R Ashwin: ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಶ್ವಿನ್‌ಗೆ ಅಗ್ರ ಸ್ಥಾನ: ಯಶಸ್ವಿ ಜೈಸ್ವಾಲ್, ರೋಹಿತ್ ಶ್ರೇಯಾಂಕ ಏರಿಕೆ
ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿ ಮುಗಿದಿದೆ. ಭಾರತ ತಂಡ ತವರಿನಲ್ಲಿ ಅಬ್ಬರದ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಸಂಘಟಿತ ಕಂಡು ಬಂದಿದೆ. ಆದರೆ ಯುವ ಆಟಗಾರ ಯಶಸ್ವಿ ಜೈಸ್ವಾಲ್, ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಹಾಗೂ ಆರ್ ಅಶ್ವಿನ್ ಕೊಡುಗೆ ಅಪಾರ.
ಇಂಗ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ಫಲವಾಗಿ ಅಶ್ವಿನ್ ಶ್ರೇಯಾಂಕದಲ್ಲಿ ಏರಿಕೆ ಆಗಿದೆ. ಅಲ್ಲದೆ ಭಾರತದವರೆ ಆದ ಜಸ್ಪ್ರಿತ್ ಬುಮ್ರಾ ಅವರನ್ನು ಹಿಂದಿಕ್ಕಿ ಅಶ್ವಿನ್ ನಂಬರ್ ಒನ್ ಸ್ಥಾನವನ್ನು ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧ ಅಶ್ವಿನ್ 26 ವಿಕೆಟ್‌ಗಳನ್ನು ಪಡೆದ ಅಬ್ಬರಿಸಿದ್ದರು. ಇದರ ಫಲವಾಗಿ ಐಸಿಸಿ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಸದ್ಯ ಅಶ್ವಿನ್ 870 ಅಂಕಗಳೊಂದಿಗೆ ಟೆಸ್ಟ್‌ನಲ್ಲಿ ನಂಬರ್ 1 ಸ್ಥಾನವನ್ನು ಹೊಂದಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್ ವುಡ್ ಮೂರನೇ ಸ್ಥಾನದಲ್ಲಿ ಜಸ್ಪ್ರಿತ್ ಬುಮ್ರಾ ಇದ್ದು ಇಬ್ಬರು 847 ಅಂಕಗಳನ್ನು ಕಲೆ ಹಾಕಿದ್ದಾರೆ.

ಜಡ್ಡುಗೆ ಏಳನೇ ಸ್ಥಾನ
ಇನ್ನು ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಶ್ರೇಯಾಂಕದಲ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಇವರು 788 ಅಂಕಗಳನ್ನು ಹೊಂದಿದ್ದಾರೆ. ಚೈನಾ ಮೆನ್ ಬೌಲರ್ ಕುಲ್ದೀಪ್ ಯಾದವ್ ಸಹ ಭರ್ಜರಿ ಏರಿಕೆ ಕಂಡಿದ್ದಾರೆ. ಇಂಗ್ಲೆಂಡ್ ಬ್ಯಾಟರ್‌ಗಳನ್ನು ಕಾಡಿದ್ದ ಕುಲ್‌ದೀಪ್ ಐಸಿಸಿ ನೂತನ ಶ್ರೇಯಾಂಕದಲ್ಲಿ 16ನೇ ಸ್ಥಾನದಲ್ಲಿದ್ದಾರೆ.
ಯಶಸ್ವಿ ಜೈಸ್ವಾಲ್‌ಗೆ 8ನೇ ಸ್ಥಾನ
ಟೀಮ್ ಇಂಡಿಯಾದ ಗೆಲುವಿನಲ್ಲಿ ಮಹತ್ವರ ಪಾತ್ರವನ್ನು ವಹಿಸಿದ್ದ ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್, ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಇವರು 712 ರನ್‌ಗಳ ಅಮೋಘ ಇನ್ನಿಂಗ್ಸ್ ಕಟ್ಟಿದ್ದರು. ಇದರ ಫಲವಾಗಿ ಯಶಸ್ವಿ ಶ್ರೇಯಾಂಕದಲ್ಲಿ ಏರಿಕೆ ಆಗಿದೆ. ಸದ್ಯ ಯಶಸ್ವಿ 740 ಪಾಯಿಂಟ್‌ಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದು, ಎರಡು ಸ್ಥಾನ ಜಿಗಿತ ಕಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 751 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಇವರು ಐದು ಸ್ಥಾನ ಜಿಗಿತ ಕಂಡಿದ್ದಾರೆ. ಇಂಗ್ಲೆಂಡ್ ವಿರುದ್ದದ ಸರಣಿಯನ್ನು ಮಿಸ್ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿತ ಕಂಡಿದ್ದು ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಶುಭಮನ್ ಸ್ಥಾನ ಏರಿಕೆ
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಟೀಮ್ ಇಂಡಿಯಾದ ಭವಿಷ್ಯದ ಸೂಪರ್ ಸ್ಟಾರ್ ಶುಭ್‌ಮನ್ ಗಿಲ್ 452 ರನ್ ಸೇರಿಸಿದ್ದರು. ಇದರ ಫಲವಾಗಿ ಅವರ ಶ್ರೇಯಾಂಕದಲ್ಲೂ ಏರಿಕೆ ಆಗಿದೆ. ಗಿಲ್ 11 ಸ್ಥಾನ ಏರಿಕೆ ಕಂಡಿದ್ದು ಸದ್ಯ 21ನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications