For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ರ‍್ಯಾಂಕಿಂಗ್‌: ಭಾರತದ ಸ್ಥಾನ ಭದ್ರ, 2ನೇ ಸ್ಥಾನದಲ್ಲಿ ಭಾರೀ ಬದಲಾವಣೆ

ICC Test Ranking: India Retain Top Spot

ಈ ಸರಣಿಗೂ ಮುನ್ನ ನ್ಯೂಜಿಲೆಂಡ್ ತಂಡ ನಾಲ್ಕನೇ ಸ್ಥಾನದಲ್ಲಿತ್ತು. ಕಳೆದ ಡಿಸೆಂಬರ್- ಜನವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು 0-3ರಲ್ಲಿ ಕಳೆದುಕೊಂಡ ನಂತರ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು. ಆದರೆ ಈಗ ನ್ಯೂಜಿಲೆಂಡ್ ಎರಡು ಸ್ಥಾನಗಳ ಏರಿಕೆ ಕಾಣುವಲ್ಲಿ ಯಶಸ್ವಿಯಾಗಿದೆ.

ಸದ್ಯ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತವು 116 ಅಂಕಗಳನ್ನು ಹೊಂದಿದೆ. ನ್ಯೂಜಿಲೆಂಡ್ 110 ಅಂಕಗಳನ್ನು ಹೊಂದಿದೆ. 108 ಅಂಕಗಳೊಂದಿಗೆ ಆಸ್ಟ್ರೇಲಿಯಾ ಮೂರನೇ, ಇಂಗ್ಲೆಂಡ್ 105 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ ದಕ್ಷಿಣ ಆಫ್ರಿಕಾ 98 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

ಇನ್ನು ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ 120 ಅಂಕಗಳನ್ನು ಗಳಿಸಿಕೊಂಡಿದೆ. ಈ ಮೂಲಕ ಕಿವಿಸ್ ಪಡೆ ಐಸಿಸಿ ಚಾಂಪಿಯನ್‌ಶಿಪ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಭಾರತ 360 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 296 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 146 ಅಂಕಗಳೊಂದಿಗೆ ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದ್ದರೆ ಮತ್ತು 140 ಅಂಕಗಳೊಂದಿಗೆ ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ.

ಇನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾದ ಯುವ ಆಟಗಾರ ಮಾರ್ನಸ್ ಲ್ಯಬುಶೈನ್ ಮೂರನೇ ಸ್ಥಾನಕ್ಕೇರಿದರೆ ನ್ಯೂಜಿಲೆಂಡ್ ನಾಯಕ ಒಂದು ಸ್ಥಾನ ಕಳೆದುಕೊಂಡು ನಾಲ್ಕನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್ ಎರಡು ಟೆಸ್ಟ್ ಪಂದ್ಯ ಗೆಲ್ಲುವ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಲ್ಲಿ 120 ಗೆದ್ದಿದೆ. ಈ 120 ಅಂಕಗಳೊಂದಿಗೆ 180 ಅಂಕ ಸೇರಿಸಿದ್ದು ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್‌ಶಿಪ್ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ತಲುಪಿದೆ. ಭಾರತ 360 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 296 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 146 ಅಂಕಗಳೊಂದಿಗೆ ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದ್ದರೆ ಮತ್ತು 140 ಅಂಕಗಳೊಂದಿಗೆ ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ.

Story first published: Tuesday, March 3, 2020, 17:01 [IST]
Other articles published on Mar 3, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+