ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಆಲ್‌ರೌಂಡರ್‌ಗಳಲ್ಲಿ ಅಶ್ವಿನ್‌ಗೆ 2ನೇ ಸ್ಥಾನ, ಟಾಪ್ 10 ಸನಿಹ ಮಯಾಂಕ್

ICC Test ranking: Ashwin climbed to No. 2 in all-rounder rankings, Mayank jumps to 11th in batting chart

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಅಂತರದಿಂದ ಗೆಲುವು ಸಾಧಿಸಿದೆ. ಈ ಸರಣಿಯ ಮುಕ್ತಾಯದ ಬಳಿಕ ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ಇಬ್ಬರು ಪ್ರಮುಖ ಆಟಗಾರರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ಮಹತ್ವದ ಸಾಧನೆ ಮಾಡಿದ್ದು 2ನೇ ಸ್ಥಾನಕ್ಕೇರಿದ್ದಾರೆ. ಆರ್ ಅಶ್ವಿನ್ 360 ರೇಟಿಂಗ್ ಪಾಯಿಂಗ್‌ನೊಂದಿಗೆ ಈ ಸಾಧನೆ ಮಾಡಿದ್ದಾರೆ. ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಇದ್ದು ಅಶ್ವಿನ್‌ಗಿಂತ 22 ಅಂಕಗಳಷ್ಟು ಮುಂದಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಆರ್ ಅಶ್ವಿನ್‌ಗಿಂತ 12 ಅಂಕಗಳಷ್ಟು ಹಿಂದಿದ್ದಾರೆ.

ವಿಜಯ್ ಹಜಾರೆ ಟ್ರೋಫಿ 2021: ಮಹಾರಾಷ್ಟ್ರ ತಂಡವನ್ನ ಮುನ್ನಡೆಸಲಿರುವ ರುತುರಾಜ್ ಗಾಯಕ್ವಾಡ್ವಿಜಯ್ ಹಜಾರೆ ಟ್ರೋಫಿ 2021: ಮಹಾರಾಷ್ಟ್ರ ತಂಡವನ್ನ ಮುನ್ನಡೆಸಲಿರುವ ರುತುರಾಜ್ ಗಾಯಕ್ವಾಡ್

ಇನ್ನು ಗಾಯದ ಕಾರಣದಿಂದಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ ರವೀಂದ್ರ ಜಡೇಜಾ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆರ್ ಅಶ್ವಿನ್ 70 ರನ್‌ಗಳನ್ನು ಬ್ಯಾಟ್ ಮೂಲಕ ಗಳಿಸಿದ್ದರೆ ಬೌಲಿಂಗ್‌ನಲ್ಲಿ 14 ವಿಕೆಟ್ ಪಡೆದುಕೊಂಡಿದ್ದಾರೆ. ಈ ಮೂಲಕ ಆರ್ ಅಶ್ವಿನ್ 9ನೇ ಸರಣಿಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

30ನೇ ಸ್ಥಾನದಿಂದ 11ನೇ ಸ್ಥಾನಕ್ಕೆ ಜಿಗಿದ ಮಯಾಂಕ್: ಎರಡನೇ ಟೆಸ್ಟ್‌ನಲ್ಲಿ ಭರ್ಜರಿ ಶತಕ ಹಾಗೂ ಅರ್ಧ ಶತಕಗಳಿಸಿ ಮಿಂಚಿದ್ದ ಮಯಾಂಕ್ ಅಗರ್ವಾಲ್ ಬ್ಯಾಟರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಭಾರೀ ಸಾಧನೆ ಮಾಡಿದ್ದಾರೆ. ಸರಣಿಯ ಆರಂಭಕ್ಕೂ ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ 30ನೇ ಸ್ಥಾನದಲ್ಲಿದ್ದ ಮಯಾಂಕ್ ಅಗರ್ವಾಲ್ ಎರಡನೇ ಪಂದ್ಯದಲ್ಲಿ ಸಿಡಿಸಿದ ಭರ್ಜರಿ 150 ರನ್ ಹಾಗೂ 62 ರನ್‌ಗಳ ಕೊಡುಗೆಯ ಕಾರಣದಿಂದಾಗಿ 11ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಟಾಪ್ 10ಗೆ ಸನಿಹದಲ್ಲಿದ್ದಾರೆ.

ದ. ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಹಿನ್ನಡೆ; ಈ ಇಬ್ಬರು ಪ್ರಮುಖ ಆಟಗಾರರೇ ಅನುಮಾನ!ದ. ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಹಿನ್ನಡೆ; ಈ ಇಬ್ಬರು ಪ್ರಮುಖ ಆಟಗಾರರೇ ಅನುಮಾನ!

ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಆರ್ ಅಶ್ವಿನ್ ಎರಡನೇ ಸ್ಥಾನವನ್ನು ಯಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಇದ್ದಾರೆ. ಪ್ಯಾಟ್ ಕಮ್ಮಿನ್ಸ್ ಆಶಸ್ ಸರಣಿಯ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳ ಗೊಂಚಲು ಪಡೆಯುವ ಮೂಲಕ ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದ್ದಾರೆ.

ಇನ್ನು ಮೊಹಮ್ಮದ್ ಸಿರಾಜ್ ಮುಂಬೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಮಿಂಚಿದ ಪರಿಣಾಮವಾಗಿ 6 ಸ್ಥಾನಗಳ ಏರಿಕೆ ಕಂಡಿದ್ದು 41ನೇ ಸ್ಥಾನದಲ್ಲಿದ್ದಾರೆ. ಇನ್ನು ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾ ಕಿವೀಸ್ ವಿರುದ್ಧದ ಟೆಸ್ಟ್ ಸರಣಿಯ ಎರಡು ಪಂದ್ಯಗಳಿಂದ ಹೊರಗುಳಿದಿದ್ದರೂ ತಮ್ಮ 10ನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

2022 ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್: ರಾಜತಾಂತ್ರಿಕ ಬಹಿಷ್ಕಾರಕ್ಕೆ ಆಸ್ಟ್ರೇಲಿಯಾ ನಿರ್ಧಾರ2022 ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್: ರಾಜತಾಂತ್ರಿಕ ಬಹಿಷ್ಕಾರಕ್ಕೆ ಆಸ್ಟ್ರೇಲಿಯಾ ನಿರ್ಧಾರ

ಇನ್ನು ಮುಂಬೈ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಎಲ್ಲಾ 10 ವಿಕೆಟ್‌ಗಳನ್ನು ಪಡೆಯುವ ಮೂಲಕ ಇತಿಹಾಸ ನಿಮಿರ್ಮಿಸಿದ್ದ ಅಜಾಜ್ ಪಟೇಲ್ ಸಹಜವಾಗಿಯೇ ಎರಿಕೆ ಕಂಡಿದ್ದಾರೆ. 23 ಸ್ಥಾನಗಳ ಏರಿಕೆ ಕಂಡಿರುವ ಅಜಾಜ್ 38ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಭಾರತದ ಯುವ ಸ್ಪಿನ್ನರ್ ಅಕ್ಷರ್ ಪಟೇಲ್ ಕೂಡ 3 ಸ್ಥಾನಗಳ ಪ್ರಗತಿ ಕಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ನಾಯಕ ಇವರೇ | Oneindia Kannada

Story first published: Wednesday, December 8, 2021, 17:23 [IST]
Other articles published on Dec 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X