T20 World Cup 2024: ಇಂಗ್ಲೆಂಡ್ ತಂಡಕ್ಕೆ ಸವಾಲು ಹಾಕಿದ ಸ್ಕಾಟ್ಲೆಂಡ್; ಟಾಸ್ ವರದಿ, ಆಡುವ 11ರ ಬಳಗ
ಮಂಗಳವಾರ, ಜೂನ್ 4ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 6ನೇ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳು ಮುಖಾಮುಖಿ ನಡೆಸುತ್ತಿವೆ.
ಟಾಸ್ ಗೆದ್ದ ಸ್ಕಾಟ್ಲೆಂಡ್ ತಂಡದ ನಾಯಕ ರಿಚಿ ಬೆರಿಂಗ್ಟನ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಟಿ20 ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಇಂಗ್ಲೆಂಡ್ ತಂಡವು ಟಿ20 ಸರಣಿಯಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ಕಾರಣ ಉತ್ತಮ ಸ್ಥಿತಿಯಲ್ಲಿದೆ. ಓಮನ್, ನಮೀಬಿಯಾ ಮತ್ತು ಆಸ್ಟ್ರೇಲಿಯಾ ತಂಡವನ್ನು ಒಳಗೊಂಡಿರುವ ಗುಂಪಿನಲ್ಲಿ ಈ ಪಂದ್ಯವು ಬಹಳಷ್ಟು ಮಹತ್ವವನ್ನು ಹೊಂದಿದೆ.
ಇಂಗ್ಲೆಂಡ್ vs ಸ್ಕಾಟ್ಲೆಂಡ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಇಂಗ್ಲೆಂಡ್ vs ಸ್ಕಾಟ್ಲೆಂಡ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
ಸ್ಕಾಟ್ಲೆಂಡ್ ಆಡುವ 11ರ ಬಳಗ
ಜಾರ್ಜ್ ಮುನ್ಸಿ, ಮೈಕೆಲ್ ಜೋನ್ಸ್, ಬ್ರಾಂಡನ್ ಮೆಕ್‌ಮುಲ್ಲೆನ್, ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಕ್ರಿಸ್ಟೋಫರ್ ಸೋಲ್, ಬ್ರಾಡ್ ವೀಲ್, ಬ್ರಾಡ್ಲಿ ಕ್ಯೂರಿ.

ಇಂಗ್ಲೆಂಡ್ ಆಡುವ 11ರ ಬಳಗ
ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಫಿಲಿಪ್ ಸಾಲ್ಟ್, ವಿಲ್ ಜ್ಯಾಕ್ಸ್, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications