Scotland vs Ireland : ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಸ್ಕಾಟ್ಲೆಂಡ್ ಬ್ಯಾಟಿಂಗ್ ಆಯ್ಕೆ, ಆಡುವ ಬಳಗ, ಪಿಚ್ ರಿಪೋರ್ಟ್

2022 ರ ಟಿ 20 ವಿಶ್ವಕಪ್‌ನ ಮೊದಲ ಸುತ್ತಿನ ಬಿ ಗುಂಪಿನ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಕಾಟ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೋಬರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ.
ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಸ್ಕಾಟ್ಲೆಂಡ್ ಆತ್ಮವಿಶ್ವಾಸದಿಂದಲೇ ಕಣಕ್ಕಿಳಿಯಲಿದೆ. ಇನ್ನು ತನ್ನ ಮೊದಲನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ 31 ರನ್‌ಗಳ ಅಂತರದಿಂದ ಸೋಲನ್ನಪ್ಪಿರುವ ಐರ್ಲೆಂಡ್ ಜಯದ ಹಾದಿಗೆ ಮರಳಲು ನೋಡುತ್ತದೆ.
2019 ರಿಂದ ಇಲ್ಲಿಯವರೆಗೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಮೂರು ಬಾರಿ ಮುಖಾಮುಖಿಯಾಗಿವೆ. ಒಂದು ಪಂದ್ಯದಲ್ಲಿ ಸ್ಕಾಂಟ್ಲೆಂಡ್ 6 ವಿಕೆಟ್‌ಗಳಿಂದ ಜಯ ಗಳಿಸಿದರೆ, ಉಳಿದ ಎರಡು ಪಂದ್ಯಗಳಲ್ಲಿ ಐರ್ಲೆಂಡ್ ಜಯಗಳಿಸಿದೆ.
ತನ್ನ ಮೊದಲ ವೆಸ್ಟ್ ಇಂಡೀಸ್ ವಿರುದ್ಧ 42 ರನ್‌ಗಳಿಂದ ಸ್ಕಾಟ್ಲೆಂಡ್ ಜಯಗಳಿಸಿತ್ತು. ಜಾರ್ಜ್ ಮನ್ಸೆ ಅರ್ಧಶಕತ ಗಳಿಸುವ ಮೂಲಕ ಪಂದ್ಯದ ಆಟಗಾರ ಎಂದು ಪ್ರಶಸ್ತಿ ಪಡೆದರು, ಮೈಕೆಲ್ ಲೀಸ್ಕ್ ಮತ್ತು ಮಾರ್ಕ್ ವ್ಯಾಟ್ ಇಬ್ಬರೂ ಐದು ವಿಕೆಟ್ ಪಡೆದರು.
ಜಿಂಬಾಬ್ವೆ ವಿರುದ್ಧ ಐರ್ಲೆಂಡ್ ನಿರಾಶಾದಾಯಕ ಸೋಲನ್ನು ಅನುಭವಿಸಿತು. ಸಿಕಂದರ್ ರಜಾ ಆಲ್‌ರೌಂಡ್ ಪ್ರದರ್ಶನದ ನೆರವಿನಿಂದ ಜಿಂಬಾಬ್ವೆ ಜಯ ಗಳಿಸಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಐರ್ಲೆಂಡ್ ನಿರಾಶಾದಾಯಕ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಸ್ಕಾಟ್ಲೆಂಡ್ ಜಯ ಗಳಿಸಿದರೆ ಸೂಪರ್ 12 ಹಂತದ ದಾರಿ ಸುಲಭವಾಗಲಿದೆ.

ಉಭಯ ತಂಡಗಳ ಆಡುವ ಬಳಗ
ಸ್ಕಾಟ್ಲೆಂಡ್: ಜಾರ್ಜ್ ಮುನ್ಸಿ, ಮೈಕೆಲ್ ಜೋನ್ಸ್, ಮ್ಯಾಥ್ಯೂ ಕ್ರಾಸ್, ರಿಚಿ ಬೆರಿಂಗ್ಟನ್ (ನಾಯಕ), ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಜೋಶ್ ಡೇವಿ, ಸಫ್ಯಾನ್ ಷರೀಫ್, ಬ್ರಾಡ್ ವೀಲ್
ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ , ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಸಿಮಿ ಸಿಂಗ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications