ಐಸಿಸಿ ಟಿ20 ದಶಕದ ತಂಡದಲ್ಲಿ 4 ಭಾರತೀಯರು, 4 ಎಂಐ ಆಟಗಾರರು!

ಬೆಂಗಳೂರು: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷ ವಿಭಾಗದ ದಶಕದ ಟಿ20ಐ ತಂಡ ಪ್ರಕಟಿಸಿದೆ. ಭಾನುವಾರ (ಡಿಸೆಂಬರ್ 27) ಪ್ರಕಟಿಸಲಾದ ಈ ತಂಡ ಸಾಕಷ್ಟು ಬಲಿಷ್ಠವಾಗಿದ್ದು, ಒಟ್ಟು ನಾಲ್ವರು ಭಾರತೀಯರು ಸ್ಥಾನ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ (ಎಂಐ) ತಂಡದಲ್ಲಿ ಆಡುವ ನಾಲ್ವರು ಆಟಗಾರರು ಈ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಐಸಿಸಿ ಪುರುಷರ ದಶಕದ ಟಿ20ಐ ತಂಡದಲ್ಲಿ ಆರಂಭಿಕರಾಗಿ ಭಾರತದ ಬ್ಯಾಟ್ಸ್‌ಮನ್, ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮತ್ತು ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್‌ಗೇಲ್ ಕಾಣಿಸಿಕೊಂಡಿದ್ದಾರೆ.
ಇನ್ನು 3ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ನಾಯಕ ಆ್ಯರನ್ ಫಿಂಚ್, 4ನೇ ಸ್ಥಾನದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ, 5ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಎಬಿಡಿ ವಿಲಿಯರ್ಸ್ ಇದ್ದಾರೆ.

ನಾಯಕ ಮತ್ತು ವಿಕೆಟ್ ಕೀಪರ್
ಅತ್ಯುತ್ತಮ ನಾಯಕರಲ್ಲಿ ಒಬ್ಬರೆನಿಸಿರುವ ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ದಶತಕದ ಟಿ20ಐ ತಂಡದಲ್ಲಿ ನಾಯಕರಾಗಿ ಹೆಸರಿಸಲ್ಪಟ್ಟಿದ್ದಾರೆ. ವಿಕೆಟ್ ಕೀಪಿಂಗ್ ಜವಾಬ್ದಾರಿಯೂ ಧೋನಿ ವಹಿಸಿಕೊಂಡಿದ್ದಾರೆ. ತಂಡದಲ್ಲಿ ಅಫ್ಘಾನಿಸ್ತಾನ್‌ನ ಮಾರಕ ಸ್ಪಿನ್ ಬೌಲರ್ ರಶೀದ್ ಖಾನ್ ಕೂಡ ಇದ್ದಾರೆ. ಇಂಗ್ಲೆಂಡ್‌ನ ಒಬ್ಬರೂ ಕೂಡ ಈ ತಂಡದಲ್ಲಿಲ್ಲ.

ಮುಂಬೈ ತಂಡದ ನಾಲ್ವರ ಹೆಸರು
ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿರುವ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ನಾಲ್ವರು ಆಟಗಾರರು ಈ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಎಂಐ ನಾಯಕ ರೋಹಿತ್ ಶರ್ಮಾ, ಆಲ್ ರೌಂಡರ್ ಕೀರನ್ ಪೊಲಾರ್ಡ್, ವೇಗಿಗಳಾದ ಜಸ್‌ಪ್ರೀತ್ ಬೂಮ್ರಾ, ಲಸಿತ್ ಮಾಲಿಂಗ ಐಸಿಸಿ ಪ್ರಕಟಿತ ಟಿ20ಐ ತಂಡದಲ್ಲಿರುವುದು ವಿಶೇಷವೆನಿಸಿದೆ.
ಐಸಿಸಿ ಪುರುಷರ ದಶಕದ ಟಿ20ಐ ತಂಡ
ರೋಹಿತ್ ಶರ್ಮಾ (ಭಾರತ), ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್), ಆ್ಯರನ್ ಫಿಂಚ್ (ಆಸ್ಟ್ರೇಲಿಯಾ), ವಿರಾಟ್ ಕೊಹ್ಲಿ (ಭಾರತ), ಎಬಿ ಡಿ ವಿಲಿಯರ್ಸ್ (ದಕ್ಷಿಣ ಆಫ್ರಿಕಾ), ಗ್ಲೆನ್ ಮ್ಯಾಕ್ಸ್‌ವೆಲ್ (ಆಸ್ಟ್ರೇಲಿಯಾ), ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ಕೀರನ್ ಪೊಲಾರ್ಡ್ (ವೆಸ್ಟ್ ಇಂಡೀಸ್), ರಶೀದ್ ಖಾನ್ (ಅಫ್ಘಾನಿಸ್ತಾನ), ಜಸ್‌ಪ್ರೀತ್ ಬೂಮ್ರಾ (ಭಾರತ), ಲಸಿತ್ ಮಾಲಿಂಗ (ಶ್ರೀಲಂಕಾ).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications