ಐಸಿಸಿ ಟಿ20 ನೂತನ ಶ್ರೇಯಾಂಕ ಪಟ್ಟಿ: ರಿಜ್ವಾನ್, ಲಿವಿಂಗ್‌ಸ್ಟನ್ ಭಾರೀ ಏರಿಕೆ

ಐಸಿಸಿ ಟಿ20 ಕ್ರಿಕೆಟ್‌ನ ನೂತನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಆರಂಭಿಕ ಆಟಗಾರ ಮೊಹಮದ್ ರಿಜ್ವಾನ್ ಹಾಗೂ ಇಂಗ್ಲೆಂಡ್‌ನ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಭಾರೀ ಏರಿಕೆ ಕಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಇತ್ತೀಚೆಗೆ ಅಂತ್ಯವಾದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ತಮ್ಮ ತಂಡಗಳ ಪರವಾಗಿ ಗರಿಷ್ಠ ಸ್ಕೋರರ್ ಎನಿಸಿದ್ದಾರೆ. ಈ ಸರಣಿಯನ್ನು ಇಂಗ್ಲೆಂಡ್ 2-1 ಅಂತರದಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇನ್ನು ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ನಾಯಕ ಟಾಪ್‌10 ರಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡದ ನಾಯಕನಾಗಿರುವ ಶಿಖರ್ ಧವನ್ ಮೊದಲ ಪಂದ್ಯದಲ್ಲಿ ಅಜೇಯ 86 ರನ್‌ಗಳಿಸಿದ್ದರು. ಈ ಪ್ರದರ್ಶನದಿಂದಾಗಿ ಧವನ್ 16ನೇ ಸ್ಥಾನಕ್ಕೇರಿದ್ದಾರೆ. ಇನ್ನು ಜಿಂಬಾಬ್ವೆ ವಿರುದ್ಧ ಏಕದಿನ ಸರಣಿಯಲ್ಲಿ ಭಾಗಿಯಾಗಿರುವ ಬಾಂಗ್ಲಾದೇಶದ ಆಟಗಾರ ತಮೀಮ್ ಇಕ್ಬಾಲ್ ಶತಕವನ್ನು ದಾಖಲಿಸಿದ್ದು 23ನೇ ಸ್ಥಾನಕ್ಕೇರಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ 2021: ಸಮಯ, ನೇರಪ್ರಸಾರ, ಸಂಪೂರ್ಣ ಮಾಹಿತಿಟೋಕಿಯೋ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ 2021: ಸಮಯ, ನೇರಪ್ರಸಾರ, ಸಂಪೂರ್ಣ ಮಾಹಿತಿ

ಇನ್ನು ಟಿ20 ಮಾದರಿಯಲ್ಲಿ ಪಾಕಿಸ್ತಾನದ ಆರಂಭಿಕ ಆಟಗಾರ ರಿಜ್ವಾನ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 176 ರನ್‌ಗಳನ್ನು ಸಿಡಿಸಿದ್ದರು. ಈ ಪ್ರದರ್ಶನದಿಂದಾಗಿ ತಮ್ಮ ವೃತ್ತಿ ಜೀವನದ ಅತ್ಯುನ್ನತ ಶ್ರೇಯಾಂಕವನ್ನು ಪಡೆದುಕೊಂಡಿದ್ದಾರೆ. ನಾಲ್ಕು ಸ್ಥಾನಗಳ ಏರಿಕೆ ಕಂಡಿರುವ ರಿಜ್ವಾನ್ 7ನೇ ಸ್ಥಾನದಲ್ಲಿದ್ದಾರೆ.

Rahul Dravid ಪಂದ್ಯ ಗೆದ್ದ ನಂತರ ಹುಡುಗರಿಗೆ ಸ್ಪೂರ್ತಿ ತುಂಬಿದ್ದು ಹೀಗೆ | Oneindia Kannada

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ಶ್ರೇಯಾಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು ಭಾರತೀಯ ಆಟಗಾರರ ಪೈಕಿ ಅಗ್ರಸ್ಥಾನಿಯಾಗಿ ಮುಂದುವರಿದಿದ್ದಾರೆ. ಕೆಎಲ್ ರಾಹುಲ್ ಆರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಡೇವಿಡ್ ಮಲನ್ ಅಗ್ರಸ್ಥಾನಿಯಾಗಿ ಮುಂದುವರಿದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರೆ ಭಾರತದ ಉಪನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಮೊದಲ ಸ್ಥಾನದಲ್ಲಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Wednesday, July 21, 2021, 18:05 [IST]
Other articles published on Jul 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X