Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ರ‍್ಯಾಂಕಿಂಗ್: ಟಾಪ್ 5ಕ್ಕೇರಿದ ಕೊಹ್ಲಿ, ಕುಸಿದ ಕೆಎಲ್ ರಾಹುಲ್

ICC T20I Rankings: Virat Kohli climbs to No.5, KL Rahul slips after poor form vs England

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟಿ20 ಪಂದ್ಯ ಅಂತ್ಯವಾಗಿದ್ದು ಇಂಗ್ಲೆಂಡ್ ಭಾರತದ ವಿರುದ್ಧ ಗೆಲುವು ಸಾಧಿಸಿದೆ. ಈ ಪಂದ್ಯದ ನಂತರ ಈಗ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಬದಲಾವಣೆಗಳು ಆಗಿದೆ. ಇದರಲ್ಲಿ ಭಾರತೀಯ ತಂಡದ ನಾಯಕ ವಿರಾಟ್ ಕೊಹ್ಲಿ ಏರಿಕೆಯನ್ನು ಕಂಡಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶೂನ್ಯ ಸುತ್ತಿದ್ದ ವಿರಾಟ್ ಕೊಹ್ಲಿ ಬಳಿಕದ ಎರಡು ಪಂದ್ಯಗಳಲ್ಲಿ ಸತತ ಎರಡು ಅರ್ಧ ಶತಕವನ್ನು ಬಾರಿಸಿದ್ದಾರೆ. ದ್ವಿತೀಯ ಪಂದ್ಯದಲ್ಲಿ ಅಜೇಯ 73 ರನ್ ಬಾರಿಸಿ ಗೆಲುವಿಗೆ ಕಾರಣರಾದರೆ ತೃತೀಯ ಪಂದ್ಯದಲ್ಲಿ ಅಜೇಯ 73 ರನ್ ಬಾರಿಸಿದರು ಭಾರತ ಸವಾಲಿನ ಮೊತ್ತ ಪೇರಿಸಲು ಕಾರಣರಾದರು. ಕೊಹ್ಲಿಯ ಈ ಪ್ರದರ್ಶನದಿಂದ ಶ್ರೇಯಾಂಕ ಪಟ್ಟಿಯಲ್ಲಿ ಮತ್ತೆ ಟಾಪ್ 5ರಲ್ಲಿ ಕಾಣಿಸಿಕೊಂಡಿದ್ದಾರೆ. ಆರನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಒಂದು ಸ್ಥಾನದ ಏರಿಕೆ ಕಂಡು ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಮೂರು ಮಾದರಿಯಲ್ಲೂ ಟಾಪ್ 5 ಶ್ರೇಯಾಂಕವನ್ನು ಹೊಂದಿರುವ ಏಕೈಕ ಬ್ಯಾಟ್ಸ್‌ಮನ್ ಎನಿಸಿದ್ದಾರೆ

ಇನ್ನು ಟೀಮ್ ಇಂಡಿಯಾದ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ನೀಡಿದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಒಂದು ಸ್ಥಾನದ ಕುಸಿತವನ್ನು ಕಂಡಿದ್ದಾರೆ. 3ನೇ ಸ್ಥಾನದಲ್ಲಿದ್ದ ಕೆಎಲ್ ರಾಹುಲ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದು ಪಾಕಿಸ್ತಾನದ ಬಾಬರ್ ಅಜಂ 3ನೇ ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್ ಡೇವಿಡ್ ಮಲನ್ ಮೊದಲ ಸ್ಥಾನದಲ್ಲಿಯೇ ಮುಂದುವರಿದಿದ್ದು ಆರೋನ್ ಫಿಂಚ್ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ತಂಡದ ಡೆವೋನ್ ಕಾನ್ವೆ ಟಾಪ್ 10ರಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅಂತಿಮ ಎರಡು ಪಂದ್ಯಗಳು ಬಾಕಿಯಿದೆ. ಇಂಗ್ಲೆಂಡ್ 2-1 ಅಂತರದಿಂದ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿದ್ದು ಭಾರತ ಈ ಸರಣಿಯಲ್ಲಿ ಗೆಲುವನ್ನು ಸಾಧಿಸಬೇಕಾದರೆ ಉಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಿದೆ.

Story first published: Wednesday, March 17, 2021, 16:59 [IST]
Other articles published on Mar 17, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+