Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಸಿಸಿ Ranking ಬಿಡುಗಡೆ, ಅಗ್ರಪಟ್ಟ ಕಾಯ್ದುಕೊಂಡ ವಿರಾಟ್ ಕೊಹ್ಲಿ

Virat Kohli stays on top ICC releases the new ranking list | VIRAT KOHLI | ODI | ONEINDIA KANNADA
ICC Test Ranking Released, Kohli Remain Top

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೆಸ್ಟ್ ರ್ಯಾಂಕಿಂಗ್ ಬಿಡುಗಡೆ ಮಾಡಿದ್ದು, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂಬರ್ 1 ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ (ಡಿಸೆಂಬರ್ 16)ರಂದು ಬಿಡುಗಡೆ ಮಾಡಿದ ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿಯು ಆಸ್ಟ್ರೇಲಿಯಾ ಸ್ಟಾರ್‌ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್‌ಗಿಂತಲೂ 17 ಪಾಯಿಂಟ್ಸ್ ಹೆಚ್ಚು ಹೊಂದಿದ್ದಾರೆ.

ಟೀಮ್ ಇಂಡಿಯಾ ಐಕಾನ್ ಪ್ಲೇಯರ್ ವಿರಾಟ್ ಕೊಹ್ಲಿ ಖಾತೆಯಲ್ಲಿ ಒಟ್ಟಾರೆ 928 ಪಾಯಿಂಟ್ಸ್ ಇದೆ. ಎರಡನೇ ಸ್ಥಾನದಲ್ಲಿರುವ ಸ್ಟೀವ್ ಸ್ಮಿತ್ 911 ಪಾಯಿಂಟ್ಸ್ ಹೊಂದಿದ್ದು 2ನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ನ್ಯೂಜಿಲೆಂಡ್ ಕ್ಯಾಪ್ಟನ್ ಕೇನ್ ವಿಲಿಯಮ್ಸನ್, ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ, ಆಸ್ಟ್ರೇಲಿಯಾದ ಮಾರ್ನಸ್ ಲಾಬುಶೇನ್ ನಂತರದ ಸ್ಥಾನ ಅಲಂಕರಿಸಿದ್ದಾರೆ.

ಟೀಮ್ ಇಂಡಿಯಾದ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ 759 ಪಾಯಿಂಟ್ಸ್ ಗಳಿಸಿದ್ದು 6ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಅಜಮ್ ಟಾಪ್ 10ನಲ್ಲಿ ಇದೇ ಮೊದಲ ಬಾರಿಗೆ ಸ್ಥಾನ ಪಡೆದಿದ್ದಾರೆ.

ಇನ್ನು ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾದ ಬೌಲರ್ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲೇ ಮುಂದುವರಿದಿದ್ದು, 898 ಪಾಯಿಂಟ್ಸ್‌ಗಳೊಂದಿಗೆ ನಂಬರ್ 1 ಟೆಸ್ಟ್ ಬೌಲರ್ ಆಗಿ ಮುಂದುವರಿದಿದ್ದಾರೆ. ನಂತರದ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಕಗಿಸೋ ರಬಾಡ, ನ್ಯೂಜಿಲೆಂಡ್‌ನ ನೀಲ್ ವಾಗ್ನರ್, ವಿಂಡೀಸ್ ಆಲ್‌ರೌಂಡರ್ ಜೇಸನ್ ಹೋಲ್ಡರ್ ಕ್ರಮವಾಗಿ 2,3 ಮತ್ತು 4ನೇ ಸ್ಥಾನ ಅಲಂಕರಿಸಿದ್ದಾರೆ.

ಗಾಯದಿಂದ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ 5ನೇ ಸ್ಥಾನದಿಂದ ಕುಸಿತ ಕಂಡಿದ್ದು, 794 ಪಾಯಿಂಟ್ಸ್‌ಗಳೊಂದಿಗೆ 6ನೇ ಸ್ಥಾನಕ್ಕೆ ಜಾರಿದ್ದಾರೆ. ಗಾಯದ ಕಾರಣ ಅವರು ಹಿಂದಿನ ಸರಣಿಗಳಲ್ಲಿ ಆಡಿರಲಿಲ್ಲ. ಆಸ್ಟ್ರೇಲಿಯಾದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್ 5ನೇ ಸ್ಥಾನಕ್ಕೇರಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವು ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಕೊಹ್ಲಿ ಪಡೆ 360 ಪಾಯಿಂಟ್ಸ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ (216), ಶ್ರೀಲಂಕಾ (80),ನ್ಯೂಜಿಲೆಂಡ್(60),ಇಂಗ್ಲೆಂಡ್ (56) ಕ್ರಮವಾಗಿ ನಂತರದ ಸ್ಥಾನದಲ್ಲಿವೆ.

Story first published: Tuesday, December 17, 2019, 13:05 [IST]
Other articles published on Dec 17, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+