ICC T20I Rankings: 10ರೊಳಗೆ ಇಬ್ಬರು ಭಾರತೀಯರಿಗೆ ಸ್ಥಾನ

ನವದೆಹಲಿ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟಿ20ಐ ಕ್ರಿಕೆಟ್‌ಗೆ ಸಂಬಂಧಿಸಿ ನೂತನ ರ್‍ಯಾಂಕಿಂಗ್ ಪಟ್ಟಿ ಪ್ರಕಟಗೊಂಡಿದೆ. ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಇಬ್ಬರು ಆಟಗಾರರು ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಸದ್ಯದ ಟಿ20ಐ ರ್‍ಯಾಂಕಿಂಗ್‌ನಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 6ನೇ ಸ್ಥಾನದಲ್ಲಿದ್ದಾರೆ. ರಾಹುಲ್ 816 ಪಾಯಿಂಟ್ಸ್, ಕೊಹ್ಲಿ 639 ಪಾಯಿಂಟ್ಸ್ ಗಳಿಸಿದ್ದರೆ, ಇಂಗ್ಲೆಂಡ್ ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ 915 ಪಾಯಿಂಟ್ಸ್‌ನೊಂದಿಗೆ 1 ಸ್ಥಾನದಲ್ಲಿದ್ದಾರೆ.
ಟಿ2೦ಐ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿರುವ ಡೇವಿಡ್ ಮಲಾನ್ ಈ ಬಾರಿ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್‌ನಲ್ಲಿ ಆಡುತ್ತಿದ್ದು, ಅವರ ಪ್ರದರ್ಶನ ಕುತೂಹಲ ಮೂಡಿಸಿದೆ.

ಡೇವಿಡ್ ಮಲಾನ್ ನಂ.1
ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಡೇವಿಡ್ ಮಲಾನ್ (ಇಂಗ್ಲೆಂಡ್), ಕೆಎಲ್ ರಾಹುಲ್ (ಭಾರತ), ಬಾಬರ್ ಅಝಾಮ್ (ಪಾಕಿಸ್ತಾನ), ಆ್ಯರನ್ ಫಿಂಚ್ (ಆಸ್ಟ್ರೇಲಿಯಾ), ರಾಸ್ಸಿ ವ್ಯಾನ್ ಡೆರ್ ಡುಸೆನ್ (ದಕ್ಷಿಣ ಆಫ್ರಿಕಾ) ಆರಂಭಿಕ ಐದು ಸ್ಥಾನಗಳಲ್ಲಿದ್ದಾರೆ. ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಭಾರತೀಯ ಒಬ್ಬ ಬೌಲರ್ ಕೂಡ 10ರೊಳಗಿಲ್ಲ.

ಬೌಲಿಂಗ್‌ನಲ್ಲಿ ರಶೀದ್ ಮುಂದು
ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ರಶೀದ್ ಖಾನ್ (ಅಫ್ಘಾನಿಸ್ತಾನ), ತಬ್ರೈಝ್ ಸಂಶಿ (ದಕ್ಷಿಣ ಆಫ್ರಿಕಾ), ಮುಜೀಬ್ ಉರ್ ರಹ್ಮಾನ್ (ಅಫ್ಘಾನಿಸ್ತಾನ) ಆರಂಭಿಕ 3ರಲ್ಲಿದ್ದರೆ, ಆಲ್ ರೌಂಡರ್‌ಗಳಲ್ಲಿ ಮೊಹಮ್ಮದ್ ನಬಿ (ಅಫ್ಘಾನಿಸ್ತಾನ), ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ), ಗ್ಲೆನ್ ಮ್ಯಾಕ್ಸ್‌ವೆಲ್ (ಆಸ್ಟ್ರೇಲಿಯಾ) ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದುಕೊಂಡಿದ್ದಾರೆ.

ಮತ್ತೆ ಬದಲಾವಣೆ ಸಾಧ್ಯತೆ
ಮತ್ತೆ ಟಿ20ಐ ರ್‍ಯಾಂಕಿಂಗ್‌ನಲ್ಲಿ ಬದಲಾವಣೆ ಸಾಧ್ಯತೆ ಸಾಧ್ಯತೆಯಿದೆ. ಸದ್ಯ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಟೆಸ್ಟ್ ಸರಣಿ ನಡೆಯುತ್ತಿದ್ದು, ಟೆಸ್ಟ್ ಸರಣಿ ಬಳಿಕ ಐದು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಅಲ್ಲಿ ಭಾರತೀಯ ಅಥವಾ ಇಂಗ್ಲೆಂಡ್ ಆಟಗಾರರು ಉತ್ತಮ ಪ್ರದರ್ಶನ ನೀಡಿದರೆ ಟಿ20ಐ ರ್‍ಯಾಂಕಿಂಗ್‌ನಲ್ಲಿ ಮತ್ತೆ ಬದಲಾವಣೆಯಾಗುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications