ಭರ್ಜರಿ ಫಾರ್ಮ್‌ನಲ್ಲಿರುವ ಟೀಮ್ ಇಂಡಿಯಾ ಸ್ಟಾರ್ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಐಸಿಸಿ ಶ್ರೇಯಾಂಕದಲ್ಲಿ ಮಂದಹಾಸ ಬೀರಿದ್ದಾರೆ. ಇಂಗ್ಲೆಂಡ್ ಬೌಲರ್‌ಗಳನ್ನು ಮನ ಬಂದಂತೆ ದಂಡಿಸಿರುವ ಯುವ ಆಟಗಾರ ಸರಣಿಯಲ್ಲಿ ಅಬ್ಬರಿಸಿದ್ದಾರೆ. ಈಗಾಗಲೇ ಸರಣಿಯಲ್ಲಿ ಎರಡು ದ್ವಿಶತಕ ಬಾರಿಸಿರುವ ಯಶಸ್ವಿ ಜೈಸ್ವಾಲ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐಸಿಸಿ ಟೆಸ್ಟ್ ಶ್ರೇಯಂಕದಲ್ಲಿ ಟಾಪ್ ಸ್ಥಾನಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ. ರೋಹಿತ್ ತಲಾ ಎರಡು ಸ್ಥಾನ ಜಿಗಿತ ಕಂಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ. ರೋಹಿತ್ ತಲಾ ಎರಡು ಸ್ಥಾನ ಜಿಗಿತ ಕಂಡಿದ್ದಾರೆ. ಶುಬ್ಮನ್ ಗಿಲ್ ಮತ್ತು ರವೀಂದ್ರ ಜಡೇಜಾ ತಮ್ಮ ಸ್ಥಾನಗಳಲ್ಲಿ ಏರಿದ್ದಾರೆ. ಬೌಲಿಂಗ್ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ ಮುನ್ನಡೆ ಸಾಧಿಸಿದ್ದಾರೆ.

ಟೆಸ್ಟ್ ಶ್ರೇಯಾಂಕದಲ್ಲಿ ಭಾರತದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಒಂದು ಸ್ಥಾನ ಏರಿದ್ದಾರೆ. ಅವರು 8 ನೇ ಸ್ಥಾನದಲ್ಲಿದ್ದಾರೆ. ಯಶಸ್ವಿ ಜೈಸ್ವಾಲ್ 2 ಸ್ಥಾನ ಏರಿಕೆ ಕಂಡಿದ್ದಾರೆ. ಅವರು 10 ನೇ ಸ್ಥಾನಕ್ಕೆ ತಲುಪಿದ್ದಾರೆ. ಯಶಸ್ವಿ ಇಂಗ್ಲೆಂಡ್ ವಿರುದ್ಧ ಇತ್ತೀಚೆಗೆ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ 11ನೇ ಸ್ಥಾನದಲ್ಲಿದ್ದಾರೆ. ರೋಹಿತ್ ಕೂಡ ಎರಡು ಸ್ಥಾನ ಜಿಗಿದಿದ್ದಾರೆ. ಶುಭ್‌ಮನ್ ಗಿಲ್ 31ನೇ ಸ್ಥಾನದಲ್ಲಿ ಮತ್ತು ಜಡೇಜಾ 37ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ ಒಂದು ಸ್ಥಾನ ಕಳೆದುಕೊಂಡಿದ್ದಾರೆ. ಅವರು 7 ನೇ ಸ್ಥಾನಕ್ಕೆ ಬಂದಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. ಇದರಲ್ಲಿ ಯಶಸ್ವಿ ರನ್ ಗಳಿಸಿದ ವಿಷಯದಲ್ಲಿ ಪ್ರಸ್ತುತ ಅಗ್ರಸ್ಥಾನದಲ್ಲಿದ್ದಾರೆ. ಅವರು 4 ಪಂದ್ಯಗಳಲ್ಲಿ 655 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಯಶಸ್ವಿ ಎರಡು ದ್ವಿಶತಕ ಬಾರಿಸಿದ್ದಾರೆ.

ಶುಭ್‌ಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದಾರೆ. ಅವರು 4 ಪಂದ್ಯಗಳಲ್ಲಿ 342 ರನ್ ಗಳಿಸಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯನ್ನು ನೋಡಿದರೆ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನದಲ್ಲಿದ್ದಾರೆ. ಬುಮ್ರಾ 3 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿದ್ದಾರೆ. ಟಾಮ್ ಹಾರ್ಟ್ಲಿ ಅಗ್ರಸ್ಥಾನದಲ್ಲಿದ್ದಾರೆ. 4 ಪಂದ್ಯಗಳಲ್ಲಿ ಇವರು 20 ವಿಕೆಟ್ ಪಡೆದಿದ್ದಾರೆ.