T20 World Cup 2022: ಭಾರತದ ಈ ಬ್ಯಾಟರ್‌ಗಳು ಹೆಚ್ಚು ರನ್ ಗಳಿಸುತ್ತಾರೆ ಎಂದ ಆಶಿಶ್ ನೆಹ್ರಾ

ಭಾರತದ ಮಾಜಿ ಕ್ರಿಕೆಟಿಗ ಆಶಿಶ್ ನೆಹ್ರಾ ಮುಂಬರುವ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತದ ಪ್ರಮುಖ ರನ್ ಗಳಿಸುವವರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಅವರು ಹೆಚ್ಚು ರನ್ ಗಳಿಸಲು ಭಾರತೀಯ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಹೆಚ್ಚಿನ ಅವಕಾಶ ಇದೆ ಎಂದು ಹೇಳಿದ್ದಾರೆ. ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಗರಿಷ್ಠ ಎಸೆತಗಳನ್ನು ಎದುರಿಸುತ್ತಾರೆ ಎಂದು ಅವರು ಹೇಳಿದ್ದಾರೆ.
ಏಷ್ಯಾಕಪ್‌ನಿಂದ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಅವರು ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಟಿ20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 48 ಎಸೆತಗಳಲ್ಲಿ 63 ರನ್ ಗಳಿಸಿದ್ದರು. ಗುವಾಹಟಿಯಲ್ಲಿ ನಡೆದ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 28 ಎಸೆತಗಳಲ್ಲಿ ಅಜೇಯ 49 ರನ್ ಗಳಿಸಿದ್ದರು.
ಮತ್ತೊಂದೆಡೆ, ಟಿ20 ಪಂದ್ಯಗಳಲ್ಲಿ ಸ್ಥಿರವಾಗಿ ಪ್ರದರ್ಶನ ನೀಡಲು ರೋಹಿತ್ ಶರ್ಮಾ ವಿಫಲರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಬಲಗೈ ಬ್ಯಾಟರ್ ಶೂನ್ಯಕ್ಕೆ ಔಟಾಗಿದ್ದಾರೆ. ದಾಖಲಿಸಿದ್ದಾರೆ. ಅಕ್ಟೋಬರ್ 10ರಂದು ವೆಸ್ಟರ್ನ್ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧದ ಅಭ್ಯಾಸದ ಪಂದ್ಯದಲ್ಲಿ ಕೇವಲ ಮೂರು ರನ್ ಗಳಿಸಿದರು.

ಹೆಚ್ಚಿನ ಎಸೆತಗಳನ್ನು ಎದುರಿಸುತ್ತಾರೆ
ಟಿ20 ಕ್ರಿಕೆಟ್‌ನಲ್ಲಿ ಭಾರತದ ಪ್ರಮುಖ ರನ್ ಸ್ಕೋರರ್ ಯಾರು ಎಂಬುದರ ಕುರಿತು ನಾವು ಮಾತನಾಡುವಂತೆಯೇ, ಅಗ್ರಸ್ಥಾನದಲ್ಲಿ ಬ್ಯಾಟ್ ಮಾಡುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಬ್ಯಾಟರ್ ಮುಂಚೂಣಿಯಲ್ಲಿರುತ್ತಾರೆ. ದಿನೇಶ್ ಕಾರ್ತಿಕ್ ಅಥವಾ ಹಾರ್ದಿಕ್ ಪಾಂಡ್ಯ ಪಂದ್ಯಾವಳಿಯ ಪ್ರಮುಖ ರನ್ ಗಳಿಸುವವರಾಗಿ ಮುಗಿಸುತ್ತಾರೆ ಎಂದು ಯಾರಾದರೂ ಹೇಳಿಕೊಳ್ಳುವುದನ್ನು ನೀವು ಅಪರೂಪವಾಗಿ ನೋಡುತ್ತೀರಿ ಏಕೆಂದರೆ ಅವರು ಕಡಿಮೆ ಎಸೆತಗಳನ್ನು ಎದುರಿಸುತ್ತಾರೆ ಎಂದು ಆಶಿಶ್ ನೆಹ್ರಾ ಹೇಳಿದ್ದಾರೆ.

ಉತ್ತಮ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ
ಸತತ ಮೂರು ವರ್ಷಗಳಿಂದ ಶತಕಕ್ಕಾಗಿ ಕಾಯುತ್ತಿದ್ದ ವಿರಾಟ್ ಕೊಹ್ಲಿ, ಏಷ್ಯಾಕಪ್‌ನಲ್ಲಿ ತಮ್ಮ ಫಾರ್ಮ್ ಕಂಡುಕೊಳ್ಳುವಲ್ಲಿ ಯಶ ಕಂಡರು. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಭರ್ಜರಿ 71ನೇ ಶತಕ ಗಳಿಸುವ ಮೂಲಕ ಟಿ20 ವಿಶ್ವಕಪ್‌ನಲ್ಲಿ ತಾನು ರನ್ ಗಳಿಸುತ್ತೇನೆ ಎನ್ನುವ ಸಂದೇಶ ರವಾನಿಸಿದರು.
ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಗಳಲ್ಲಿ ಕೂಡ ವಿರಾಟ್ ಕೊಹ್ಲಿ ತಮ್ಮ ರನ್ ಗಳಿಕೆಯನ್ನು ಮುಂದುವರೆಸಿದರು. ಆಸ್ಟ್ರೇಲಿಯಾದಲ್ಲಿ ಕಠಿಣ ತರಬೇತಿಯ ನಂತರ, ವೆಸ್ಟರ್ನ್ ಆಸ್ಟ್ರೇಲಿಯಾದ ವಿರುದ್ಧದ ಪಂದ್ಯಗಳಲ್ಲಿ ಕೊಹ್ಲಿ ಕಣಕ್ಕಿಳಿದಿರಲಿಲ್ಲ. ಆದರೂ ಕೂಡ, ನೆಟ್ಸ್‌ನಲ್ಲಿ ಉತ್ತಮ ಅಭ್ಯಾಸ ಮುಂದುವರೆಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications