Jasprit Bumrah: ನಂಬರ್ ಒನ್ ಟೆಸ್ಟ್ ಬೌಲರ್ ಪಟ್ಟ ಕಳೆದುಕೊಂಡ ಜಸ್ಪ್ರೀತ್ ಬುಮ್ರಾ
ಐಸಿಸಿ ಇತ್ತೀಚಿನ ರ‍್ಯಾಕಿಂಗ್ ಬಿಡುಗಡೆ ಮಾಡಿದೆ. ಈ ರ‍್ಯಾಕಿಂಗ್ ಪಟ್ಟಿಯಲ್ಲಿ ಹಲವು ಆಟಗಾರರ ಸ್ಥಾನ ಬದಲಾಗಿದೆ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತ ನಂತರ ಟೀಮ್ ಇಂಡಿಯಾ ಆಟಗಾರರು ಟೆಸ್ಟ್ ರ‍್ಯಾಕಿಂಗ್‌ನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮಿಂಚುತ್ತಿದ್ದಾರೆ. ಆದರೆ ಬುಮ್ರಾ ಟೆಸ್ಟ್ ಕ್ರಿಕೆಟ್‌ನ ನಂಬರ್ ಒನ್ ಬೌಲರ್ ಪಟ್ಟವನ್ನು ಕಳೆದುಕೊಂಡಿದ್ದಾರೆ.

ಬುಧವಾರ ಬಿಡುಗಡೆಯಾದ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ನ ಪುರುಷರ ಟೆಸ್ಟ್ ಬೌಲರ್ ರ‍್ಯಾಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಬುಮ್ರಾ ಅವರನ್ನು ಹಿಂದಿಕ್ಕುವ ಮೂಲಕ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ನಂಬರ್ ಒನ್ ಟೆಸ್ಟ್ ಬೌಲರ್ ಆಗಿದ್ದಾರೆ. ರಬಾಡ 860 ರೇಟಿಂಗ್ ಅಂಕಗಳೊಂದಿಗೆ ನಂಬರ್-1 ಟೆಸ್ಟ್ ಬೌಲರ್ ಪಟ್ಟವನ್ನು ಅಲಂಕರಿಸಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಋತುವಿನಲ್ಲಿ ರಬಾಡ ಅಮೋಘ ಫಾರ್ಮ್‌ನಲ್ಲಿದ್ದಾರೆ. ಇತ್ತೀಚೆಗೆ ಮೀರ್‌ಪುರದಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 9 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಇದರೊಂದಿಗೆ ರಬಾಡ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನದಲ್ಲಿ 300 ವಿಕೆಟ್‌ಗಳನ್ನು ಪೂರೈಸಿದ್ದರು. ಮಿರ್‌ಪುರ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 7 ವಿಕೆಟ್‌ಗಳಿಂದ ಜಯ ಸಾಧಿಸಿತ್ತು.
ಮತ್ತೊಂದೆಡೆ, ಪುಣೆಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಭಾರತದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಒಂದೇ ಒಂದು ವಿಕೆಟ್ ಪಡೆಯಲು ಶಕ್ತರಾಗಿದ್ದರು. ಈ ಪ್ರದರ್ಶನದ ಆಧಾರದ ಮೇಲೆ ಬುಮ್ರಾ ಎರಡು ಸ್ಥಾನಗಳನ್ನು ಕಳೆದುಕೊಂಡು ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಎರಡನೇ ಸ್ಥಾನದಲ್ಲಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದಿರುವ ಭಾರತದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಹಿನ್ನಡೆ ಅನುಭವಿಸಿದ್ದಾರೆ. ಎರಡು ಸ್ಥಾನ ಕಳೆದುಕೊಂಡು ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಟಾಪ್ ಐದು ಬೌಲರ್‌ಗಳಲ್ಲಿ ಸ್ಥಾನ ಪಡೆದಿದ್ದಾರೆ.
ಇತ್ತೀಚೆಗಷ್ಟೇ ರಾವಲ್ಪಿಂಡಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಮೋಘ ಬೌಲಿಂಗ್ ಪ್ರದರ್ಶಿಸಿದ ಪಾಕಿಸ್ತಾನದ ಸ್ಪಿನ್ನರ್ ನೋಮನ್ ಅಲಿ ಟಾಪ್ ಹತ್ತು ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಭಾರತದ ವಿರುದ್ಧ ಐತಿಹಾಸಿಕ ಸರಣಿ ಗೆಲುವಿನ ಸಂದರ್ಭದಲ್ಲಿ ನ್ಯೂಜಿಲೆಂಡ್‌ನ ಹೀರೋ ಆಗಿ ಹೊರಹೊಮ್ಮಿದ ಮಿಚೆಲ್ ಸ್ಯಾಂಟ್ನರ್ 44ನೇ ಸ್ಥಾನಕ್ಕೆ ತಲುಪಿದ್ದಾರೆ. ಪುಣೆ ಟೆಸ್ಟ್ ನಲ್ಲಿ ಎರಡು ಇನ್ನಿಂಗ್ಸ್‌ಗಳಲ್ಲಿ ಸ್ಯಾಂಟ್ನರ್ 13 ವಿಕೆಟ್ ಪಡೆದು ಭಾರತದ ಸರಣಿ ಸೋಲಿಗೆ ಕಾರಣವಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications