For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ನಂಬರ್ 1: WTC ಫೈನಲ್‌ಗೂ ಮುನ್ನ ಅಗ್ರ ಪಟ್ಟ ಅಲಂಕರಿಸಿದ ಭಾರತ

ಐಸಿಸಿ ವಿಶ್ವ ಟೆಸ್ಟ್ ಶ್ರೇಯಾಂಕಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾವನ್ನು ಹಿಂದಿಕ್ಕಿದ್ದು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಕೆಲವೇ ದಿನಗಳಿರುವಾಗ ಭಾರತ ಕ್ರಿಕೆಟ್ ತಂಡ ಟೆಸ್ಟ್ ಶ್ರೇಯಾಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯವಾದ ಒಂದು ವಾರಗಳ ಬಳಿಕ ಇಂಗ್ಲೆಂಡ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿದೆ.

ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈವರೆಗೆ ಆಸ್ಟ್ರೇಲಿಯಾ ತಂಡವೇ ಟೆಸ್ಟ್ ಮಾದರಿಯಲ್ಲಿ ನಂಬರ್ 1 ತಂಡ ಎನಿಸಿಕೊಂಡಿತ್ತು. ಆದರೆ ಈಗ ಭಾರತ ಆಸ್ಟ್ರೇಲಿಯಾವನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ. ಮೇ 2 ಮಂಗಳವಾರ ಅಂತಾರಾಷ್ಟ್ರೀರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಈ ಬಗ್ಗೆ ಘೋಷಣೆ ಮಾಡಿದೆ.

ICC Test Ranking: India became new no. 1 team in Test cricket ahead of WTC Final

ಭಾರತದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾ 1-2 ಅಂತರದಿಂದ ಭಾರತಕ್ಕೆ ಶರಣಾಗಿದ್ದರೂ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿಯೇ ಮುಂದುವರಿದಿತ್ತು. ಕಳೆದ ಒಂದೂವರೆ ವರ್ಷದಿಂದ ಆಸ್ಟ್ರೇಲಿಯಾ ತಂಡ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದು 15 ತಿಂಗಳಿನಿಂದ ಅಗ್ರಸ್ಥಾನವನ್ನು ಅಲಂಕರಿಸಿಕೊಂಡಿತ್ತು. ಇದೀಗ ಆಸ್ಟ್ರೇಲಿಯಾ ತಂಡದ ಪಾರುಪತ್ಯವನ್ನು ಭಾರತ ಮುರುಯುವಲ್ಲಿ ಯಶಸ್ವಿಯಾಗಿದೆ.

ಕಳೆದ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 4-0 ಅಂತರದಿಂದ ಮಣಿಸುವ ಮೂಲಕ ಆಸ್ಟ್ರೇಲಿಯಾ ಭಾರತವನ್ನು ಹಿಂದಿಕ್ಕಿ ಮೊದಲ ಸ್ಥಾನವನ್ನು ಒಡೆಯುವಲ್ಲಿ ಯಶಸ್ವಿಯಾಗಿತ್ತು. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಸೋಲು ಅನುಭವಿಸಿದ ಭಾರತ ಮೊದಲ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಈ ಸರಣಿ ಸೋಲಿನ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವದಿಂದಲೂ ಕೆಳಗಿಳಿಯಬೇಕಾಯಿತು.

ಅಗ್ರ ಮೊದಲ ಎರಡು ಸ್ಥಾನಗಳನ್ನು ಹೊರತುಪಡಿಸಿದರೆ ಉಳಿದ ಯಾವ ತಂಡಗಳ ಸ್ಥಾನದಲ್ಲಿಯೂ ಬದಲಾವಣೆಯಾಗಿಲ್ಲ. ಕುತೂಹಲಕಾರಿ ಸಂಗತಿಯೆಂದರೆ ಬೆನ್ ಸ್ಟೋಕ್ಸ್ ನೇತೃತ್ವವದ ಇಂಗ್ಲೆಂಡ್ ತಂಡ ಬೇಜ್‌ಬಾಲ್ ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬರುತ್ತಿದೆ. ಹಾಗಿದ್ದರೂ ಶ್ರೇಯಾಂಕಪಟ್ಟಿಯಲ್ಲಿ ಮೇಲುಗೈ ಸಾಧಿಸಲು ಸಾಧ್ಯವಾಗಿಲ್ಲ.

Story first published: Tuesday, May 2, 2023, 16:08 [IST]
Other articles published on May 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+