ICC T20I rankings: ವಿರಾಟ್ ಕೊಹ್ಲಿ ಬೆನ್ನಲ್ಲೇ ಇದ್ದಾರೆ ಕೆಎಲ್ ರಾಹುಲ್!

ನವದೆಹಲಿ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನೂತನ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟಿ20ಐ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲೇ ಉಳಿದುಕೊಂಡಿದ್ದಾರೆ. ಭಾರತದ ಮತ್ತೊಬ್ಬ ಬ್ಯಾಟ್ಸ್‌ಮನ್, ಕನ್ನಡಿಗ ಕೆಎಲ್ ರಾಹುಲ್ 6ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ.
ಬುಧವಾರ (ಜುಲೈ 7) ಪ್ರಕಟವಾಗಿರುವ ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ 762 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ವಿರಾಟ್ ಕೊಹ್ಲಿ 5ನೇ ಸ್ಥಾನ ಉಳಿಸಿಕೊಂಡಿದ್ದರೆ, ಕೆಎಲ್ ರಾಹುಲ್ 743 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ 6ನೇ ಸ್ಥಾನಕ್ಕೇರಿದ್ದಾರೆ.
ಟಿ20ಐ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿ ಇಂಗ್ಲೆಂಡ್‌ನ ಡೇವಿಡ್ ಮಲನ್ (888), ಆಸ್ಟ್ರೇಲಿಯಾದ ಆ್ಯರನ್ ಫಿಂಚ್ (830), ಪಾಕಿಸ್ತಾನದ ಬಾಬರ್ ಅಝಾಮ್ (828), ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಆರಂಭಿಕ 4 ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ದಕ್ಷಿಣ ಆಫ್ರಿಕಾದ ತಬ್ರೈಝ್ ಸಂಶಿ, ಅಫ್ಘಾನಿಸ್ತಾನ ರಶೀದ್ ಖಾನ್, ಆಸ್ಟ್ರೇಲಿಯಾದ ಆ್ಯಷ್ಟನ್ ಅಗರ್, ಇಂಗ್ಲೆಂಡ್‌ನ ಆದಿಲ್ ರಶೀದ್, ಶ್ರೀಲಂಕಾದ ವನಿಂದು ಡಿ ಸಿಲ್ವಾ ಆರಂಭಿಕ ಐದು ಸ್ಥಾನಗಳಲ್ಲಿದ್ದಾರೆ. ಆಲ್ ರೌಂಡರ್‌ಗಳಲ್ಲಿ ಅಫ್ಘಾನ್‌ನ ಮೊಹಮ್ಮದ್ ನಬಿ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಮೊದಲ ಮೂರು ಸ್ಥಾನಗಳಲ್ಲಿದ್ದಾರೆ. ದೇಶಗಳ ರ್‍ಯಾಂಕಿಂಗ್‌ನಲ್ಲಿ ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್ ಅಗ್ರ ಸ್ಥಾನಗಳಲ್ಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications