For Quick Alerts
ALLOW NOTIFICATIONS  
For Daily Alerts
 

ICC Ranking: 1,466 ದಿನಗಳ ಬಳಿಕ ನಂ.1 ಸ್ಥಾನದಿಂದ ಕೆಳಗಿಳಿದ ಪ್ಯಾಟ್ ಕಮಿನ್ಸ್, ಅಗ್ರಸ್ಥಾನಕ್ಕೇರಿದ ಇಂಗ್ಲೆಂಡ್ ವೇಗಿ

ICC Test Ranking: James Anderson Becomes The Number 1 Ranked Test Bowler, Ashwin On 2nd Spot

ಭಾರತದ ವಿರುದ್ಧ ಸತತವಾಗಿ ಎರಡು ಟೆಸ್ಟ್ ಪಂದ್ಯಗಳನ್ನು ಸೋತು ಕಂಗೆಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿತ್ತಿದೆ. ಸತತ 1466 ದಿನಗಳಿಂದ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಂಬರ್ 1 ಬೌಲರ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.

40 ವರ್ಷದ ಇಂಗ್ಲೆಂಡ್ ಟೆಸ್ಟ್ ತಂಡದ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅಗ್ರಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಳಿಕ ಅವರು ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ.

ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನಕ್ಕೇರಿದ್ದು, ಜೇಮ್ಸ್ ಆಂಡರ್ಸನ್‌ಗಿಂದ 2 ಅಂಕಗಳಿಂದ ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಮಿಂಚಿದ್ದ ಅಶ್ವಿನ್ ಅಗ್ರಸ್ಥಾನಕ್ಕೆ ಸನಿಹವಾಗಿದ್ದಾರೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿದರೆ, ಅವರು ಟೆಸ್ಟ್‌ ಮಾದರಿಯಲ್ಲಿ ನಂಬರ್ 1 ಬೌಲರ್ ಆಗುವ ಅವಕಾಶ ಇದೆ. ಪ್ಯಾಟ್ ಕಮಿನ್ಸ್ ಸದ್ಯ 3ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ICC Test Ranking: James Anderson Becomes The Number 1 Ranked Test Bowler, Ashwin On 2nd Spot

1466 ದಿನಗಳ ಪ್ರಾಬಲ್ಯ ಅಂತ್ಯ

ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ, ಮಾರಕ ವೇಗಿ ಪ್ಯಾಟ್ ಕಮಿನ್ಸ್ 1466 ದಿನಗಳ ಕಾಲ ನಂಬರ್ 1 ಸ್ಥಾನವನ್ನು ಅಲಂಕರಿಸಿದ ಬಳಿಕ, ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಭಾರತದ ವಿರುದ್ಧದ ಸರಣಿಗೆ ಮುನ್ನ ಅವರು ಮೊದನೇ ಸ್ಥಾನದಲ್ಲಿದ್ದರು. ಆದರೆ, ಭಾರತದ ವಿರುದ್ಧದ ಉತ್ತಮ ಪ್ರದರ್ಶನ ನೀಡದ ಬಳಿಕ ಮೊದಲನೇ ಸ್ಥಾನವನ್ನು ಕಳೆದುಕೊಂಡಿದ್ದಾರೆ. 852 ಅಂಕಗಳೊಂದಿಗೆ ಅವರು ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್‌ನ ಅನುಭವಿ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ 866 ಅಂಕಗಳೊಂದಿಗೆ ನಂಬರ್ 1 ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಪಡೆದು ಮಿಂಚಿದ್ದರು. ಅವರ ಈ ಪ್ರದರ್ಶನದ ಮೂಲಕ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.

ICC Test Ranking: James Anderson Becomes The Number 1 Ranked Test Bowler, Ashwin On 2nd Spot

ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನಕ್ಕೆ

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಎರಡು ಪಂದ್ಯಗಳಿಂದ 14 ವಿಕೆಟ್ ಪಡೆದಿರುವ ರವಿಚಂದ್ರನ್ ಅಶ್ವಿನ್ ಸದ್ಯ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. 864 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮುಗಿಯುವ ವೇಳೆಗೆ ಮೊದಲನೇ ಸ್ಥಾನಕ್ಕೇರಲು ಅವಕಾಶ ಇದೆ.

ಮತ್ತೊಬ್ಬ ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಕೂಡ 9ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಡೇಜಾ 17 ವಿಕೆಟ್ ಪಡೆದುಕೊಂಡಿದ್ದಾರೆ.

Story first published: Wednesday, February 22, 2023, 15:41 [IST]
Other articles published on Feb 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+