ICC Test Rankings: ಅಗ್ರಸ್ಥಾನ ಉಳಿಸಿಕೊಂಡ ಆರ್ ಅಶ್ವಿನ್; ಬ್ಯಾಟಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಕೇನ್ ವಿಲಿಯಮ್ಸನ್
ಭಾರತ ತಂಡದ ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇತ್ತೀಚಿನ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ವಿಶ್ವದ ನಂ.1 ಬೌಲರ್ ಆಗಿ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ.
ಇನ್ನು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರು ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಅವರಿಂದ ಅಗ್ರಸ್ಥಾನವನ್ನು ಕಸಿದುಕೊಂಡಿದ್ದಾರೆ.
ಕಳೆದ ತಿಂಗಳು ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದರೂ, ಭಾರತ ತಂಡ ತನ್ನ ತಂಡಗಳ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

ಇನ್ನು ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 860 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ ಮತ್ತು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು 826 ಅಂಕಗಳೊಂದಿಗೆ ಎರಡು ಸ್ಥಾನಗಳ ಏರಿಕೆ ಕಂಡು ಎರಡನೇ ಸ್ಥಾನ ತಲುಪಿದ್ದಾರೆ.
434 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿ ತಮ್ಮ ಸ್ಥಾನ ಉಳಿಸಿಕೊಂಡ ಮತ್ತೊಬ್ಬ ಭಾರತೀಯ ಆಟಗಾರನಾಗಿದ್ದಾರೆ.
ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿ ಮುಂದುವರಿದರೆ, ಅಕ್ಷರ್ ಪಟೇಲ್ 5ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಭವಿಸಿದ ಕಾರು ಅಪಘಾತದ ನಂತರ ಕ್ರಿಕೆಟ್‌ನಿಂದ ದೂರ ಉಳಿದಿರುವ ರಿಷಭ್ ಪಂತ್ 10ನೇ ಸ್ಥಾನದಲ್ಲಿದ್ದು, ಅಗ್ರ 10ರೊಳಗಿರುವ ಏಕೈಕ ಭಾರತೀಯ ಬ್ಯಾಟರ್ ಆಗಿದ್ದಾರೆ. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ 12 ಮತ್ತು 14ನೇ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ.
ಇನ್ನು ಶುಭ್ಮನ್ ಗಿಲ್ ಏಕದಿನ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 8ನೇ ಸ್ಥಾನ ಮತ್ತು ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ. ಅಗ್ರ 10ರೊಳಗೆ ಮೂವರು ಭಾರತೀಯ ಬ್ಯಾಟರ್‌ಗಳಿದ್ದಾರೆ. ಇನ್ನು ಮೊಹಮ್ಮದ್ ಸಿರಾಜ್ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಅಗ್ರ 10ರಲ್ಲಿರುವ ಏಕೈಕ ಭಾರತೀಯ.
ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡ ಸ್ಟೀವನ್ ಸ್ಮಿತ್; ಕೇನ್ ವಿಲಿಯಮ್ಸನ್ ಅಗ್ರಸ್ಥಾನದಲ್ಲಿ
ಇಂಗ್ಲೆಂಡ್ ತಂಡದ ಮಾಜಿ ನಾಯಕ ರೂಟ್ ಐದನೇ ಸ್ಥಾನಕ್ಕೆ ಕುಸಿದ ಕಾರಣ, ಕೇನ್ ವಿಲಿಯಮ್ಸನ್ ಅಗ್ರಸ್ಥಾನವನ್ನು ಮರಳಿ ಪಡೆಯಲು ಯಶಸ್ವಿಯಾದರು. ಈ ಹಿಂದೆ 2015ರಲ್ಲಿ ಮೊದಲ ಸ್ಥಾನವನ್ನು ಪಡೆದ ಅವರು, ಆಗಸ್ಟ್ 2021ರಲ್ಲಿ ಅಗ್ರಸ್ಥಾನದಲ್ಲಿದ್ದರು.
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯದ ನಂತರ ಆಸ್ಟ್ರೇಲಿಯಾ ಬ್ಯಾಟರ್ ಸ್ಟೀವ್ ಸ್ಮಿತ್ ಟೆಸ್ಟ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಸ್ಮಿತ್ ಅವರ 110 ಮತ್ತು 34 ರನ್‌ಗಳ ಮೂಲಕ ಪಂದ್ಯಶ್ರೇಷ್ಠ ಆಟಗಾರನಾದರು ಮತ್ತು ನಾಲ್ಕು ಸ್ಥಾನಗಳ ಏರಿಕೆ ಕಂಡು ಎರಡನೇ ಸ್ಥಾನ ತಲುಪಿದ್ದಾರೆ.
ಕೇನ್ ವಿಲಿಯಮ್ಸನ್ 883 ರೇಟಿಂಗ್ ಪಾಯಿಂಟ್‌ಗಳನ್ನು ಪಡೆದಿದ್ದರೆ, ಸ್ಟೀವನ್ ಸ್ಮಿತ್ 882 ರೇಟಿಂಗ್ ಪಾಯಿಂಟ್ ಗಳಿಸಿ ಕೇವಲ ಒಂದು ಪಾಯಿಂಟ್ ಹಿಂದೆ ಇದ್ದಾರೆ.
ಇನ್ನು ಮೂರನೇ ಸ್ಥಾನದಲ್ಲಿರುವ ಮಾರ್ನಸ್ ಲ್ಯಾಬುಸ್‌ಚಾಗ್ನೆ ಅವರು 873 ರೇಟಿಂಗ್ ಪಾಯಿಂಟ್ ಗಳಿಸಿದ್ದರೆ, 4ನೇ ಸ್ಥಾನದಲ್ಲಿರುವ ಟ್ರಾವಿಸ್ ಹೆಡ್ 872 ಪಾಯಿಂಟ್ ಹೊಂದಿದ್ದಾರೆ.
ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್ ಬೆನ್ ಡಕೆಟ್ ಎರಡನೇ ಆಶಸ್ ಟೆಸ್ಟ್‌ನಲ್ಲಿ 98 ಮತ್ತು 83 ರನ್ ಗಳಿಸಿದ ನಂತರ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಟಾಪ್ 20ರೊಳಗೆ ಪ್ರವೇಶಿಸಲು 24 ಸ್ಥಾನಗಳ ಏರಿಕೆ ಕಂಡಿದ್ದಾರೆ. ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಎರಡನೇ ಪಂದ್ಯದಲ್ಲಿ 155 ರನ್‌ಗಳ ನಂತರ ಒಂಬತ್ತು ಸ್ಥಾನ ಮೇಲಕ್ಕೇರಿ 23ನೇ ಸ್ಥಾನಕ್ಕೆ ತಲುಪಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications