ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ಶ್ರೇಯಾಂಕ ಪಟ್ಟಿ: ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಬಿರುಗಾಳಿಯೆಬ್ಬಿಸಿದ ಹಾರ್ದಿಕ್ ಪಾಂಡ್ಯ!

ICC T20I ranking: All-Rounders list Hardik Pandya into top 5 after 71 not out against Australia

ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಫಾರ್ಮ್ ಮತ್ತೆ ಮುಂದುವರಿದಿದೆ. ಐಪಿಎಲ್‌ನಲ್ಲಿ ಕಮ್‌ಬ್ಯಾಕ್ ಮಾಡಿದ ಬಳಿಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು ಆಸಿಸ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿಯೂ ಬ್ಯಾಟ್ ಮೂಲಕ ಅಬ್ಬರಿಸಿದ್ದಾರೆ. ಮೊಹಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೇವಲ 30 ಎಸೆತಗಳಲ್ಲಿ ಭರ್ಜರಿ 71 ರನ್ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ.

ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಪರಿಣಾಮ ಹಾರ್ದಿಕ್ ಪಾಂಡ್ಯ ಶ್ರೇಯಾಂಕ ಪಟ್ಟಿಯಲ್ಲಿ ಭಾರೀ ಸಾಧನೆ ಮಾಡಿದ್ದಾರೆ. ಅದರಲ್ಲೂ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಅಮೋಘ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದು ಟಾಪ್ 5ರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Ind Vs Aus T20: ಕ್ಯಾಮರೂನ್ ಗ್ರೀನ್ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ವೈರಲ್Ind Vs Aus T20: ಕ್ಯಾಮರೂನ್ ಗ್ರೀನ್ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ವೈರಲ್

ಮೊದಲ ಪಂದ್ಯದಲ್ಲಿ ಸಿಡಿಲಬ್ಬರದ ಪ್ರದರ್ಶನ

ಮೊದಲ ಪಂದ್ಯದಲ್ಲಿ ಸಿಡಿಲಬ್ಬರದ ಪ್ರದರ್ಶನ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಕ್ಷರಶಃ ಆರ್ಭಟಿಸಿದರು. 30ಎಸೆತಗಳಲ್ಲಿ ಅಜೇಯ 71 ರನ್‌ಗಳಿಸಿದ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ಮೊತ್ತ 208ಕ್ಕೆ ಏರಿಕೆಯಾಗಲು ಕಾರಣವಾದರು. ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ ಹಾರ್ದಿಕ್ ಪಾಂಡ್ಯ ಬರೊಬ್ಬರಿ 5 ಸಿಕ್ಸರ್ ಹಾಗೂ 7 ಬೌಂಡರಿ ಸಿಡಿಸಿದ್ದಾರೆ.

ಟಾಪ್ 5ನಲ್ಲಿ ಹಾರ್ದಿಕ್ ಪಾಂಡ್ಯ

ಟಾಪ್ 5ನಲ್ಲಿ ಹಾರ್ದಿಕ್ ಪಾಂಡ್ಯ

ಟೀಮ್ ಇಂಡಿಯಾದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈ ಮೊದಲು ಶ್ರೇಯಾಂಕ ಪಟ್ಟಿಯಲ್ಲಿ ಆಲ್‌ರೌಂಡರ್‌ಗಳ ವಿಭಾಗದಲ್ಲಿ 7ನೇ ಸ್ಥಾನದಲ್ಲಿದ್ದರು. ಆಸಿಸ್ ವಿರುದ್ಧ ನಿಡಿದ ಭರ್ಜರಿ ಪ್ರದರ್ಶನದ ಕಾರಣದಿಂದಾಗಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು 5ನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್‌ಗಳ ಶ್ರೇಯಾಂಕಪಟ್ಟಿಯಲ್ಲಿ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿದ್ದು ಮೊಹಮ್ಮದ್ ನಬಿ ಎರಡನೇ ಸ್ಥಾನದಲ್ಲಿದ್ದಾರೆ. ಮೊಯೀನ್ ಅಲಿ ಹಾಗೂ ಶ್ರೀಲಂಕಾದ ವನಿಂದು ಹಸರಂಗ ಟಾಪ್ 5ರಲ್ಲಿರುವ ಮತ್ತಿಬ್ಬರು ಬೌಲರ್‌ಗಳಾಗಿದ್ದಾರೆ.

ಮುಂದಿನ ಪಂದ್ಯಗಳಲ್ಲಿಯೂ ಮಿಂಚುವ ವಿಶ್ವಾಸ

ಮುಂದಿನ ಪಂದ್ಯಗಳಲ್ಲಿಯೂ ಮಿಂಚುವ ವಿಶ್ವಾಸ

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಎರಡು ಪಂದ್ಯಗಳಲ್ಲಿಯೂ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವ ವಿಶ್ವಾಸವಿದೆ. ಈ ಮೂಲಕ ಉಳಿದ ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಯಿದೆ. ಬ್ಯಾಟಿಂಗ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿಕೊಂಡು ಬರುತ್ತಿರುವ ಹಾರ್ದಿಕ್ ಪಾಂಡ್ಯ ಅವರಿಂದ ಬೌಲಿಂಗ್‌ನಲ್ಲಿಯೂ ಅಂಥಾದ್ದೇ ಪ್ರದರ್ಶನ ನಿರೀಕ್ಷಿಸಲಾಗುತ್ತಿದೆ. ಟೀಮ್ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಹಿನ್ನಡೆ ಅನುಭವಿಸುತ್ತಿರುವ ಕಾರಣದಿಂದಾಗಿ ಹಾರ್ದಿಕ್ ಪಾಂಡ್ಯ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ನಾಲ್ಕನೇ ಸ್ಥಾನಕ್ಕಿಳಿದ ಬಾಬರ್, 3ನೇ ಸ್ಥಾನದಲ್ಲಿ SKY

ನಾಲ್ಕನೇ ಸ್ಥಾನಕ್ಕಿಳಿದ ಬಾಬರ್, 3ನೇ ಸ್ಥಾನದಲ್ಲಿ SKY

ಇನ್ನು ಬ್ಯಾಟರ್‌ಗಳ ಶ್ರೇಯಾಂಕಪಟ್ಟಿಯಲ್ಲಿಯೂ ಪ್ರಮುಖ ಬದಲಾವಣೆಯಾಗಿದ್ದು ಕೆಲ ಸಮಯಗಳ ಹಿಂದೆ ಅಗ್ರಸ್ಥಾನದಲ್ಲಿದ್ದ ಬಾಬರ್ ಅಜಂ 3ನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಸಿಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾತದ ಸೂರ್ಯಕುಮಾರ್ ಯಾದವ್ ಮೂರನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿ ಪಾಕಿಸ್ತಾನದ ಆರಂಬಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಇದ್ದು ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಮ್ ಇದ್ದಾರೆ.

Story first published: Wednesday, September 21, 2022, 16:50 [IST]
Other articles published on Sep 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X