗೆ ಭಾಜನರಾದರು.
ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತ 71 ರನ್‌ಗಳ ಬೃಹತ್ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ.
14 ಓವರ್ ಮುಕ್ತಾಯಕ್ಕೆ ಜಿಂಬಾಬ್ವೆ 6 ವಿಕೆಟ್ ಕಳೆದುಕೊಂಡು 96 ರನ್ ಗಳಿಸಿದೆ.
9 ಓವರ್ ಮುಕ್ತಾಯಕ್ಕೆ ಜಿಂಬಾಬ್ವೆ 5 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿದೆ. ಮೊಹಮ್ಮದ್ ಶಮಿ 2 ವಿಕೆಟ್ ಪಡೆದರು.
7 ಓವರ್ ಮುಕ್ತಾಯಕ್ಕೆ ಜಿಂಬಾಬ್ವೆ 32 ರನ್ ಗಳಿಸಿದ್ದು 4 ವಿಕೆಟ್ ಕಳೆದುಕೊಂಡಿದೆ. ಹಾರ್ದಿಕ್ ಪಾಂಡ್ಯ ತಮ್ಮ ಮೊದಲನೇ ಓವರ್ ನಲ್ಲಿ ವಿಕೆಟ್ ಪಡೆದಿದ್ದಾರೆ.
6 ಓವರ್ ಮುಕ್ತಾಯಕ್ಕೆ ಜಿಂಬಾಬ್ವೆ 3 ವಿಕೆಟ್ ಕಳೆದುಕೊಂಡು 28 ರನ್ ಗಳಿಸಿದೆ. ತಮ್ಮ ಮೊದಲನೇ ಓವರ್ ನಲ್ಲಿ ಶಮಿ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
2 ಓವರ್ ಅಂತ್ಯಕ್ಕೆ ಜಿಂಬಾಬ್ವೆ 2 ವಿಕೆಟ್ ನಷ್ಟಕ್ಕೆ 3 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ.
187 ರನ್‌ಗಳ ಬೃಹತ್ ಮೊತ್ತವನ್ನು ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿದೆ.ಮೊದಲನೇ ಓವರ್ ಅಂತ್ಯಕ್ಕೆ ರನ್ ಗಳಿಸದೆ ಒಂದು ವಿಕೆಟ್ ಕಳೆದುಕೊಂಡಿದೆ.
2022ರ ಕ್ಯಾಲೆಂಡರ್ ವರ್ಷದಲ್ಲಿ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ 1000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.
20 ಓವರ್ ಅಂತ್ಯಕ್ಕೆ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿದೆ. ಸೂರ್ಯಕುಮಾರ್ ಯಾದವ್ 23 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.
18 ಓವರ್ ಮುಕ್ತಾಯಕ್ಕೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿದೆ.
35 ಎಸೆತಗಳಲ್ಲಿ 51 ರನ್ ಗಳಿಸಿದ ಕೆಎಲ್ ರಾಹುಲ್ ಅರ್ಧಶತಕ ಗಳಿಸಿ ಔಟ್ ಆಗಿದ್ದಾರೆ. 12.2 ಓವರ್ ಗಳಲ್ಲಿ ಟೀಂ ಇಂಡಿಯಾ 95 ರನ್ ಗಳಸಿದೆ.
12 ಓವರ್ ಮುಕ್ತಾಯಕ್ಕೆ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿದೆ.
25 ಎಸೆತಗಳಲ್ಲಿ 26 ರನ್ ಗಳಿಸಿ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ.
9 ಓವರ್ ಮುಕ್ತಾಯಕ್ಕೆ ಟೀಂ ಇಂಡಿಯಾ ಒಂದು ವಿಕೆಟ್ ಕಳೆದುಕೊಂಡು 71 ರನ್ ಗಳಿಸಿದೆ.
ಜಿಂಬಾಬ್ವೆ ಆಡುವ 11ರ ಬಳಗ: ವೆಸ್ಲಿ ಮಾಧೆವೆರೆ, ಕ್ರೇಗ್ ಎರ್ವಿನ್ (ನಾಯಕ), ರೆಗಿಸ್ ಚಕಬ್ವಾ (ವಿಕೆಟ್ ಕೀಪರ್), ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ಟೋನಿ ಮುನ್ಯೊಂಗಾ, ರಯಾನ್ ಬರ್ಲ್, ಟೆಂಡೈ ಚಟಾರಾ, ರಿಚರ್ಡ್ ನಾಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ.
ಭಾರತದ ಆಡುವ 11ರ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಜಿಂಬಾಬ್ವೆ ವಿರುದ್ಧ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ನವೆಂಬರ್ 6ರಂದು ಅಡಿಲೇಡ್ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್ 12ರ ನಿರ್ಣಾಯಕ ಪಂದ್ಯದಲ್ಲಿ ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ತಂಡದ ವಿರುದ್ಧ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ನಿರಾಯಾಸವಾಗಿ ಗೆದ್ದು ನಾಲ್ಕನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿತು.
ಬಾಂಗ್ಲಾದೇಶ ನೀಡಿರುವ 128 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಪಾಕಿಸ್ತಾನ 15.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ.
ಬಾಂಗ್ಲಾದೇಶ ನೀಡಿರುವ 128 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಪಾಕಿಸ್ತಾನ 11.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಿದೆ.
ಬಾಂಗ್ಲಾದೇಶ ನೀಡಿರುವ 128 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಪಾಕಿಸ್ತಾನ 3 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 15 ರನ್ ಗಳಿಸಿದೆ.
ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿದ್ದು, ಎದುರಾಳಿ ಪಾಕಿಸ್ತಾನಕ್ಕೆ 128 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿದೆ.
ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್ ಮಾಡುತ್ತಿರುವ ಬಾಂಗ್ಲಾದೇಶ 16 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿದೆ.
ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್ ಮಾಡುತ್ತಿರುವ ಬಾಂಗ್ಲಾದೇಶ 17 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ.
ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್ ಮಾಡುತ್ತಿರುವ ಬಾಂಗ್ಲಾದೇಶ 13.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿದೆ.
ಟಿ20 ವಿಶ್ವಕಪ್ ಸೂಪರ್ 12ರ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್ ಮಾಡುತ್ತಿರುವ ಬಾಂಗ್ಲಾದೇಶ 11 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಿದೆ.
ಬಾಂಗ್ಲಾದೇಶ ಆಡುವ 11ರ ಬಳಗ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್.
ಪಾಕಿಸ್ತಾನ ಆಡುವ 11ರ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಮೊಹಮ್ಮದ್ ವಾಸಿಮ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ.
ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಭಾನುವಾರ ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾವು ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ 13 ರನ್‌ಗಳಿಂದ ಸೋತಿದ್ದರಿಂದ ಜಿಂಬಾಬ್ವೆ ವಿರುದ್ಧ ಆಡುವ ಮೊದಲೇ ಭಾರತ ತಂಡ ಸೆಮಿಫೈನಲ್‌ಗೆ ಅರ್ಹತೆ ಗಳಿಸಿತು.
159 ರನ್‌ಗಳ ಸುಲಭ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 145 ರನ್ ಗಳಿಸಿ, 13 ರನ್‌ಗಳಿಂದ ಸೋಲು ಕಂಡಿತು.
ಅಡಿಲೇಡ್ ಕ್ರಿಕೆಟ್ ಮೈದಾನದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ನೆದರ್ಲ್ಯಾಂಡ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು.
ಅಡಿಲೇಡ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 12ರ ನಿರ್ಣಾಯಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲ್ಯಾಂಡ್ಸ್ ಅಚ್ಚರಿ ಗೆಲುವು ಸಾಧಿಸಿದೆ.
ನೆದರ್ಲ್ಯಾಂಡ್ಸ್ ನೀಡಿದ 159 ರನ್ ಗುರಿ ಬೆನ್ನತ್ತಿರುವ ದಕ್ಷಿಣ ಆಫ್ರಿಕಾ 15.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದೆ.
ನೆದರ್ಲ್ಯಾಂಡ್ಸ್ ನೀಡಿದ 159 ರನ್ ಗುರಿ ಬೆನ್ನತ್ತಿರುವ ದಕ್ಷಿಣ ಆಫ್ರಿಕಾ 9 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿದೆ.
ನೆದರ್ಲ್ಯಾಂಡ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 158 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 159 ರನ್ ಗುರಿ ನೀಡಿದೆ.
ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಭಾನುವಾರ ನೆದರ್ಲೆಂಡ್ಸ್ ವಿರುದ್ಧ ಗೆದ್ದು ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಟಿ20 ವಿಶ್ವಕಪ್‌ನಲ್ಲಿ ಭಾನುವಾರ ಮೂರು ಪಂದ್ಯಗಳು ನಡೆಯಲಿದ್ದು ಗ್ರೂಪ್ 2ರ ಪಂದ್ಯಗಳು ಇದಾಗಿರಲಿದೆ. ಈ ಮೂಲಕ ಸೂಪರ್ 12 ಹಂತಕ್ಕೆ ತೆರೆಬೀಳಲಿದೆ. ಭಾನುವಾರದ ಮೂರು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ನೆದರ್ಲೆಂಡ್ಸ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಈ ಪಂದ್ಯದ ಫಲಿತಾಂಶ ಆ ತಂಡದ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಸೆಮಿಫೈನಲ್ ಟಿಕೆಟ್ ಖಚಿತಪಡಿಸಿಕೊಳ್ಳಲು ದಕ್ಷಿಣ ಆಫ್ರಿಕಾ ತಂಡಕ್ಕೆ ಮಹತ್ವದ್ದಾಗಿದೆ.
ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಅಂತಿಮ ಪಂದ್ಯ ಭಾನುವಾರ ನಡೆಯಲಿದ್ದು ಭಾರತ ಹಾಗೂ ಜಿಂಬಾಬ್ವೆ ನಡುವಿನ ಕದನದ ಮೂಲಕ ಈ ಮಹತ್ವದ ಹಂತದ ಸೆಣೆಸಾಟಕ್ಕೆ ತೆರೆ ಬೀಳಲಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದರೆ ಸೆಮಿಫೈನಲ್‌ಗೆ ಪ್ರವೇಶಿಸುವ ಕಾರಣ ಟೀಮ್ ಇಂಡಿಯಾ ಪಾಲಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಸಂದರ್ಭದಲ್ಲಿ, ಕಾರ್ತಿಕ್ ವಿರಾಟ್ ಜೊತೆಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ, "ಯಾರೂ ನಂಬದಿರುವಾಗ ಅವನು ನಂಬುವವನು! ನಿಮಗೆ ಜನ್ಮದಿನದ ಶುಭಾಶಯಗಳು."ಎಂದು ಬರೆದಿದ್ದಾರೆ.
ಇಂಗ್ಲೆಂಡ್ ಪರವಾಗಿ ಬೆನ್‌ಸ್ಟೋಕ್ಸ್ ಮತ್ತು ಅಲೆಕ್ಸ್ ಹೇಲ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.
ಶ್ರೀಲಂಕಾ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್. ಈ ಬಾರಿ ವಿಶ್ವಕಪ್ ಟೂರ್ನಿಯಿಂದ ಆಸ್ಟ್ರೇಲಿಯಾ ಹೊರಕ್ಕೆ.
12 ಓವರ್ ಗಳ ಮುಕ್ತಾಯಕ್ಕೆ ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 110 ರನ್ ಗಳಿಸಿದೆ. ಲಿಯಾಮ್ ಲಿವಿಂಗ್‌ಸ್ಟೋನ್ 4 ರನ್ ಗಳಿಸಿ ಔಟಾಗಿದ್ದಾರೆ.
11 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ.
11 ಓವರ್ ಅಂತ್ಯಕ್ಕೆ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿದೆ.
6 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 70 ರನ್ ಗಳಿಸಿದೆ.
2 ಓವರ್ ಮುಕ್ತಾಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 15 ರನ್ ಗಳಿಸಿದೆ.
20 ಓವರ್ ಮುಕ್ತಾಯವಾಗಿದ್ದು ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿದೆ. ಇಂಗ್ಲೆಂಡ್ ಗೆಲುವಿಗೆ 142 ರನ್ ಗಳಿಸಬೇಕಿದೆ. ಇಂಗ್ಲೆಂಡ್ ಗೆದ್ದರೆ ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದ್ದು, ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬೀಳಲಿದೆ.
19 ಓವರ್ ಮುಕ್ತಾಯಕ್ಕೆ ಶ್ರೀಲಂಕಾ 5 ವಿಕೆಟ್ ಕಳೆದುಕೊಂಡು 135 ರನ್ ಕಲೆಹಾಕಿದೆ.
11 ಓವರ್ ಮುಕ್ತಾಯಕ್ಕೆ ಶ್ರೀಲಂಕಾ 3 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿದೆ. ಚರಿತ್ ಅಸಲಂಕಾ 8 ರನ್ ಗಳಿಸಿ ಔಟಾಗಿದ್ದಾರೆ.
10 ಓವರ್ ಮುಕ್ತಾಯಕ್ಕೆ ಶ್ರೀಲಂಕಾ 2 ವಿಕೆಟ್ ನಷ್ಟಕ್ಕೆ 80 ರನ್ ಗಳಿಸಿದೆ.
9 ಓವರ್ ಮುಕ್ತಾಯಕ್ಕೆ ಶ್ರೀಲಂಕಾ 2 ವಿಕೆಟ್ ನಷ್ಟಕ್ಕೆ 75 ರನ್ ಗಳಿಸಿದೆ. ಧನಂಜಯ ಡಿಸಿಲ್ವ 9 ರನ್ ಗಳಿಸಿ ಔಟಾಗಿದ್ದಾರೆ.
7 ಓವರ್ ಮುಕ್ತಾಯಕ್ಕೆ ಶ್ರೀಲಂಕಾ 1 ವಿಕೆಟ್ ನಷ್ಟಕ್ಕೆ 65 ರನ್ ಕಲೆಹಾಕಿದೆ.
ಪವರ್ ಪ್ಲೇ ಓವರ್‌ಗಳಲ್ಲಿ ಶ್ರೀಲಂಕಾ 1 ವಿಕೆಟ್ ಕಳೆದುಕೊಂಡು 54 ರನ್ ಕಲೆಹಾಕಿದ್ದು, ಮೇಲುಗೈ ಸಾಧಿಸಿದೆ.
5 ಓವರ್ ಮುಕ್ತಾಯಕ್ಕೆ ಶ್ರೀಲಂಕಾ 1 ವಿಕೆಟ್ ನಷ್ಟಕ್ಕೆ 52 ರನ್ ಕಲೆಹಾಕಿದೆ.
ಶ್ರೀಲಂಕಾದ ಮೊದಲ ವಿಕೆಟ್ ಪತನ, ಕುಸಾಲ್ ಮೆಂಡೀಸ್ 18ರನ್‌ಗಳಿಸಿ ಔಟ್
3 ಓವರ್ ಮುಕ್ತಾಯಕ್ಕೆ ಶ್ರೀಲಂಕಾ ವಿಕೆಟ್ ನಷ್ಟವಿಲ್ಲದೆ 32 ರನ್ ಕಲೆಹಾಕಿದೆ.
1 ಓವರ್ ಮುಕ್ತಾಯಕ್ಕೆ ಶ್ರೀಲಂಕಾ ವಿಕೆಟ್ ನಷ್ಟವಿಲ್ಲದೆ 9 ರನ್ ಕಲೆಹಾಕಿದೆ.
ಶ್ರೀಲಂಕಾ ತಂಡವು ಕೇವಲ ಒಂದು ಬದಲಾವಣೆ ಮಾಡಿದ್ದು, ಕರುಣರತ್ನೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಕಳೆದ ಪಂದ್ಯದ ಆಟಗಾರರನ್ನೇ ಮುಂದುವರಿಸಿದ್ದು, ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ್ ತೀಕ್ಷಣ, ಲಹಿರು ಕುಮಾರ, ಕಸುನ್ ರಜಿತ
ಇಂಗ್ಲೆಂಡ್ ಪ್ಲೇಯಿಂಗ್ 11: ಜೋಸ್ ಬಟ್ಲರ್(ನಾಯಕ ಮತ್ತು ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಸ್ಯಾಮ್ ಕುರಾನ್, ಡೇವಿಡ್ ಮಲನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 12 ಅತ್ಯಂತ ಮಹತ್ವದಲ್ಲಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಶನಿವಾರ ನಡೆಯಲಿರುವ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಶ್ರೀಲಂಕಾ ಮಣಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್/ಚಾಮಿಕ ಕರುಣಾರತ್ನೆ, ಲಹಿರು ಕುಮಾರ, ಕಸುನ್ ರಜಿತ
ಇಂಗ್ಲೆಂಡ್ ಸಂಭಾವ್ಯ ಪ್ಲೇಯಿಂಗ್ 11: ಜೋಸ್ ಬಟ್ಲರ್ (ನಾಯಕ & ವಿಕಡೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಇಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದ್ದು, ಸೆಮಿಫೈನಲ್ ಪ್ರವೇಶಕ್ಕೆ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲಲೇಬೇಕಿದೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ.
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ನವೆಂಬರ್ 5 ಶನಿವಾರದಂದು 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಮುನ್ನಾ ದಿನವೇ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ವಿರಾಟ್ ಕೊಹ್ಲಿಗೆ ಶುಭಹಾರೈಸಿದ್ದಾರೆ. ಅಡಿಲೇಡ್ ಓವಲ್‌ನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 4 ರನ್‌ಗಳ ಅಂತರದಿಂದ ರೋಚಕವಾಗಿ ಗೆಲುವು ಸಾಧಿಸಿದ ಬಳಿಕ ಆಸಿಸ್ ಆಲ್‌ರೌಂಡರ್ ಟೀಮ್ ಇಂಡಿಯಾ ಮಾಜಿ ನಾಯಕನಿಗೆ ಶುಭಹಾರೈಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಲ್ಲಿ ಮಳೆಯಿಂದ ಅಡ್ಡಿಯಾಗುವ ಪಂದ್ಯದಲ್ಲಿ ಫಲಿತಾಂಶವನ್ನು ಪಡೆಯುವ ನಿಯಮದಲ್ಲಿ ಬದಲಾವಣೆ ಮಾಡಿಕೊಂಡಿದೆ. ಮಳೆಯಿಂದಾಗಿ ಪಂದ್ಯಕ್ಕೆ ಅಡ್ಡಿಯುಂಟಾದಾಗ ಫಲಿತಾಂಶವನ್ನು ಪಡೆಯಬೇಕಾದರೆ ಎರಡು ತಂಡಗಳು ಕೂಡ ಕನಿಷ್ಠ 10 ಓವರ್‌ಗಳನ್ನು ಪೂರೈಸಿರಬೇಕು ಎಂದು ನಿಯಮದಲ್ಲಿ ಬದಲಾವಣೆ ಮಾಡಿಕೊಂಡಿದೆ. ಲೀಗ್ ಹಂತದಲ್ಲಿ ಎರಡು ತಂಡಗಳು ಕನಿಷ್ಠ 5 ಓವರ್‌ಗಳನ್ನು ಪೂರೈಸಿದ್ದರೆ ಫಲಿತಾಂಶ ಪಡೆಯುವ ಅವಕಾಶವಿತ್ತು.
ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ ತಂಡದ ಸೋಲಿನ ಬಳಿಕ ನಾಯಕ ಮೊಹಮ್ಮದ್ ನಬಿ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶನಿವಾರ ನ.05ರಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 12ನ 39ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶಕ್ಕೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.
ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ 7 ಪಾಯಿಂಟ್ಸ್ ಹೊಂದಿದ್ದರೂ , ನೆಟ್ ರನ್‌ರೇಟ್‌ನಲ್ಲಿ ಹಿಂದಿರುವ ಕಾರಣ ಸೆಮಿಫೈನಲ್ ಪ್ರವೇಶ ಕಷ್ಟಸಾಧ್ಯವಾಗಿದೆ. ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೋಲನ್ನ ಅನುಭವಿಸಿದ್ರೆ ಮಾತ್ರ ಆಸಿಸ್ ಸೆಮಿಫೈನಲ್ ಪ್ರವೇಶಿಸಲಿದೆ.
ಅಫ್ಘಾನಿಸ್ತಾನ ವಿರುದ್ಧ ಗೆಲ್ಲುವ ಮೂಲಕ ಆಸ್ಟ್ರೇಲಿಯಾ 7 ಪಾಯಿಂಟ್ಸ್ ಕಲೆಹಾಕಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೇರಿದೆ. ಆದ್ರೆ ನೆಟ್ ರನ್‌ರೇಟ್‌ನಲ್ಲಿ ಹಿಂದಿರುವ ಆಸ್ಟ್ರೇಲಿಯಾ -0.173 ರಷ್ಟಿದೆ.
ಟಿ20 ವಿಶ್ವಕಪ್‌ನಲ್ಲಿ ಇಂದು ಆಸ್ಟ್ರೇಲಿಯಾಗೆ ನಿರ್ಣಾಯಕವಾಗಿದ್ದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸೋಲಿನ ಅಂಚಿಗೆ ತಲುಪಿ ಕಡೆಗೂ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆಲ್‌ರೌಂಡರ್ ರಶೀದ್ ಖಾನ್ ಅಂತಿಮ ಹಂತದಲ್ಲಿ ಅಮೋಗ ಹೋರಾಟವನ್ನು ಪ್ರದರ್ಶಿಸಿದ್ದು ತಂಡವನ್ನ ಗೆಲುವಿನ ಸನಿಹಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು ಕೂಡ ಗೆಲುವಿನ ದಡ ದಾಟಲು ಸಾಧ್ಯವಾಗಲಿಲ್ಲ
16 ಓವರ್‌ಗಳ ಅಂತ್ಯದಲ್ಲಿ ಅಫ್ಘಾನಿಸ್ತಾನ ತಡ 112 ರನ್‌ಗಳಿಸಿದ್ದು 6 ವಿಕೆಟ್ ಕಳೆದುಕೊಂಡಿದೆ. ಹೀಗಾಗಿ ಅಂತಿಮ 24 ಎಸೆತಗಳಲ್ಲಿ ಗೆಲ್ಲಲು 57 ರನ್‌ಗಳ ಕಠಿಣ ಸವಾಲು ಅಫ್ಘಾನಿಸ್ತಾನ ತಂಡದ ಮುಂದಿದೆ.
ಆಸ್ಟ್ರೇಲಿಯಾ ತಂಡ ನೀಡಿರುವ 169 ರನ್‌ಗಳ ಗುರಿಯನ್ನು ಅಫ್ಘಾನಿಸ್ತಾನ ತಂಡ ಬೆನ್ನಟ್ಟಲು ಆರಂಭಿಸಿದ್ದು ಮೊದಲ ಐದು ಓವರ್‌ಗಳಲ್ಲಿ 38 ರನ್‌ಗಳಿಸಿದ್ದು ಒಂದು ವಿಕೆಟ್ ಕಳೆದುಕೊಂಡಿದೆ.
ಅಫ್ಘಾನಿಸ್ತಾನದ ಮೊದಲ ವಿಕೆಟ್ ಪತನ, ಉಸ್ಮಾನ್ ಘಾನಿ 2ರನ್‌ಗೆ ಔಟ್
ಅಫ್ಘಾನಿಸ್ತಾನ ಪರ ನವೀನ್ ಉಲ್ ಹಕ್ 3, ಫಜಲಕ್ ಫಾರೂಕಿ 2, ಮುಜೀಬ್ ಉರ್ ರಹಮಾನ್ ಹಾಗೂ ರಶೀದ್ ಖಾನ್‌ಗೆ ತಲಾ 1 ವಿಕೆಟ್
ಆಸ್ಟ್ರೇಲಿಯಾ 20 ಓವರ್‌ಗಳ ಮುಕ್ತಾಯಕ್ಕೆ 8 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿದ್ದು, ಅಫ್ಘಾನಿಸ್ತಾನ ಗೆಲುವಿಗೆ 169ರನ್ ಗುರಿ ನೀಡಿದೆ.
29 ಎಸೆತಗಳಲ್ಲಿ 50ರನ್ ಕಲೆಹಾಕಿದ ಗ್ಲೆನ್ ಮ್ಯಾಕ್ಸ್‌ವೆಲ್
ಆಸ್ಟ್ರೇಲಿಯಾದ ಏಳನೇ ವಿಕೆಟ್ ಪತನ, ಕೇನ್ ರಿಚರ್ಡ್ಸನ್ 1ರನ್‌ಗೆ ರನೌಟ್
ಆಸ್ಟ್ರೇಲಿಯಾದ ಆರನೇ ವಿಕೆಟ್ ಪತನ, ಮ್ಯಾಥ್ಯೂ ವೇಡ್ 6ರನ್‌ಗಳಿಸಿ ಔಟ್
17 ಓವರ್ ಮುಕ್ತಾಯಕ್ಕೆ ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ 146 ರನ್ ಕಲೆಹಾಕಿದೆ.
ಆಸ್ಟ್ರೇಲಿಯಾ 8 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 64 ರನ್
ಆಸ್ಟ್ರೇಲಿಯಾದ 3ನೇ ವಿಕೆಟ್ ಪತನ, ಸ್ಟೀವನ್ ಸ್ಮಿತ್ 4ರನ್‌ಗೆ ಔಟ್, 6 ಓವರ್ ಮುಕ್ತಾಯಕ್ಕೆ ಆಸಿಸ್ 3 ವಿಕೆಟ್ ನಷ್ಟಕ್ಕೆ 54ರನ್
ಆಸ್ಟ್ರೇಲಿಯಾದ 2ನೇ ವಿಕೆಟ್ ಪತನ, ಸ್ವಿಚ್ ಹಿಟ್ ಹೊಡೆಯಲು ಹೋಗಿ ಡೇವಿಡ್ ವಾರ್ನರ್ 25ರನ್‌ಗೆ ಔಟ್
ಆಸ್ಟ್ರೇಲಿಯಾ 4 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 38 ರನ್. ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಅಜೇಯ 23, ಮಿಚೆಲ್ ಮಾರ್ಷ್ ಅಜೇಯ 9ರನ್
ಆಸ್ಟ್ರೇಲಿಯಾದ ಮೊದಲ ವಿಕೆಟ್ ಪತನ, ಕ್ಯಾಮರೂನ್ ಗ್ರೀನ್ 3 ರನ್‌ಗಳಿಸಿ ಔಟ್
ಅಫ್ಘಾನಿಸ್ತಾನ playing 11: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ಉಸ್ಮಾನ್ ಘನಿ, ಇಬ್ರಾಹಿಂ ಝದ್ರಾನ್, ಗುಲ್ಬದಿನ್ ನೈಬ್, ದರ್ವಿಶ್ ರಸೂಲಿ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ(ನಾಯಕ), ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಆಸ್ಟ್ರೇಲಿಯಾ playing 11: ಕ್ಯಾಮರೂನ್ ಗ್ರೀನ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್(ನಾಯಕ ಮತ್ತು ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಕೇನ್ ರಿಚರ್ಡ್‌ಸನ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಅಫ್ಘಾನಿಸ್ತಾನದ ನಾಯಕ ಮೊಹಮ್ಮದ್ ನಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಆ್ಯರೋನ್ ಫಿಂಚ್ ಅನುಪಸ್ಥಿತಿಯಲ್ಲಿ ಮ್ಯಾಥ್ಯೂ ವೇಡ್ ನಾಯಕತ್ವ ವಹಿಸಿರುವ ಆಸ್ಟ್ರೇಲಿಯ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಾಯಕ ಕೇನ್ ವಿಲಿಯಮ್ಸನ್ 35 ಎಸೆತಗಳಲ್ಲಿ 61 ರನ್‌ಗಳ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. 186 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಐರ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಲಷ್ಟೆ ಶಕ್ತವಾಯಿತು.
ಅಡಿಲೇಡ್‌ನಲ್ಲಿ ನಡೆದ ಟಿ20 ವಿಶ್ವಕಪ್ 2022 ಸೂಪರ್ 12ರ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಐರ್ಲೆಂಡ್ ತಂಡದ ವಿರುದ್ಧ 35 ರನ್‌ಗಳ ಅಂತರದಿಂದ ಗೆಲುವು ಸಾಧಿಸಿ ಗ್ರೂಪ್ 1ರಲ್ಲಿ ಅಗ್ರಸ್ಥಾನಿಯಾಗಿ ಅಂತಿಮ ನಾಲ್ಕರ ಘಟ್ಟ ತಲುಪಿತು.
ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಶುಕ್ರವಾರ (ನವೆಂಬರ್ 4) ಐರ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡ ಮೊದಲ ತಂಡವೆನಿಸಿತು.
ನ್ಯೂಜಿಲೆಂಡ್ ನೀಡಿರುವ 186 ರನ್ ಗುರಿ ಬೆನ್ನತ್ತಿರುವ ಐರ್ಲೆಂಡ್ 17 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿದೆ.
ನ್ಯೂಜಿಲೆಂಡ್ ನೀಡಿರುವ 186 ರನ್ ಗುರಿ ಬೆನ್ನತ್ತಿರುವ ಐರ್ಲೆಂಡ್ 15.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ.
ನ್ಯೂಜಿಲೆಂಡ್ ನೀಡಿರುವ 186 ರನ್ ಗುರಿ ಬೆನ್ನತ್ತಿರುವ ಐರ್ಲೆಂಡ್ 13 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದೆ.
ನ್ಯೂಜಿಲೆಂಡ್ ನೀಡಿರುವ 186 ರನ್ ಗುರಿ ಬೆನ್ನತ್ತಿರುವ ಐರ್ಲೆಂಡ್ 10.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಿದೆ.
ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ 35 ಎಸೆತಗಳಲ್ಲಿ 61 ರನ್ ಗಳಿಸಿದರು.
ಐರ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿದ್ದು, ಐರ್ಲೆಂಡ್ ತಂಡಕ್ಕೆ 186 ರನ್ ಗುರಿ ನೀಡಿದೆ.
ಐರ್ಲೆಂಡ್ ಬೌಲರ್ ಜೋಶ್ ಲಿಟಲ್ ಅವರು ನ್ಯೂಜಿಲೆಂಡ್ ವಿರುದ್ಧ ಹ್ಯಾಟ್ರಿಕ್ ಸಾಧನೆ ಮಾಡಿದರು. ನ್ಯೂಜಿಲೆಂಡ್ 19 ಓವರ್‌ಗಳ ನಂತರ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದೆ.
ಐರ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ನ್ಯೂಜಿಲೆಂಡ್ 18.2 ಓವರ್‌ಗಳ ನಂತರ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ.
ಐರ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ನ್ಯೂಜಿಲೆಂಡ್ 12 ಓವರ್‌ಗಳ ನಂತರ 2 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ.
ಐರ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ನ್ಯೂಜಿಲೆಂಡ್ 9.3 ಓವರ್‌ಗಳ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದೆ.
ಟಿ20 ವಿಶ್ವಕಪ್ 2022 ಸೂಪರ್ 12ರ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ನ್ಯೂಜಿಲೆಂಡ್ 2 ಓವರ್‌ಗಳ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 11 ರನ್ ಗಳಿಸಿದೆ.
ಟಿ20 ವಿಶ್ವಕಪ್ 2022 ಸೂಪರ್ 12ರ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಂಡ್ರ್ಯೂ ಬಾಲ್ಬಿರ್ನಿ ನಾಯಕತ್ವದ ಐರ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲಿದೆ.
ನ್ಯೂಜಿಲೆಂಡ್ ತಂಡವು ಐರ್ಲೆಂಡ್ ವಿರುದ್ಧ ಅಡಿಲೇಡ್‌ನಲ್ಲಿ ಶುಕ್ರವಾರ (ನವೆಂಬರ್ 4) ಟಿ20 ವಿಶ್ವಕಪ್ 2022ರ ಸೂಪರ್ ಓವರ್ 12ರ ಪಂದ್ಯವಾಡಲಿದೆ.
ಪಿಚ್ ರಿಪೋರ್ಟ್: ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲವನ್ನು ನೀಡುವ ಪಿಚ್ ಆಗಿದೆ. ಬ್ಯಾಟರ್‌ಗಳಿಗೆ ಚೆಂಡು ನೇರವಾಗಿ ಬ್ಯಾಟ್‌ಗೆ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ.
ನ್ಯೂಜಿಲೆಂಡ್ vs ಐರ್ಲೆಂಡ್ ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್: ಪಂದ್ಯದ ದಿನ ಅಡಿಲೇಡ್‌ನಲ್ಲಿ ಸಂಪೂರ್ಣ ಆಟ ನಡೆಯಲು ಪೂರಕವಾದ ವಾತಾವರಣವಿರಲಿದೆ. ತಾಪಮಾನ 12ರಿಂದ 19 ಡಿಗ್ರಿ ಸೆಲ್ಸಿಯಸ್‌ನ ನಡುವೆ ಇರುವ ಸಾಧ್ಯತೆಯಿದ್ದು ತೇವಾಂಶಯುಕ್ತ ವಾತಾವರಣವಿರಲಿದೆ.
ನ್ಯೂಜಿಲೆಂಡ್ vs ಐರ್ಲೆಂಡ್: ಪಂದ್ಯದ ಸಮಯ ನೇರಪ್ರಸಾರ ಮಾಹಿತಿ ನ್ಯೂಜಿಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಶುಕ್ರವಾರ ಅಡಿಲೇಡ್‌ನ ಅಡಿಲೇಡ್ ಓವಲ್‌ನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಪಂದ್ಯಗಳು ಅಂತಿಮ ಘಟ್ಟವನ್ನು ತಲುಪಿದೆ. ಎಲ್ಲಾ ತಂಡಗಳಿಗೂ ಇನ್ನು ಕೇವಲ ಒಂದೊಂದು ಪಂದ್ಯಗಳು ಮಾತ್ರವೇ ಬಾಕಿಯಿದೆ. ಈ ಹಂತದವರೆಗೂ ಯಾವ ತಂಡಗಳು ಕೂಡ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ಗಮನಾರ್ಹ ಅಂಶ. ಸಾಕಷ್ಟು ಪೈಪೋಟಿಯ ಪಂದ್ಯಗಳು ನಡೆಯುತ್ತಿದ್ದು ಕ್ರಿಕೆಟ್ ಅಭಿಮಾನಿಗಳ ಲೆಕ್ಕಾಚಾರಗಳು ತಲೆಕೆಳಗಾಗುತ್ತಿದೆ. ಶುಕ್ರವಾರ ಗ್ರೂಪ್ 1ರ ಪಂದ್ಯಗಳು ಎರಡು ಪಂದ್ಯಗಳು ನಡೆಯಲಿದ್ದು ಎರಡು ಪಂದ್ಯಗಳು ಕೂಡ ಸಾಕಷ್ಟು ಮಹತ್ವದ್ದಾಗಿದೆ. ಈ ಪೈಕಿ ಮೊದಲಿಗೆ ನ್ಯೂಜಿಲೆಂಡ್ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ ತಲಾ 5 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾಗೆ ಶುಕ್ರವಾರ ಕೊನೆಯ ಪಂದ್ಯವಾಗಿದ್ದು, ಸೆಮಿಫೈನಲ್ ಪ್ರವೇಶಿಸಲು ಉಭಯ ತಂಡಗಳು ಗೆಲ್ಲಲೇಬೇಕಿದೆ. ಅದ್ರಲ್ಲೂ ಆಸ್ಟ್ರೇಲಿಯಾ ಗೆಲುವಿನ ಜೊತೆಗೆ ಹೆಚ್ಚಿನ ರನ್‌ರೇಟ್ ಮೂಲಕ ಗೆಲುವು ಸಂಪಾದಿಸಬೇಕಿದೆ.
ಶುಕ್ರವಾರ (ನ.04) ಎರಡು ಮಹತ್ವದ ಸೂಪರ್ 12 ಪಂದ್ಯಗಳಿಗೆ ಅಡಿಲೇಡ್ ಓವಲ್ ಮೈದಾನ ಸಾಕ್ಷಿಯಾಗಲಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಐರ್ಲೆಂಡ್ ಕಣಕ್ಕಿಳಿದ್ರೆ, ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ.
ಟೀಂ ಇಂಡಿಯಾ ಗ್ರೂಪ್ 2ನಲ್ಲಿ 6 ಪಾಯಿಂಟ್ಸ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದು, ಕೊನೆಯ ಮೂರು ಸ್ಥಾನದಲ್ಲಿ ಬಾಂಗ್ಲಾದೇಶ, ಜಿಂಬಾಬ್ವೆ ಮತ್ತು ನೆದರ್ಲ್ಯಾಂಡ್ಸ್ ಸ್ಥಾನ ಪಡೆದಿವೆ.
ಪಂದ್ಯ ಸೋತರು ಸಹ ದ.ಆಫ್ರಿಕಾ ತಂಡವು ಉತ್ತಮ ನೆಟ್‌ರನ್‌ರೇಟ್ ಹೊಂದಿದ್ದು, 4 ಪಂದ್ಯಗಳಲ್ಲಿ 2 ಗೆಲುವು, 1ಸೋಲು ಹಾಗೂ ಹಾಗೂ 1 ಫಲಿತಾಂಶವಿಲ್ಲದೆ 5 ಪಾಯಿಂಟ್ಸ್ ಕಲೆಹಾಕಿದೆ. ನೆಟ್ ರನ್‌ರೇಟ್ +1.402ರಷ್ಟಿದೆ.
ಪಾಕಿಸ್ತಾನ ತಂಡವು ಪಾಯಿಂಟ್ಸ್ ಟೇಬಲ್‌ನಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ. ಆಡಿರುವ 4 ಪಂದ್ಯಗಳಲ್ಲಿ ತಲಾ 2 ಗೆಲುವು ಮತ್ತು ಸೋಲಿನ ಮೂಲಕ 4 ಪಾಯಿಂಟ್ಸ್ ಕಲೆಹಾಕಿದ್ದು, + 1.085 ನೆಟ್ ರನ್‌ರೇಟ್ ಹೊಂದಿದೆ.
185 ರನ್‌ಗಳ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಮಳೆಯಿಂದಾಗಿ 14 ಓವರ್ ಗಳಲ್ಲಿ 142 ರನ್ ಗುರಿ ನೀಡಲಾಯಿತು. 14 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 108 ರನ್ ಗಳಿಸುವ ಮೂಲಕ 33 ರನ್‌ಗಳ ಸೋಲನುಭವಿಸಿತು.
ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 33 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಭಾರತದ ವಿರುದ್ಧದ ಪಂದ್ಯದಲ್ಲಿ ರೋಚಕ ಸೆಣೆಸಾಟದ ಹೊರತಾಗಿಯೂ ಅಂತಿಮ ಹಂತದಲ್ಲಿ ಸೋಲು ಅನುಭವಿಸಿದ್ದಕ್ಕೆ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಭಾರೀ ನೋವು ವ್ಯಕ್ತಪಡಿಸಿದ್ದಾರೆ. ಗೆಲುವಿನ ಸನಿಹಕ್ಕೆ ಬಂದರೂ ಗೆಲುವು ಸಾಧ್ಯವಾಗದ ಬಗ್ಗೆ ಶಕೀಬ್ ಅಲ್ ಹಸನ್ ಬೇಸರದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದ ನಂತರ, ಪಾಕಿಸ್ತಾನದ ಸೆಮಿಫೈನಲ್ ಹಾದಿ ಕಠಿಣವಾಗಿದೆ.
ಬುಧವಾರ ಅಡಿಲೇಡ್ ಓಬಲ್‌ನಲ್ಲಿ ನಡೆದ ಟಿ20 ವಿಶ್ವಕಪ್ 2022 ರ ಸೂಪರ್ 12 ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿದೆ. ಪಂದ್ಯದಲ್ಲಿ ಬಾಂಗ್ಲಾದೇಶ ಸೋಲನುಭವಿಸಿದರು, ಪಾಕಿಸ್ತಾನ ತಂಡಕ್ಕೆ ಮಾತ್ರ ಭಾರತದ ಜಯ ಭಾರಿ ನೋವುಂಟುಮಾಡಿದೆ.
ಭಾರತ ವಿರುದ್ಧ ಸೋತ ಬಾಂಗ್ಲಾದೇಶ 4 ಪಂದ್ಯಗಳಲ್ಲಿ 2 ಗೆಲುವು ಮತ್ತು 2 ಸೋಲಿನ ಮೂಲಕ 4 ಪಾಯಿಂಟ್ಸ್ ಜೊತೆಗೆ -1.282 ನೆಟ್ ರನ್‌ರೇಟ್ ಹೊಂದಿದೆ. ಕೊನೆಯ ಮೂರು ಸ್ಥಾನದಲ್ಲಿ ಜಿಂಬಾಬ್ವೆ 3 ಪಾಯಿಂಟ್ಸ್, ಪಾಕಿಸ್ತಾನ 2 ಪಾಯಿಂಟ್ಸ್ ಮತ್ತು ನೆದರ್ಲ್ಯಾಂಡ್ಸ್ 2 ಪಾಯಿಂಟ್ಸ್ ಮೂಲಕ ಕೊನೆಯ ಸ್ಥಾನದಲ್ಲಿವೆ.
ದ್ವಿತೀಯ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ 3 ಪಂದ್ಯಗಳಲ್ಲಿ 2 ಗೆಲುವು, 1 ಫಲಿತಾಂಶವಿಲ್ಲದೆ 5 ಪಾಯಿಂಟ್ಸ್ ಜೊತೆಗೆ +2.772 ನೆಟ್ ರನ್‌ರೇಟ್‌ನಲ್ಲಿ ಮುಂದಿದೆ.
ಟೀಂ ಇಂಡಿಯಾ ಬಾಂಗ್ಲಾ ವಿರುದ್ಧ ಗೆದ್ದ ಬಳಿಕ, ಸೂಪರ್ 12 ಗ್ರೂಪ್ 2 ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದೆ. ಆಡಿರುವ 4 ಪಂದ್ಯಗಳಲ್ಲಿ 3 ಗೆಲುವು ಮತ್ತು 1 ಸೋಲಿನ ಮೂಲಕ 6 ಪಾಯಿಂಟ್ಸ್ ಕಲೆಹಾಕಿದ್ದು, +0.746 ನೆಟ್ ರನ್‌ರೇಟ್ ಹೊಂದಿದೆ.
44 ಎಸೆತಗಳಲ್ಲಿ ಅಜೇಯ 64 ರನ್ ಕಲೆಹಾಕಿದ ವಿರಾಟ್ ಕೊಹ್ಲಿಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ ಲಭಿಸಿದೆ. ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ 3ನೇ ಅರ್ಧಶತಕ ದಾಖಲಿಸಿದ್ದಾರೆ.
ಬಾಂಗ್ಲಾದೇಶದ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿದ ಭಾರತ.
13 ಓವರ್ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ 6 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದೆ. ಹಾರ್ದಿಕ್ ಪಾಂಡ್ಯ ಒಂದೇ ಓವರ್ ನಲ್ಲಿ ಎರಡು ವಿಕೆಟ್ ಪಡೆದರು.
12 ಓವರ್ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ 4 ವಿಕೆಟ್ ಕಳೆದುಕೊಂಡು 101 ರನ್ ಗಳಿಸಿದೆ. ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ 13 ರನ್ ಗಳಿಸಿ ಔಟಾದರು.
11 ಓವರ್ ಮುಕ್ತಾಯಕ್ಕೆ ಬಾಂಗ್ಲಾದೇಶ 2 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿದೆ.
ಬಾಂಗ್ಲಾದೇಶದ ಎರಡನೇ ವಿಕೆಟ್ ಪತನವಾಗಿದೆ. ನಜ್ಮುಲ್ ಹೊಸೈನ್ ಶಾಂಟೊ 25 ಎಸೆತಗಳಲ್ಲಿ 21 ರನ್ ಗಳಿಸಿ ಔಟಾಗಿದ್ದಾರೆ.
8 ಓವರ್ ಗಳ ಮುಕ್ತಾಯಕ್ಕೆ ಬಾಂಗ್ಲಾದೇಶ 1 ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿದೆ.ಅರ್ಧಶತಕ ಗಳಿಸಿ ಉತ್ತಮ ಆಟವಾಡುತ್ತಿದ್ದ ಲಿಟ್ಟನ್ ದಾಸ್ ರನೌಟ್ ಆಗಿದ್ದಾರೆ.
ಭಾರತ-ಬಾಂಗ್ಲಾದೇಶದ ನಡುವಿನ ಪಂದ್ಯ ಮಳೆಯ ನಂತರ ಮತ್ತೆ ಆರಂಭವಾಗಿದೆ. ಬಾಂಗ್ಲಾದೇಶಕ್ಕೆ 16 ಓವರ್ ಗಳಲ್ಲಿ 151 ರನ್ ಗಳಿಸಬೇಕಾಗಿದೆ. ಬಾಂಗ್ಲಾ ಈಗಾಲೇ 7 ಓವರ್ ಗಳಲ್ಲಿ 66 ರನ್ ಗಳಿಸಿದ್ದು, ಗೆಲುವಿಗಾಗಿ ಇನ್ನು 9 ಓವರ್ ಗಳಲ್ಲಿ 85 ರನ್ ಗಳಿಸಬೇಕಾಗಿದೆ.
ಭಾರತ-ಬಾಂಗ್ಲಾದೇಶದ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. 7 ಓವರ್ ಗಳಲ್ಲಿ ಬಾಂಗ್ಲಾದೇಶ 66 ರನ್ ಗಳಿಸಿದೆ.
6 ಒವರ್ ಅಂತ್ಯಕ್ಕೆ ಬಾಂಗ್ಲಾದೇಶ ವಿಕೆಟ್ ನಷ್ಟವಿಲ್ಲದೆ 60 ರನ್ ಗಳಿಸಿದೆ. ಲಿಟ್ಟನ್ ದಾಸ್ 21 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.
185 ರನ್‌ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ ಉತ್ತಮ ಆರಂಭ ಪಡೆದುಕೊಂಡಿದೆ. 3 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದೆ.
ಭಾರತದ ಇನ್ನಿಂಗ್ಸ್ ಮುಕ್ತಾಯವಾಗಿದ್ದು, ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿದೆ.
18 ಓವರ್ ಅಂತ್ಯಕ್ಕೆ ಭಾರತ 5 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿದೆ. ದಿನೇಶ್ ಕಾರ್ತಿಕ್ 5 ಎಸೆತಗಳಲ್ಲಿ 7 ರನ್ ಗಳಿಸಿ ರನೌಟ್ ಆದರು.
ಹಾರ್ದಿಕ್ ಪಾಂಡ್ಯ 6 ಎಸೆತಗಳಲ್ಲಿ 5 ರನ್ ಗಳಿಸಿ ಔಟಾಗಿದ್ದಾರೆ. ಭಾರತ 16 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿದೆ.
ಭಾರತದ ಮೂರನೇ ವಿಕೆಟ್ ಪತನ, ಸೂರ್ಯಕುಮಾರ್ ಯಾದವ್ 18 ಎಸೆತಗಳಲ್ಲಿ 30 ರನ್ ಗಳಿಸಿ ಔಟಾಗಿದ್ದಾರೆ.
12 ಓವರ್ ಮುಕ್ತಾಯದ ಹಂತಕ್ಕೆ ಭಾರತ ತಂಡ ಎರಡು ವಿಕೆಟ್ ಕಳೆದುಕೊಂಡು 101 ರನ್ ಗಳಿಸಿದೆ.
ಕೆಎಲ್ ರಾಹುಲ್ ಭರ್ಜರಿ ಅರ್ಧಶತಕ ಗಳಿಸುವ ಮೂಲಕ ಫಾರ್ಮ್‌ಗೆ ಮರಳಿದ್ದಾರೆ. 32 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಿತ 50 ರನ್ ಗಳಿಸಿ ಔಟಾಗಿದ್ದಾರೆ.
ಭಾರತ ತಂಡ 6 ಓವರ್ ಗಳ ಮುಕ್ತಾಯಕ್ಕೆ ಒಂದು ವಿಕಟ್ ನಷ್ಟಕ್ಕೆ 37 ರನ್ ಗಳಿಸಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 8 ಎಸೆತಗಳಲ್ಲಿ 2 ರನ್ ಗಳಿಸಿ ಔಟಾಗಿದ್ದಾರೆ. ಭಾರತ 3.2 ಓವರ್ ಗಳಲ್ಲಿ 11 ರನ್ ಗಳಿಸಿದ್ದು ಒಂದು ವಿಕೆಟ್ ಕಳೆದುಕೊಂಡಿದೆ.
3 ಓವರ್ ಅಂತ್ಯಕ್ಕೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 11 ರನ್ ಗಳಿಸಿದೆ.
ಭಾರತ 2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 10 ರನ್ ಗಳಿಸಿದೆ. ರೋಹಿತ್ ಶರ್ಮಾ ಮತ್ತು ರಾಹುಲ್ ನಿಧಾನಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಬಾಂಗ್ಲಾದೇಶ ಆಡುವ 11ರ ಬಳಗ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಾಕಿಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ಶೋರಿಫುಲ್ ಇಸ್ಲಾಂ, ನೂರುಲ್ ಹಸನ್ (ವಿಕೆಟ್ ಕೀಪರ್), ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್
ಭಾರತ ತಂಡದ ಆಡುವ 11ರ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಬುಧವಾರ ಅಡಿಲೇಡ್‌ನಲ್ಲಿ ಭಾರತ ವಿರುದ್ಧದ ಗ್ರೂಪ್ 2 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಜಿಂಬಾಬ್ವೆ ನೀಡಿದ್ದ 112 ರನ್‌ಗಳ ಗುರಿ ಬೆನ್ನತ್ತಿದ ನೆದರ್ಲ್ಯಾಂಡ್ಸ್ 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿ ಗೆಲುವು ಸಾಧಿಸಿದೆ.
ಜಿಂಬಾಬ್ವೆ ನೀಡಿರುವ 112 ರನ್‌ಗಳ ಗುರಿ ಬೆನ್ನತ್ತಿರುವ ನೆದರ್ಲ್ಯಾಂಡ್ಸ್ 14 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 92 ರನ್ ಗಳಿಸಿದೆ.
ಜಿಂಬಾಬ್ವೆ ನೀಡಿರುವ 112 ರನ್‌ಗಳ ಗುರಿ ಬೆನ್ನತ್ತಿರುವ ನೆದರ್ಲ್ಯಾಂಡ್ಸ್ 5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 25 ರನ್ ಗಳಿಸಿದೆ.
ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 19.2 ಓವರ್‌ಗಳಲ್ಲಿ 111 ರನ್‌ಗಳಿಗೆ ಆಲೌಟ್ ಆಗಿದ್ದು, ನೆದರ್ಲ್ಯಾಂಡ್ಸ್ ತಂಡಕ್ಕೆ 112 ರನ್‌ಗಳ ಗುರಿ ನೀಡಿದೆ.
ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಜಿಂಬಾಬ್ವೆ 18 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 111 ರನ್ ಗಳಿಸಿದೆ.
ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಜಿಂಬಾಬ್ವೆ 14 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿದೆ.
ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಜಿಂಬಾಬ್ವೆ 9 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿದೆ.
ಟಿ20 ವಿಶ್ವಕಪ್ 2022ರ ಸೂಪರ್ 12 ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಜಿಂಬಾಬ್ವೆ 4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 14 ರನ್ ಗಳಿಸಿದೆ.
ಟಿ20 ವಿಶ್ವಕಪ್ 2022ರ ಸೂಪರ್ 12 ಪಂದ್ಯದಲ್ಲಿ ಟಾಸ್ ಗೆದ್ದಿರುವ ಕ್ರೇಗ್ ಎರ್ವಿನ್ ನಾಯಕತ್ವದ ಜಿಂಬಾಬ್ವೆ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, ಹೀಗಾಗಿ ಸ್ಕಾಟ್ ಎಡ್ವರ್ಡ್ಸ್ ನಾಯಕತ್ವದ ನೆದರ್ಲ್ಯಾಂಡ್ಸ್ ಮೊದಲು ಬೌಲಿಂಗ್ ಮಾಡಲಿದೆ.
ಬುಧವಾರ ಅಡಿಲೇಡ್‌ನ ಓವಲ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ 2022ರ 34ನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸುತ್ತಿದೆ.
ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್ 11: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್
ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ(ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ / ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಯುಜವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್
ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಡಿಸಿದ ತಂಡವನ್ನೇ ಬಹುತೇಕ ಕಣಕ್ಕಿಳಿಸುವ ಸಾಧ್ಯತೆಯಿದೆ. ಆದ್ರೆ ಈ ಬಾರಿ ದಿನೇಶ್ ಕಾರ್ತಿಕ್ ಬದಲು ರಿಷಭ್ ಪಂತ್ ಮತ್ತು ಸ್ಪಿನ್ನರ್ ಯುಜವೇಂದ್ರ ಚಹಾಲ್ ಪ್ಲೇಯಿಂಗ್ 11ರಲ್ಲಿ ಅವಕಾಶ ಪಡೆಯಬಹುದು.
ಅಡಿಲೇಡ್‌ನ ಅಡಿಲೇಡ್ ಓವಲ್ ಮೈದಾನದಲ್ಲಿ ನವೆಂಬರ್ 2ರಂದು ಭಾರತ ಮತ್ತು ಬಾಂಗ್ಲಾದೇಶ ಪಂದ್ಯ ನಡೆಯಲಿದೆ. ಪ್ರಸ್ತುತ 4 ಪಾಯಿಂಟ್ಸ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಭಾರತ ಬಾಂಗ್ಲಾ ವಿರುದ್ಧ ಗೆಲ್ಲಲು ರಣತಂತ್ರ ಹೂಡಲು ರೆಡಿಯಾಗಿದ್ದು, ಈಗಾಗಲೇ ಅಭ್ಯಾಸ ನಡೆಸಿದೆ. ಮಳೆ ಸತತವಾಗಿ ಸುರಿಯುತ್ತಿರುವ ಕಾರಣ ಒಳಾಂಗಣ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸಿದ್ದಾರೆ.
ಗ್ರೂಪ್ 2ರಲ್ಲಿ ಭಾರತ ವಿರುದ್ಧ ಗೆದ್ದ ದಕ್ಷಿಣ ಆಫ್ರಿಕಾ ಅಗ್ರಸ್ಥಾನ ಅಲಂಕರಿಸಿದ್ದು, 3 ಪಂದ್ಯಗಳಿಂದ 5 ಪಾಯಿಂಟ್ಸ್ (+2.772), ಭಾರತ 3 ಪಂದ್ಯಗಳಿಂದ 4 ಪಾಯಿಂಟ್ಸ್ (+0.844), ಬಾಂಗ್ಲಾದೇಶ 3 ಪಂದ್ಯಗಳಿಂದ 4 ಪಾಯಿಂಟ್ಸ್ (-1.533) ಹೊಂದಿದ್ದು, ಕೊನೆಯ ಮೂರು ಸ್ಥಾನವನ್ನ ಜಿಂಬಾಬ್ವೆ, ಪಾಕಿಸ್ತಾನ, ನೆದರ್ಲ್ಯಾಂಡ್ಸ್ ಅಲಂಕರಿಸಿವೆ.
ಗ್ರೂಪ್ 1ರ ಕೊನೆಯ ಮೂರು ಸ್ಥಾನದಲ್ಲಿ ಶ್ರೀಲಂಕಾ 4 ಪಂದ್ಯಗಳಿಂದ 4 ಪಾಯಿಂಟ್ಸ್, ಐರ್ಲೆಂಡ್ 4 ಪಂದ್ಯಗಳಿಂದ 3 ಪಾಯಿಂಟ್ಸ್ ಕಲೆಹಾಕಿದ್ದು ಸೆಮಿಫೈನಲ್ ಅವಕಾಶ ಬಹುತೇಕ ಮುಗಿದಿದೆ. ಇನ್ನು ಕೊನೆಯ ಸ್ಥಾನದಲ್ಲಿರುವ ಅಫ್ಘಾನಿಸ್ತಾನ 4 ಪಂದ್ಯಗಳಲ್ಲಿ ಒಂದು ಪಂದ್ಯವನ್ನೂ ಜಯಿಸದೆ 2 ಪಾಯಿಂಟ್ಸ್ ಹೊಂದಿದೆ.
ಸೆಮಿಫೈನಲ್ ಖಚಿತಪಡಿಸಿಕೊಳ್ಳಲು ನ್ಯೂಜಿಲೆಂಡ್ ಮುಂದಿನ ಪಂದ್ಯದಲ್ಲಿ ಐರ್ಲೆಂಡ್, ಇಂಗ್ಲೆಂಡ್ ತಂಡವು ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕಿದೆ. ಮೂರು ತಂಡಗಳ ಪಾಯಿಂಟ್ಸ್ 5 ಆಗಿರುವ ಕಾರಣ ಸೆಮಿಫೈನಲ್ ತಲುಪಲು ಪ್ರಬಲ ಹೋರಾಟ ಎದುರಾಗಿದೆ.
ಇಂಗ್ಲೆಂಡ್ ಗೆಲುವಿನ ಮೂಲಕ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಸೆಮಿಫೈನಲ್ ಹಾದಿ ಕಠಿಣಗೊಂಡಿದೆ. ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡದಷ್ಟೇ ಪಾಯಿಂಟ್ಸ್ ಹೊಂದಿರುವ ಆಸ್ಟ್ರೇಲಿಯಾ ನೆಟ್ ರನ್‌ರೇಟ್ -0.304 ಹೊಂದಿರುವ ಕಾರಣ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಸೆಮಿಫೈನಲ್ ಆಸೆ ಜೀವಂತವಾಗಿರಿಸಿರುವ ಇಂಗ್ಲೆಂಡ್ 4 ಪಂದ್ಯಗಳಲ್ಲಿ 2 ಗೆಲುವು, 1 ಸೋಲು ಹಾಗೂ 1 ಫಲಿತಾಂಶವಿಲ್ಲದೆ 5 ಪಾಯಿಂಟ್ಸ್ ಕಲೆಹಾಕಿದ್ದು, +0.547 ನೆಟ್ ರನ್‌ರೇಟ್ ಹೊಂದಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನ ಅಲಂಕರಿಸಿದೆ.
ನ್ಯೂಜಿಲೆಂಡ್ 4 ಪಂದ್ಯಗಳಲ್ಲಿ 2 ಗೆಲುವು, 1 ಸೋಲು ಹಾಗೂ 1 ಫಲಿತಾಂಶವಿಲ್ಲದೆ 5 ಪಾಯಿಂಟ್ಸ್ ಕಲೆಹಾಕಿದ್ದು, +2.233 ನೆಟ್ ರನ್‌ರೇಟ್ ಹೊಂದಿದೆ.
ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತ ಉತ್ತಮ ರನ್ ರೇಟ್‌ನಿಂದ ಬಾಂಗ್ಲಾದೇಶಕ್ಕಿಂತ ಮೇಲಿನ ಸ್ಥಾನದಲ್ಲಿದೆ. ಭಾರತ-ಬಾಂಗ್ಲಾದೇಶದ ಮುನ್ನಾದಿನದಂದು ಅಡಿಲೇಡ್ ಓವಲ್‌ನಲ್ಲಿ ಭಾರಿ ಮಳೆ ಸುರಿದ ಕಾರಣ ಪಂದ್ಯವು ರದ್ದಾಗುವ ಸಾಧ್ಯತೆ ಇದೆ.
ಕಳಪೆ ಫಾರ್ಮ್‌ನಿಂದ ಸಂಕಷ್ಟದಲ್ಲಿರುವ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್‌ಗೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಕೋಚ್ ಆಗಿ ಕೆಲಸ ಮಾಡಿದರು. ಅಡಿಲೇಡ್‌ನಲ್ಲಿ ಟೀಂ ಇಂಡಿಯಾದ ಅಭ್ಯಾಸದ ಅವಧಿಯಲ್ಲಿ ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ಜೊತೆ ಸುಧೀರ್ಘ ಚರ್ಚೆ ನಡೆಸಿದರು, ಮಾತ್ರವಲ್ಲದೆ ಬ್ಯಾಟಿಂಗ್‌ನಲ್ಲಿ ಹಲವು ಸಲಹೆ ನೀಡಿದರು.
ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮತ್ತು ಮಹಿಳಾ ಕ್ರಿಕೆಟ್‌ನ ದಿಗ್ಗಜರಲ್ಲಿ ಒಬ್ಬರಾದ ಮಿಥಾಲಿ ರಾಜ್ ಅವರು ಭಾರತ ತಂಡವು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಇಂಗ್ಲೆಂಡ್ ವಿರುದ್ಧ ಪಂದ್ಯ ಸೋತರು ಸಹ ನ್ಯೂಜಿಲೆಂಡ್ ಉತ್ತಮ ನೆಟ್ ರನ್‌ರೇಟ್ ಹೊಂದಿರುವ ಕಾರಣ ಗ್ರೂಪ್ 1ರಲ್ಲಿ ಅಗ್ರಸ್ಥಾನದಲ್ಲಿಯೇ ಮುಂದುವರಿದಿದೆ.
47 ಎಸೆತಗಳಲ್ಲಿ 73 ರನ್ ಗಳಿಸಿದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಪಂದ್ಯದ ಆಟಗಾರ ಪ್ರಶಸ್ತಿಗೆ ಭಾಜನರಾದರು.
ಸೆಮಿಫೈನಲ್ ತಲುಪಲು ಗೆಲುವು ಸಾಧಿಸಲೇ ಬೇಕಾದ ಪಂದ್ಯದಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ 20 ರನ್‌ಗಳ ಜಯ ಸಾಧಿಸಿದೆ.
ನ್ಯೂಜಿಲೆಂಡ್ ಬ್ಯಾಟರ್ ಗ್ಲೆನ್ ಫಿಲಿಪ್ಸ್ 25 ಎಸೆತಗಳಲ್ಲಿ 50 ರನ್ ಗಳಿಸುವ ತಮ್ಮ ಅರ್ಧಶತಕವನ್ನು ಪೂರೈಸಿದ್ದಾರೆ.
13 ಓವರ್ ಅಂತ್ಯಕ್ಕೆ ನ್ಯೂಜಿಲೆಂಡ್ 2 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ. ಕೇನ್ ವಿಲಿಯಮ್ಸನ್ ಮತ್ತು ಗ್ಲೆನ್ ಫಿಲಿಪ್ಸ್ ಎಚ್ಚರಿಕೆಯ ಬ್ಯಾಟಿಂಟ್ ಮುಂದುವರೆಸಿದ್ದಾರೆ.
ನ್ಯೂಜಿಲೆಂಡ್ 8 ಓವರ್ ಗಳ ಮುಕ್ತಾಯಕ್ಕೆ 53 ರನ್ ಗಳಿಸಿದ್ದು, ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.
ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ 47 ಎಸೆತಗಳಲ್ಲಿ 73 ರನ್ ಗಳಿಸಿದರು. ಅಲೆಕ್ಸ್ ಹೇಲ್ಸ್ 52 ರನ್ ಗಳಿಸಿದರು.
ಇಂಗ್ಲೆಂಡ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿದೆ.
ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ 40 ಎಸೆತಗಳಲ್ಲಿ 52 ರನ್ ಗಳಿಸಿ ಔಟಾಗಿದ್ದಾರೆ. ಇಂಗ್ಲೆಂಡ್ ತನ್ನ ಮೊದಲ ವಿಕೆಟ್ ಕಳೆದುಕೊಂಡಿದೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲ 10 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 77 ರನ್ ಗಳಿಸಿದೆ.
ಇಂಗ್ಲೆಂಡ್ ತಂಡದ ಆಡುವ 11ರ ಬಳಗ: ಜೋಸ್ ಬಟ್ಲರ್ (ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್.
ನ್ಯೂಜಿಲೆಂಡ್ ತಂಡದ ಆಡುವ 11ರ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಮಂಗಳವಾರ, ನವೆಂಬರ್ 1ರಂದು ಬ್ರಿಸ್ಬೇನ್‌ನ ದಿ ಗಬ್ಬಾದಲ್ಲಿ ಗ್ರೂಪ್ 1 ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ.
ಬ್ರಿಸ್ಬೇನ್‌ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊಹಮ್ಮದ್ ನಬಿ ನಾಯಕತ್ವದ ಅಫ್ಘಾನಿಸ್ತಾನ ತಂಡವನ್ನು 6 ವಿಕೆಟ್ ಅಂತರದಿಂದ ಸೋಲಿಸಿದ ದಸುನ್ ಶನಕ ನಾಯಕತ್ವದ ಶ್ರೀಲಂಕಾ ತಂಡ ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಂಡಿದೆ.
ಮಂಗಳವಾರ (ನವೆಂಬರ್ 1) ಬ್ರಿಸ್ಬೇನ್‌ನಲ್ಲಿ ಟಿ20 ವಿಶ್ವಕಪ್ ಗ್ರೂಪ್ 1 ಪಂದ್ಯದಲ್ಲಿ ಶ್ರೀಲಂಕಾ ತಂಡವು ಅಫ್ಘಾನಿಸ್ತಾನ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಅಫ್ಘಾನಿಸ್ತಾನ ನೀಡಿರುವ 145 ರನ್‌ಗಳ ಗುರಿ ಬೆನ್ನತ್ತಿರುವ ಶ್ರೀಲಂಕಾ 15 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿದೆ.
ಟಿ20 ವಿಶ್ವಕಪ್ ಗ್ರೂಪ್ 1 ಪಂದ್ಯದಲ್ಲಿ ಅಫ್ಘಾನಿಸ್ತಾನ ನೀಡಿರುವ 145 ರನ್‌ಗಳ ಗುರಿ ಬೆನ್ನತ್ತಿರುವ ಶ್ರೀಲಂಕಾ 12.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿದೆ.
20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದ ಅಫ್ಘಾನಿಸ್ತಾನ, ಶ್ರೀಲಂಕಾ ತಂಡಕ್ಕೆ 145 ರನ್‌ಗಳ ಗುರಿ ನೀಡಿದೆ.
ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದೆ.
ಟಿ20 ವಿಶ್ವಕಪ್ ಗ್ರೂಪ್ 1 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ 16.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ.
ಟಿ20 ವಿಶ್ವಕಪ್ ಗ್ರೂಪ್ 1 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ 12 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿದೆ.
ಶ್ರೀಲಂಕಾ ವಿರುದ್ಧ ಅಫ್ಘಾನಿಸ್ತಾನ 7.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 49 ರನ್ ಗಳಿಸಿದೆ.
ಅಫ್ಘಾನಿಸ್ತಾನ ಆಡುವ 11ರ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಗುಲ್ಬದಿನ್ ನೈಬ್, ಇಬ್ರಾಹಿಂ ಝದ್ರಾನ್, ಉಸ್ಮಾನ್ ಘನಿ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್, ಫರೀದ್ ಅಹ್ಮದ್.
ಶ್ರೀಲಂಕಾ ಆಡುವ 11ರ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಮಹೇಶ್ ತೀಕ್ಷಣ, ಕಸುನ್ ರಜಿತ, ಲಹಿರು ಕುಮಾರ, ಪ್ರಮೋದ್ ಮಧುಶನ್.
ಅಫ್ಘಾನಿಸ್ತಾನ ತನ್ನ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಮಳೆಯಿಂದಾಗಿ ರದ್ದಾದ ನಂತರ ಇನ್ನೂ ಒಂದು ಪಂದ್ಯವನ್ನು ಗೆದ್ದಿಲ್ಲ. ಮತ್ತೊಂದೆಡೆ ಶ್ರೀಲಂಕಾ ಇದುವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದು ಎರಡರಲ್ಲಿ ಸೋತಿದೆ.
ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆಮಾಡಿದೆ.
ಮಂಗಳವಾರ (ನವೆಂಬರ್ 1) ಬ್ರಿಸ್ಬೇನ್‌ನ ಗಬ್ಬಾದಲ್ಲಿ ಟಿ20 ವಿಶ್ವಕಪ್ ಗ್ರೂಪ್ 1 ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಶ್ರೀಲಂಕಾವನ್ನು ಎದುರಿಸುತ್ತಿದೆ.
ಹೆಡ್ ಟು ಹೆಡ್: ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಈವರೆಗೆ 22 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 12 ಪಂದ್ಯಗಳಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದ್ದರೆ 8 ಒಂದ್ಯಗಳಲ್ಲಿ ಕಿವೀಸ್ ಪಡೆ ಗೆದ್ದುಕೊಂಡಿದೆ. ಒಂದು ಟೈ ಫಲಿತಾಂಶ ಪಡೆದುಕೊಂಡಿದ್ದರೆ ಒಂದು ಫಲಿತಾಂಶ ಕಾಣದೆ ಅಂತ್ಯವಾಗಿದೆ. ಇನ್ನು ಟಿ20 ವಿಶ್ವಕಪ್‌ನ್ಲಲಿ ಈವರೆಗೆ ಈ ಎರಡು ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು ಇದರಲ್ಲಿ ತಲಾ 3 ಬಾರಿ ಎರಡು ತಂಡಗಳು ಸೋಲು ಗೆಲುವಿನ ರುಚಿ ಕಂಡಿದೆ.
ಟಿ20 ವಿಶ್ವಕಪ್ ರೋಚಕ ಘಟ್ಟವನ್ನು ತಲುಪಿದೆ. ಸೆಮಿಫೈನಲ್ ಹಂತಕ್ಕೇರಲು ಎಲ್ಲಾ ತಂಡಗಳು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದು ಫಲಿತಾಂಶಗಳ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿದೆ. ಈ ಹಂತದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಮಂಗಳವಾರ ಮುಖಾಮುಖಿಯಾಗಲಿದ್ದು ಇದು ಇಂಗ್ಲೆಂಡ್ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾದ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ), ಇಶಾನ್ ಕಿಶನ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಭುನ್ನೇಶ್ವರ್ ಕುಮಾರ್ ಪಟೇಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ವಿರುದ್ಧದ ಮಹತ್ವದ ಪಂದ್ಯವನ್ನಾಡಲು ಭಾರತ ತಂಡ ಈಗಾಗಲೇ ಅಡಿಲೇಡ್‌ಗೆ ತಲುಪಿದ್ದು ಸೋಮವಾರ ಸಂಪೂರ್ಣ ವಿಶ್ಆಂತಿ ಪಡೆಯಲಿದ್ದಾರೆ. ಮಂಗಳವಾರ ಬುಧವಾರ ನಡೆಯಲಿರುವ ಪಂದ್ಯಕ್ಕೆ ಅಭ್ಯಾಸ ನಡೆಸಲಿದ್ದಾರೆ.
ಆರಂಭಿಕರಾಗಿರುವ ಕೆಎಲ್ ರಾಹುಲ್ ರನ್ ಗಳಿಸಲು ಪರದಾಡುತ್ತಿರುವ ಕಾರಣ ಆರಂಭಿಕ ಸಂಯೋಜನೆಯನ್ನು ಬದಲಾಯಿಸುವ ಬಗ್ಗೆ ತಂಡ ಚಿಂತಿಸಬೇಕು ಎಂದು ಹರ್ಭಜನ್ ಸಿಂಗ್ ಸಲಹೆ ನೀಡಿದ್ದಾರೆ.ರಾಹುಲ್ ಬದಲಿಗೆ ಪಂತ್ ಇನ್ನಿಂಗ್ಸ್ ಆರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ.
ಕಳೆದ ಮೂರು ಪಂದ್ಯಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದ ರಿಷಬ್ ಪಂತ್ ತಮ್ಮ ಈ ವಿಶ್ವಕಪ್‌ನಲ್ಲಿ ಮೊದಲನೇ ಪಂದ್ಯವನ್ನಾಡಲಿದ್ದಾರೆ. ಬಾಂಗ್ಲಾ ವಿರುದ್ಧ ಪಂತ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಪರ್ತ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬಳಿಕ ಟೀಂ ಇಂಡಿಯಾ ತಮ್ಮ ಮುಂದಿನ ಪಂದ್ಯಕ್ಕಾಗಿ ಅಡಿಲೇಡ್‌ಗೆ ಪ್ರಯಾಣಿಸಿದೆ. ನವೆಂಬರ್ 2ರಂದು ಸೂಪರ್ 12 ಹಂತದ ಮುಂದಿನ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ ಸೆಣಸಲಿದೆ.
44 ಎಸೆತಗಳಲ್ಲಿ 63 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದ ಆಸ್ಟ್ರೇಲಿಯಾ ನಾಯಕ ಆರನ್ ಫಿಂಚ್ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು.
ಮ್ಯಾಕ್ಸ್‌ವೆಲ್, ಸ್ಟಾರ್ಕ್, ಕಮ್ಮಿನ್ಸ್, ಝಂಪಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ಮಾರ್ಕಸ್ ಸ್ಟೊಯಿನಿಸ್ ಒಂದು ವಿಕೆಟ್ ಪಡೆದರು.
ಆಸ್ಟ್ರೇಲಿಯಾ ಐರ್ಲೆಂಡ್ ವಿರುದ್ಧ 42 ರನ್‌ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. 179 ರನ್‌ಗಳ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ 18.1 ಓವರ್ ಗಳಲ್ಲಿ 137 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.
8 ಓವರ್ ಮುಕ್ತಾಯದ ನಂತರ ಐರ್ಲೆಂಡ್ 5 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿದೆ.
180 ರನ್‌ಗಳ ಗುರಿ ಬೆನ್ನತ್ತಿದ ಐರ್ಲೆಂಡ್ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಗಿದೆ. 4 ಓವರ್ ಗಳಲ್ಲಿ 25 ರನ್ ಗಳಿಸಿ 5 ವಿಕೆಟ್‌ಗಳನ್ನು ಕಳೆದುಕೊಂಡಿದೆ.
ಆಸ್ಟ್ರೇಲಿಯ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿದ್ದು, ಐರ್ಲೆಂಡ್‌ಗೆ 180 ರನ್‌ಗಳ ಗುರಿ ನೀಡಿದೆ.
ನಾಯಕ ಆರೋನ್ ಫಿಂಚ್ (63) ಅವರ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯ ತಂಡ ಐರ್ಲೆಂಡ್ ತಂಡದ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ 15.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದೆ.
ಐರ್ಲೆಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ 4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 20 ರನ್ ಗಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications