For Quick Alerts
ALLOW NOTIFICATIONS  
For Daily Alerts
 

Sl Vs Ned: ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ, ಆಡುವ ಬಳಗ, ಪಿಚ್ ರಿಪೋರ್ಟ್

ICC T20 World Cup 2022: Sri Lanka Won Toss And Opt Bat Against Netherlands, Playing XIs, Pitch Report

2022 ರ ಐಸಿಸಿ ಪುರುಷರ T20 ವಿಶ್ವಕಪ್‌ನ 9 ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಗೀಲಾಂಗ್‌ನಲ್ಲಿರುವ ಸೈಮಂಡ್ಸ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಶ್ರೀಲಂಕಾ ತಂಡಕ್ಕೆ ಇದು ಮಾಡಿ ಇಲ್ಲವೇ ಮಡಿ ಪಂದ್ಯವಾಗಿದೆ.

ಶ್ರೀಲಂಕಾ ತನ್ನ ಮೊದಲನೇ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಸೋತ ನಂತರ ತನ್ನ ಎರಡನೇ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಭರ್ಜರಿ ಸಾಧಿಸಿದೆ. ಯುಎಇ ವಿರುದ್ಧದ ದೊಡ್ಡ ಗೆಲುವು ಶ್ರೀಲಂಕಾ ರನ್ ರೇಟ್ ಉತ್ತಮ ಪಡಿಸಲು ಸಹಾಯ ಮಾಡಿತು. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ಗೆದ್ದರೆ ಎ ಗುಂಪಿಯನಲ್ಲಿ ಸೂಪರ್ 12 ಹಂತ ಪ್ರವೇಶಿಸಲು ತಂಡಗಳ ನಡುವೆ ಭಾರಿ ಪೈಪೋಟಿ ನಡೆಯಲಿದೆ.

ಮೊದಲನೇ ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದ ಶ್ರೀಲಂಕಾ ಬೌಲರ್ ಗಳು, ಯುಎಇ ವಿರುದ್ಧದ ಪಂದ್ಯದಲ್ಲಿ ಮಿಂಚಿದರು. ದುಷ್ಮಂತ ಚಮೀರ ಮತ್ತು ವನಿಂದು ಹಸರಂಗ ತಲಾ ಮೂರು ವಿಕೆಟ್‌ಗಳನ್ನು ಪಡೆದು ಗೆಲುವಿಗೆ ನೆರವಾದರು. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರೆಸುವ ಭರವಸೆಯಲ್ಲಿದ್ದಾರೆ.

ಮತ್ತೊಂದೆಡೆ, ನೆದರ್ಲ್ಯಾಂಡ್ಸ್ ತಾವು ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ. ಮೊದಲನೇ ಪಂದ್ಯದಲ್ಲಿ ಯುಎಇ ವಿರುದ್ಧ ಗೆಲುವು ಸಾಧಿಸಿದ್ದ ಅವರು ಎರಡನೇ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಗೆಲುವು ಸಾಧಿಸಿದರು.

ಬೌಲರ್ ಗಳಿಗೆ ಅನುಕೂಲಕರವಾದ ಪಿಚ್

ಸೈಮಂಡ್ಸ್ ಸ್ಟೇಡಿಯಂನಲ್ಲಿನ ಪಿಚ್ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ. ಚೆಂಡು ಸ್ವಿಂಗ್ ಆಗುತ್ತದೆ. ಬ್ಯಾಟರ್‌ಗಳು ತಮ್ಮ ಸ್ಟ್ರೋಕ್‌ಗಳನ್ನು ಮುಕ್ತವಾಗಿ ಆಡುವ ಮೊದಲು ಎಚ್ಚರಿಕೆಯಿಂದ ಕೆಲವು ಎಸೆತಗಳನ್ನು ಎದುರಿಸಬೇಕಾಗುತ್ತದೆ. ಸ್ಪಿನ್ನರ್‌ಗಳು ಆಟದ ಕೊನೆಯ ಹಂತಗಳಲ್ಲಿ ಪಿಚ್‌ನ ಸಹಾಯ ಪಡೆಯಬಹುದು. ಎರಡನೇ ಇನ್ನಿಂಗ್ಸ್ ವೇಳೆಗೆ ಪಿಚ್ ಬೌಲಿಂಗ್‌ಗೆ ಸಹಕಾರಿಯಾಗಿರುತ್ತದೆ. ಜಿಲಾಂಗ್‌ನಲ್ಲಿ ತಾಪಮಾನವು 12 ಮತ್ತು 19 ಡಿಗ್ರಿ ಸೆಲ್ಸಿಯಸ್‌ನ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ.

ಉಭಯ ತಂಡಗಳ ಆಡುವ ಬಳಗ

ಶ್ರೀಲಂಕಾ : ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್(ಡಬ್ಲ್ಯೂ), ಧನಂಜಯ ಡಿ ಸಿಲ್ವ, ಭಾನುಕ ರಾಜಪಕ್ಸೆ, ಚರಿತ್ ಅಸಲಂಕಾ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಲಹಿರು ಕುಮಾರ, ಮಹೇಶ್ ತೀಕ್ಷಣ, ಬಿನೂರ ಫೆರ್ನಾಂಡೊ

ನೆದರ್ಲ್ಯಾಂಡ್ಸ್ : ಮ್ಯಾಕ್ಸ್ ಓಡೌಡ್, ವಿಕ್ರಮಜಿತ್ ಸಿಂಗ್, ಬಾಸ್ ಡಿ ಲೀಡೆ, ಟಾಮ್ ಕೂಪರ್, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಟಿಮ್ ಪ್ರಿಂಗಲ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಟಿಮ್ ವ್ಯಾನ್ ಡೆರ್ ಗುಗ್ಟನ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್

Story first published: Thursday, October 20, 2022, 9:16 [IST]
Other articles published on Oct 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+