ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್: 3ನೇ ಸ್ಥಾನಕ್ಕೇರಿದ ಇಂಗ್ಲೆಂಡ್‌ ವೇಗಿ ಜೇಮ್ಸ್ ಆ್ಯಂಡರ್ಸನ್

ICC Test Ranking: James Anderson moves up three places

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮುಕ್ತಾಯದ ಬಳಿಕ ಐಸಿಸಿ ಹೊಸ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ ಬೌಲಿಂಗ್ ವಿಭಾಗದಲ್ಲಿ ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆ್ಯಂಡರ್ಸನ್ ಉತ್ತಮ ಸಾಧನೆ ಮಾಡಿದ್ದು ಮೂರನೇ ಸ್ಥಾನಕ್ಕೇರಿದ್ದಾರೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಪಾಕಿಸ್ತಾನದ ವಿರುದ್ಧದ ತವರಿನಲ್ಲಿ ನಡೆದ ಸರಣಿಯಲ್ಲಿ ಇಂಗ್ಲೆಂಡ್‌ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ ಬಳಿಕ ಜೇಮ್ಸ್ ಆ್ಯಂಡರ್ಸನ್ ಅದ್ಭುತ ಆಟವನ್ನು ಪ್ರದರ್ಶಿಸಿದ್ದರು. ಈ ಸರಣಿಯಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಕಿತ್ತ ಸಾಧೆಯನ್ನು ಮಾಡಿದರು ಜೇಮ್ಸ್ ಆ್ಯಂಡರ್ಸನ್. ಈ ಮೂಲಕ ವೇಗಿಗಳಲ್ಲಿ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಎನಿಸಿದರು. ಕಳೆದ ತಿಂಗಳು ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಜಿಮ್ಮಿ 40 ರನ್‌ಗೆ 6 ವಿಕೆಟ್ ಕಬಳಿಸಿ ಮಿಂಚಿದ್ದರು.

ಆರ್‌ಸಿಬಿ ಬ್ಯಾಟಿಂಗ್‌ ಸಲಹೆಗಾರರಾಗಿ ಸಂಜಯ್ ಬಂಗಾರ್ ಆಯ್ಕೆಆರ್‌ಸಿಬಿ ಬ್ಯಾಟಿಂಗ್‌ ಸಲಹೆಗಾರರಾಗಿ ಸಂಜಯ್ ಬಂಗಾರ್ ಆಯ್ಕೆ

ಶ್ರೀಲಂಕಾದಲ್ಲಿ ನಿಡಿದ ಅದ್ಭುತ ಪ್ರದರ್ಶನದ ಬಳಿಕ ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡರು ಇಂಗ್ಲೆಂಡ್‌ನ ಅನುಭವಿ ವೇಗಿ. ಇಂಗ್ಲೆಂಡ್ 227 ರನ್‌ಗಳಿಂದ ಗೆದ್ದ ಈ ಪಂದ್ಯದಲ್ಲಿ ಜೇಮ್ಸ್ ಆ್ಯಂಡರ್ಸನ್ 5 ವಿಕೆಟ್ ಕಿತ್ತು ಮಿಂಚಿದ್ದಾರೆ.

ಜೇಮ್ಸ್ ಆ್ಯಂಡರ್ಸನ್ ಏಷ್ಯಾದಲ್ಲಿ ನೀಡಿದ ಈ ಅದ್ಭುತ ಪ್ರದರ್ಶನದ ಕಾರಣದಿಂದಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ನಂಬರ್ 3 ಬೌಲರ್ ಎನಿಸಿದ್ದಾರೆ. ನೀಲ್ ವ್ಯಾಗ್ನಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಸೌಥಿ ಒಂದೊಂದು ಸ್ಥಾನಗಳ ಕುಸಿತವನ್ನು ಕಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಸೋತರೆ ಕೊಹ್ಲಿ ಕ್ಯಾಪ್ಟನ್ ಆಗಿ ಉಳಿಯಲ್ಲ!ಇಂಗ್ಲೆಂಡ್ ವಿರುದ್ಧ 2ನೇ ಟೆಸ್ಟ್ ಸೋತರೆ ಕೊಹ್ಲಿ ಕ್ಯಾಪ್ಟನ್ ಆಗಿ ಉಳಿಯಲ್ಲ!

ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಪ್ಯಾಟ್ ಕಮ್ಮಿನ್ಸ್ ಮುಂದುವರಿದಿದ್ದು ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್‌ನವರೇ ಆದ ಸ್ಟುವರ್ಟ್ ಬ್ರಾಡ್ ಇದ್ದಾರೆ. ಭಾರತೀಯ ಬೌಲಿರ್‌ಗಳ ರವಿಚಂದ್ರನ್ ಅಶ್ವಿನ್ ಹಾಗೂ ಜಸ್ಪ್ರೀತ್ ಬೂಮ್ರಾ ತಲಾ ಒಂದು ಸ್ಥಾನಗಳ ಏರಿಕೆ ಕಂಡಿದ್ದು ಕ್ರಮವಾಗಿ ಏಳು ಹಾಗೂ ಎಂಟನೇ ಸ್ಥಾನದಲ್ಲಿದ್ದಾರೆ.

Story first published: Wednesday, February 10, 2021, 21:26 [IST]
Other articles published on Feb 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X