Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ: ಭಾರೀ ಏರಿಕೆ ಕಂಡ ಕೆಎಲ್ ರಾಹುಲ್: 9ನೇ ಸ್ಥಾನಕ್ಕೆ ಕುಸಿದ ಕೊಹ್ಲಿ

ICC test Ranking: KL Rahul gain 18 places and Kohli drop to 9th, Shami and Bumrah Move up

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಡೆಯುತ್ತಿರುವಂತೆಯೇ ಐಸಿಸಿ ಹೊಸ ಟೆಸ್ಟ್ ಶ್ರೇಯಾಂಕಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಭಾರತೀಯ ಆಟಗಾರರ ಪೈಕಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ಭಾರೀ ಏರಿಕೆಯನ್ನು ಕಂಡಿದ್ದಾರೆ. ಸೆಂಚೂರಿಯನ್‌ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ ಅಮೋಘ ಶತಕ ಸಿಡಿಸಿದ್ದರು. ಈ ಪ್ರದರ್ಶನದಿಂದಾಗಿ ಭಾರತ ಈ ಪಂದ್ಯದಲ್ಲಿ 113 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಕೆಎಲ್ ರಾಹುಲ್ ನೀಡಿದ ಈ ಪ್ರದರ್ಶನದಿಂದಾಗಿ ಶ್ರೇಯಾಂಕಪಟ್ಟಿಯಲ್ಲಿ ಭಾರೀ ಏರಿಕೆ ಕಂಡಿದ್ದಾರೆ.

18 ಸ್ಥಾನಗಳ ಏರಿಕೆ ಸಾಧಿಸಿರುವ ಕೆಎಲ್ ರಾಹುಲ್ ಬ್ಯಾಟರ್‌ಗಳ ಪಟ್ಟಿಯಲ್ಲಿ 31ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೆಎಲ್ ರಾಹುಲ್ 2017ರಲ್ಲಿ 18ನೇ ಸ್ಥಾನವನ್ನು ಪಡೆದುಕೊಂಡಿರುವುದು ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಅತ್ಯುತ್ತಮ ಶ್ರೇಯಾಂಕವಾಗಿದೆ. ಇನ್ನು ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 60 ರನ್‌ಗಳ ಕೊಡುಗೆ ನೀಡಿದ ಮಯಾಂಕ್ ಅಗರ್ವಾಲ್ ಒಂದು ಸ್ಥಾನಗಳ ಏರಿಕೆ ಕಂಡಿದ್ದಾರೆ.

ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ವೇಗಿಗಳಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಶ್ರೇಯಾಂಕಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ. ಮೊದಲ ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಪಡೆದ ಬೂಮ್ರಾ 3 ಸ್ಥಾನಗಳ ಏರಿಕೆ ಕಂಡಿದ್ದು 9ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಸಂಪಾದಿಸಿದ್ದ ಮೊಹಮ್ಮದ್ ಶಮಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು 17ನೇ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ಆಟಗಾರರ ಪೈಕಿ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 77 ರನ್‌ಗಳ ಹೋರಾಟದ ಪ್ರದರ್ಶನ ನೀಡಿದ್ದ ನಾಯಕ ಡೀನ್ ಎಲ್ಗರ್ ಎರಡು ಸ್ಥಾನಗಳ ಏರಿಕೆ ಕಂಡಿದ್ದಾರೆ. ಇನ್ನು ಮೊದಲ ಪಂದ್ಯದಲ್ಲಿ 52 ರನ್ ಹಾಗೂ ಅಜೇಯ 32 ರನ್‌ಗಳಿಸಿದ್ದ ಟೆಂಬಾ ಬವುಮಾ 16 ಸ್ಥಾನಗಳ ಏರಿಕೆ ಕಂಡಿದ್ದು 39ನೇ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ಬೌಲರ್‌ಗಳ ಪೈಕಿ ಕಗಿಸೋ ರಬಡಾ ಮೊದಲ ಪಂದ್ಯದಲ್ಲಿ 7 ವಿಕೆಟ್ ಪಡೆದು ಮಿಂಚಿದ್ದರು. ಇವರು ಒಂದು ಸ್ಥಾನ ಏರಿಕೆ ಕಂಡಿದ್ದು 6ಮೇ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಮೊದಲ ಪಂದ್ಯದಲ್ಲಿ 8 ವಿಕೆಟ್ ಪಡೆದುಕೊಂಡಿದ್ದ ಲುಂಗಿ ಎನ್‌ಗಿಡಿ 16 ಸ್ಥಾನಗಳ ಏರಿಕೆ ಕಂಡಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಅವರು 30ನೇ ಸ್ಥಾನ ಸಂಪಾದಿಸಿದ್ದಾರೆ.

Story first published: Wednesday, January 5, 2022, 16:59 [IST]
Other articles published on Jan 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+