
1205 ದಿನಗಳ ಬಳಿಕ ಟೆಸ್ಟ್ ಶತಕ ಬಾರಿಸಿದ ವಿರಾಟ್ ಕೊಹ್ಲಿ
ರವಿಚಂದ್ರನ್ ಅಶ್ವಿನ್ ಭಾರತ ಟೆಸ್ಟ್ ತಂಡದಲ್ಲಿ ಸದಾ ಸ್ಥಿರ ಪ್ರದರ್ಶನ ನೀಡುತ್ತಿರುವ ಆಟಗಾರನಾಗಿದ್ದರೆ, ಇನ್ನು ಆಸ್ಟ್ರೇಲಿಯಾ ವಿರುದ್ಧ ಡ್ರಾಗೊಂಡ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ 1205 ದಿನಗಳ ಬಳಿಕ ಟೆಸ್ಟ್ ಶತಕ ಬಾರಿಸಿದ ವಿರಾಟ್ ಕೊಹ್ಲಿ ಮರಳಿ ಬ್ಯಾಟಿಂಗ್ ಫಾರ್ಮ್ ಪಡೆದುಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ 186 ರನ್ ಗಳಿಸಿದ ಅವರು, ದುರದೃಷ್ಟವಶಾತ್ ದ್ವಿಶತಕ ವಂಚಿತರಾದರು.
ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ಅವರಿಗಿಂತ ಮುಂದಿರುವ ಭಾರತೀಯ ಆಟಗಾರರೆಂದರೆ ರಿಷಭ್ ಪಂತ್ 9ನೇ ಸ್ಥಾನ, ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ.

ರವಿಚಂದ್ರನ್ ಅಶ್ವಿನ್ 25 ವಿಕೆಟ್ ಪಡೆದರು
ಇದೇ ವೇಳೆ ಭಾರತೀಯ ಆಲ್‌ರೌಂಡರ್ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬ್ಯಾಟ್‌ನೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದರು. ಏಕೆಂದರೆ, ಅಕ್ಷರ್ ಪಟೇಲ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಎಂಟು ಸ್ಥಾನಗಳ ಏರಿಕೆ ಕಂಡು 44ನೇ ಸ್ಥಾನ ತಲುಪಿದರು. ಇನ್ನು ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ತಲುಪಲು ಒಂದು ಸ್ಥಾನ ಏರಿಕೆ ಕಂಡರು. ನಾಲ್ಕು ಪಂದ್ಯಗಳ ಸರಣಿಯಲ್ಲಿ 264 ರನ್ ಗಳಿಸಿದರು.
ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಜೋಡಿ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತದ ಪ್ರಮುಖ ಬೌಲರ್‌ಗಳಾಗಿ ಮೂಡಿಬಂದರು. ರವಿಚಂದ್ರನ್ ಅಶ್ವಿನ್ 25 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 22 ವಿಕೆಟ್ ಪಡೆದರು. ಇದೇ ವೇಳೆ ರವೀಂದ್ರ ಜಡೇಜಾ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಉಸ್ಮಾನ್ ಖವಾಜಾ ಎರಡು ಸ್ಥಾನಗಳ ಏರಿಕೆ ಕಂಡು 7ನೇ ಸ್ಥಾನಕ್ಕೆ
ಇನ್ನು ಇತ್ತೀಚಿನ ಐಸಿಸಿ ರ್‍ಯಾಂಕಿಂಗ್ ಅಪ್‌ಡೇಟ್‌ನಲ್ಲಿ ಆಸ್ಟ್ರೇಲಿಯಾ ಆಟಗಾರರು ಏರಿಕೆ ಕಂಡಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ 333 ರನ್ ಗಳಿಸಿ ಎರಡು ಸ್ಥಾನಗಳ ಏರಿಕೆ ಕಂಡು 7ನೇ ಸ್ಥಾನಕ್ಕೆ ತಲುಪಿದ್ದಾರೆ. ಅಹಮದಾಬಾದ್‌ನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಮಾತ್ರ ಆಡಿದ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಒಟ್ಟು 11 ಸ್ಥಾನ ಮೇಲೇರಿ 26ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.


Click it and Unblock the Notifications
