Namibia vs Netherlands : ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್ ಗೆದ್ದ ನಮೀಬಿಯಾ ಬ್ಯಾಟಿಂಗ್ ಆಯ್ಕೆ, ಆಡುವ ಬಳಗ, ಪಿಚ್ ರಿಪೋರ್ಟ್

ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದ್ದು, ಗೆದ್ದ ತಂಡ ಸೂಪರ್ 12 ಹಂತಕ್ಕೆ ಪ್ರವೇಶ ಪಡೆಯಲಿದೆ. ಎರಡೂ ತಂಡಗಳು ಶತಾಯ ಗತಾಯ ಈ ಪಂದ್ಯವನ್ನು ಗೆಲ್ಲಲು ಕಾದಾಡಲಿವೆ.
ನಮೀಬಿಯಾ ಮೊದಲನೇ ಪಂದ್ಯದಲ್ಲಿ ಏಷ್ಯಾಕಪ್ ಚಾಂಪಿಯನ್ನರಾದ ಶ್ರೀಲಂಕಾವನ್ನು 55 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಆಘಾತ ನೀಡಿದೆ. ಮತ್ತೊಂದೆಡೆ ನೆದರ್ಲ್ಯಾಂಡ್ಸ್ ಕೂಡ ಯುಎಇ ತಂಡದ ವಿರುದ್ಧ ಎರಡು ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.
ಶ್ರೀಲಂಕಾ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿರುವ ನಮೀಬಿಯಾ ತಂಡ ಗೆಲ್ಲುವ ನೆಚ್ಚಿನ ತಂಡವಾಗಿದೆ. ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾ ವಿರುದ್ಧ ನಮೀಬಿಯಾ, ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಬಲಿಷ್ಠವಾಗಿದೆ. ಡೇವಿಡ್ ವೈಸ್ ನೇತೃತ್ವದ ಬೌಲಿಂಗ್ ಪಡೆ ಲಂಕನ್ನರನ್ನು ಆಲೌಟ್ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಬ್ಯಾಟಿಂಗ್‌ನಲ್ಲಿ ಕೂಡ ನಮೀಬಿಯಾ ಉತ್ತಮವಾಗಿದೆ. ಜೆಜೆ ಸ್ಮಟ್ಸ್, ಡೇವಿಡ್ ವೀಸ್‌ರಂತಹ ಬಿಗ್ ಹಿಟ್ಟರ್ ಗಳು ತಂಡದಲ್ಲಿದ್ದಾರೆ.

ಸೈಮಂಡ್ಸ್ ಕ್ರೀಡಾಂಗಣದ ಪಿಚ್ ರಿಪೋರ್ಟ್
ಉಭಯ ತಂಡಗಳು ಟಿ20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಇದುವರೆಗೆ ಎರಡು ಪಂದ್ಯಗಳನ್ನಾಡಿದ್ದು, ಎರಡೂ ತಂಡಗಳು ಒಂದು ಬಾರಿ ಜಯ ಗಳಿಸುವ ಮೂಲಕ ಸಮಬಲ ಸಾಧಿಸಿವೆ. ಕಳೆದ ವರ್ಷದ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ನಮೀಬಿಯಾ ನೆದರ್ಲ್ಯಾಂಡ್ಸ್ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿತ್ತು.
ಗೀಲಾಂಗ್‌ನ ಸೈಮಂಡ್ಸ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 9.30ಕ್ಕೆ ಪಂದ್ಯ ಆರಂಭವಾಗಲಿದೆ. ಗೀಲಾಂಗ್‌ನಲ್ಲಿನ ಪಿಚ್ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡಕ್ಕೂ ಅನುಕೂಲಕರವಾಗಿದೆ. ನಮೀಬಿಯಾ-ಶ್ರೀಲಂಕಾ, ನೆದರ್ಲ್ಯಾಂಡ್ಸ್-ಯುಎಇ ನಡುವಿನ ಪಂದ್ಯ ಕಡಿಮೆ ಸ್ಕೋರಿಂಗ್ ಆಗಿತ್ತು. ಮೊದಲು ಬ್ಯಾಟಿಂಗ್ ಮಾಡುವ ತಂಡ 150 ರನ್ ಗಳಿಸಿದರೆ ರಕ್ಷಣೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ.
ಉಭಯ ತಂಡಗಳ ಆಡುವ ಬಳಗ
ನಮೀಬಿಯಾ: ಮೈಕೆಲ್ ವ್ಯಾನ್ ಲಿಂಗೆನ್, ದಿವಾನ್ ಲಾ ಕಾಕ್, ಸ್ಟೀಫನ್ ಬಾರ್ಡ್, ಜಾನ್ ನಿಕೋಲ್ ಲಾಫ್ಟಿ-ಈಟನ್, ಗೆರ್ಹಾರ್ಡ್ ಎರಾಸ್ಮಸ್(ನಾಯಕ), ಜಾನ್ ಫ್ರಿಲಿಂಕ್, ಡೇವಿಡ್ ವೈಸ್, ಜೆಜೆ ಸ್ಮಿಟ್, ಝೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ಬೆನ್ ಶಿಕೊಂಗೊ
ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್(ನಾಯಕ), ರೋಲೋಫ್ ವ್ಯಾನ್ ಡೆರ್ ಮೆರ್ವೆ, ಟಿಮ್ ಪ್ರಿಂಗಲ್, ಟಿಮ್ ವ್ಯಾನ್ ಡೆರ್ ಗುಗ್ಟನ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications