ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ನೂತನ ಟಿ20 ರ‍್ಯಾಂಕಿಂಗ್: ಟಾಪ್ 10ರಲ್ಲಿ ಇರುವ ಏಕೈಕ ಭಾರತೀಯ ಈತ; ಹೊರಬಿದ್ದ ಕೊಹ್ಲಿ!

2021ರಲ್ಲಿ ವಿರಾಟ್ ಕೊಹ್ಲಿ ಸಾಲು ಸಾಲು ಸೋಲುಗಳನ್ನು ಅನುಭವಿಸುತ್ತಲೇ ಬಂದಿದ್ದಾರೆ. ಈ ವರ್ಷ ನಡೆದ 2 ಐಸಿಸಿ ಟೂರ್ನಿಗಳಲ್ಲಿ ಕಪ್ ಗೆಲ್ಲದೇ ಹೊರಬಿದ್ದ ಟೀಮ್ ಇಂಡಿಯಾ ಕಳಪೆ ಪ್ರದರ್ಶನವನ್ನು ನೀಡಿತು. ಹೌದು, ಮೊದಲಿಗೆ ಇಂಗ್ಲೆಂಡ್ ನೆಲದಲ್ಲಿ ನಡೆದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟ್ರೋಫಿಗೆ ಮುತ್ತಿಕ್ಕುವ ಅವಕಾಶವನ್ನು ಕಡಿದುಕೊಂಡ ಟೀಮ್ ಇಂಡಿಯಾ ಇತ್ತೀಚೆಗಷ್ಟೇ ಯುಎಇಯಲ್ಲಿ ಮುಕ್ತಾಯವಾದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿಯೂ ಕಪ್ ಗೆಲ್ಲುವಲ್ಲಿ ಯಶಸ್ವಿಯಾಗಲಿಲ್ಲ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಸೆಮಿಫೈನಲ್ ಪ್ರವೇಶಿಸುವ ಅರ್ಹತೆಯನ್ನು ಕಳೆದುಕೊಂಡ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿತ್ತು.

ಟೆಸ್ಟ್‌ನಿಂದ ವಿಶ್ರಾಂತಿಗೆಂದು ಹೊರಗುಳಿದ ರೋಹಿತ್ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗಟೆಸ್ಟ್‌ನಿಂದ ವಿಶ್ರಾಂತಿಗೆಂದು ಹೊರಗುಳಿದ ರೋಹಿತ್ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ

ಹೀಗೆ ಈ ವರ್ಷ ನಡೆದ ಎರಡೆರಡು ಐಸಿಸಿ ಟೂರ್ನಿಗಳಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕಪ್ ಗೆಲ್ಲಲಾಗದೇ ಹೊರಹೊಮ್ಮಿದೆ. ತನ್ನ ನಾಯಕತ್ವದಲ್ಲಿ ಮಹತ್ವದ ಟೂರ್ನಿಗಳಲ್ಲಿ ಭಾರತ ತಂಡ ಸೋತಿದ್ದು ಮಾತ್ರವಲ್ಲದೇ ಈ ವರ್ಷ ವಿರಾಟ್ ಕೊಹ್ಲಿ ಏಕದಿನ ಅತ್ಯುತ್ತಮ ಬ್ಯಾಟ್ಸ್‌ಮನ್‌ ಮತ್ತು ಟಿ ಟ್ವೆಂಟಿ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕ ಪಟ್ಟಿಗಳಲ್ಲಿ ಭಾರೀ ಕುಸಿತ ಕಾಣುವ ಮೂಲಕ ಹಿನ್ನಡೆ ಅನುಭವಿಸಿದ್ದಾರೆ. ಮೊದಲಿಗೆ 1258 ದಿನಗಳ ಸುದೀರ್ಘ ಕಾಲ ಏಕದಿನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಈ ವರ್ಷ ತಮ್ಮ ಸ್ಥಾನವನ್ನು ಬಾಬರ್ ಅಜಮ್ ಅಲಂಕರಿಸಿಕೊಂಡ ಕಾರಣ ಕುಸಿತ ಕಂಡಿದ್ದರು. ಇದಾದ ಬಳಿಕ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಶ್ರೇಯಾಂಕ ಪಟ್ಟಿಯಲ್ಲಿಯೂ ಕ್ರಮೇಣ ಕುಸಿತ ಕಂಡ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಪ್ರಕಟಗೊಂಡಿರುವ ಐಸಿಸಿ ನೂತನ ಟಿ ಟ್ವೆಂಟಿ ಅತ್ಯುತ್ತಮ ಬ್ಯಾಟ್ಸ್‌ಮನ್‌ ಶ್ರೇಯಾಂಕ ಪಟ್ಟಿಯಲ್ಲಿ 8ನೇ ಸ್ಥಾನದಿಂದ 11ನೇ ಸ್ಥಾನಕ್ಕೆ ಜಾರಿದ್ದಾರೆ.

ಭಾರತ vs ಪಾಕ್ ಸರಣಿ ಆಯೋಜನೆಗೆ ಈ ದೇಶದಿಂದ ಸಿಕ್ತು ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಮಾತುಕತೆಭಾರತ vs ಪಾಕ್ ಸರಣಿ ಆಯೋಜನೆಗೆ ಈ ದೇಶದಿಂದ ಸಿಕ್ತು ಗ್ರೀನ್ ಸಿಗ್ನಲ್, ಶೀಘ್ರದಲ್ಲೇ ಮಾತುಕತೆ

ಸದ್ಯ ನೂತನವಾಗಿ ಐಸಿಸಿ ಪ್ರಕಟಿಸಿರುವ ಟಿ ಟ್ವೆಂಟಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ 809 ಅಂಕಗಳನ್ನು ಪಡೆದುಕೊಂಡಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅಗ್ರಸ್ಥಾನದಲ್ಲಿದ್ದರೆ, 805 ಅಂಕಗಳನ್ನು ಪಡೆದಿರುವ ಇಂಗ್ಲೆಂಡ್ ತಂಡದ ಡೇವಿಡ್ ಮಲನ್ ದ್ವಿತೀಯ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಏಡನ್ ಮಾರ್ಕ್ರಮ್ ತೃತೀಯ ಸ್ಥಾನ ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಏರಿಕೆ ಕಂಡಿದ್ದು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಹೀಗೆ 8ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ 11ನೇ ಸ್ಥಾನಕ್ಕೆ ಕುಸಿದಿದ್ದು, ಸದ್ಯ ಐಸಿಸಿ ಟಿ ಟ್ವೆಂಟಿ ಬ್ಯಾಟ್ಸ್‌ಮನ್‌ ಶ್ರೇಯಾಂಕ ಪಟ್ಟಿಯ ಟಾಪ್ 10ರಲ್ಲಿ ಟೀಮ್ ಇಂಡಿಯಾ ಪರ ಓರ್ವ ಆಟಗಾರ ಮಾತ್ರ ಸ್ಥಾನ ಗಿಟ್ಟಿಸಿಕೊಂಡಿದ್ದು, ಅದರ ವಿವರ ಈ ಕೆಳಕಂಡಂತಿದೆ..

ಟಾಪ್ 10ರಲ್ಲಿರುವ ಏಕೈಕ ಭಾರತೀಯ ಈತ

ಟಾಪ್ 10ರಲ್ಲಿರುವ ಏಕೈಕ ಭಾರತೀಯ ಈತ

ಐಸಿಸಿ ನೂತನವಾಗಿ ಪ್ರಕಟಿಸಿರುವ ಅತ್ಯುತ್ತಮ ಟಿ ಟ್ವೆಂಟಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟಾಪ್ 10ರಿಂದ ವಿರಾಟ್ ಕೊಹ್ಲಿ ಹೊರಬಿದ್ದಿದ್ದು ಸದ್ಯ ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಮಾತ್ರ ಸ್ಥಾನ ಪಡೆದುಕೊಂಡಿದ್ದಾರೆ. ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ 65 ರನ್ ಬಾರಿಸಿದ್ದ ಕೆಎಲ್ ರಾಹುಲ್ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗೆ ನ್ಯೂಜಿಲೆಂಡ್ ವಿರುದ್ಧ ಆಡಿದ ಒಟ್ಟು 2 ಪಂದ್ಯಗಳಲ್ಲಿ ಕೆಎಲ್ ರಾಹುಲ್ ಬಾರಿಸಿದ 80 ರನ್ ಅವರಿಗೆ ಆರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಜಿಗಿತ ಕಾಣುವಲ್ಲಿ ಸಹಾಯ ಮಾಡಿದೆ. ಈ ಮೂಲಕ ಐಸಿಸಿ ನೂತನವಾಗಿ ಬಿಡುಗಡೆ ಮಾಡಿರುವ ಅತ್ಯುತ್ತಮ ಟಿ20 ಬ್ಯಾಟ್ಸ್‌ಮನ್‌ ಶ್ರೇಯಾಂಕ ಪಟ್ಟಿಯ ಟಾಪ್ 10ರಲ್ಲಿ ಸ್ಥಾನ ಪಡೆದುಕೊಂಡಿರುವ ಏಕೈಕ ಭಾರತೀಯ ಕ್ರಿಕೆಟಿಗ ಎಂದು ಕೆಎಲ್ ರಾಹುಲ್ ಎನಿಸಿಕೊಂಡಿದ್ದಾರೆ.

18 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಟಾಪ್ 10ರಿಂದ ಹೊರಬಿದ್ದ ಕೊಹ್ಲಿ

18 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಟಾಪ್ 10ರಿಂದ ಹೊರಬಿದ್ದ ಕೊಹ್ಲಿ

ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದದ್ದು ಇದೀಗ ಟಿಟ್ವೆಂಟಿ ಶ್ರೇಯಾಂಕದಲ್ಲಿ ಪರಿಣಾಮವನ್ನು ಬೀರಿದೆ. ಐಸಿಸಿ ಕಳೆದ ಬಾರಿ ಪ್ರಕಟಿಸಿದ್ದ ಶ್ರೇಯಾಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ ಟ್ವೆಂಟಿ ಸರಣಿಯಲ್ಲಿ ಭಾಗವಹಿಸದೇ ಇದ್ದುದರ ಕಾರಣದಿಂದಾಗಿ 11ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಮೂಲಕ ಕಳೆದ 18 ತಿಂಗಳುಗಳ ಕಾಲ ಸತತವಾಗಿ ಟಿಟ್ವೆಂಟಿ ಅತ್ಯುತ್ತಮ ಬ್ಯಾಟ್ಸ್‌ಮನ್‌ ಶ್ರೇಯಾಂಕ ಪಟ್ಟಿಯ ಟಾಪ್ 10ರಲ್ಲಿ ಸ್ಥಾನ ಪಡೆದುಕೊಂಡಿದ್ದ ಕೊಹ್ಲಿ ಇದೇ ಮೊದಲ ಬಾರಿಗೆ ಈ ಪಟ್ಟಿಯಿಂದ ಹೊರಬಿದ್ದಿದ್ದಾರೆ.

2 ಸ್ಥಾನ ಏರಿಕೆ ಕಂಡ ರೋಹಿತ್ ಶರ್ಮಾ

2 ಸ್ಥಾನ ಏರಿಕೆ ಕಂಡ ರೋಹಿತ್ ಶರ್ಮಾ

ಕಳೆದ ಟಿ ಟ್ವೆಂಟಿ ಅತ್ಯುತ್ತಮ ಬ್ಯಾಟ್ಸ್‌ಮನ್‌ ಶ್ರೇಯಾಂಕ ಪಟ್ಟಿಯಲ್ಲಿ 15ನೇ ಸ್ಥಾನದಲ್ಲಿದ್ದ ರೊಹಿತ್ ಶರ್ಮಾ ನೂತನವಾಗಿ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 13ನೇ ಸ್ಥಾನ ಪಡೆದುಕೊಳ್ಳುವುದರ ಮೂಲಕ 2 ಸ್ಥಾನಗಳ ಜಿಗಿತ ಕಂಡಿದ್ದಾರೆ. ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದ ನಂತರ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮೂಲಕ ನೂತನ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಈ ಸರಣಿಯಲ್ಲಿ ಒಟ್ಟು 159 ರನ್ ಕಲೆ ಹಾಕಿ 645 ಅಂಕಗಳನ್ನು ಪಡೆದುಕೊಂಡು 13ನೇ ಸ್ಥಾನಕ್ಕೆ ಏರಿದ್ದಾರೆ.

Story first published: Wednesday, November 24, 2021, 18:01 [IST]
Other articles published on Nov 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X