ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ನೂತನ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆ: ಟಾಪ್ 5ರಲ್ಲಿ ಬೂಮ್ರಾ, 9ನೇ ಸ್ಥಾನಕ್ಕೆ ಕುಸಿದ ಕೊಹ್ಲಿ

ICC Test Rankings: Bumrah jumps to 4th rank, Kohli drop to ninth in batters list

ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಈಗಾಗಲೇ ಅಂತ್ಯವಾಗಿದ್ದು ಕ್ರಿಕೆಟ್ ಪ್ರೇಮಿಗಳ ಚಿತ್ತ ಈಗ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯತ್ತ ನೆಟ್ಟಿದೆ. ಈ ಸಂದರ್ಭದಲ್ಲಿ ಐಸಿಸಿ ನೂತನ ಶ್ರೇಯಾಂಕಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ ಬೌಲರ್‌ಗಳ ಪಟ್ಟಿಯಲ್ಲಿ ಟಾಪ್ 5ರಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಮಾಜಿ ನಾಯಕ ವಿರಾಟ್ ಕೊಹ್ಲಿ ಶ್ರೇಯಾಂಕಪಟ್ಟಿಯಲ್ಲಿ ಕುಸಿತ ಕಂಡಿದ್ದು 9ನೇ ಸ್ಥಾನಕ್ಕೆ ಇಳಿದಿದ್ದಾರೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಬೆಂಗಳೂರಿನಲ್ಲಿ ನಡೆದಿದ್ದ 2ನೇ ಪಂದ್ಯದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಮಿಂಚುಹರಿಸಿದ್ದರು. ಅಹರ್ನಿಶಿಯಾಗಿ ನಡೆದಿದ್ದ ಈ ಪಂದ್ಯದಲ್ಲಿ ಬೂಮ್ರಾ ಒಟ್ಟು 8 ವಿಕೆಟ್ ಸಂಪಾದಿಸಿದ್ದಾರೆ. ಈ ಬೌಲಿಂಗ್ ದಾಧನೆಯ ಕಾರಣದಿಂದಾಗಿ ಬೂಮ್ರಾ ಎರಡು ಸ್ಥಾನಗಳ ಏರಿಕೆ ಕಂಡಿದ್ದಾರೆ. ಈ ಪಂದ್ಯಲ್ಲೂ ಮುನ್ನ ಬೂಮ್ರಾ 6ನೇ ಸ್ಥಾನದಲ್ಲಿದ್ದರು., ಈಗ ಅವರು ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಈ ಮೂಲಕ ಶಾಹೀನ್ ಅಫ್ರಿದಿ, ಕೈಲ್ ಜೇಮಿಸನ್, ಟಿಮ್ ಸೌಥೀ, ಜೇಮ್ಸ್ ಆಂಡರ್ಸನ್, ನೀಲ್ ವ್ಯಾಗ್ನರ್ ಮತ್ತು ಜೋಶ್ ಹೇಜಲ್‌ವುಡ್ ಅವರನ್ನು ಹಿಂದಿಕ್ಕಿದ್ದಾರೆ.

ಇಂಗ್ಲೆಂಡ್ ವಿರುದ್ಧ ಮುಗ್ಗರಿಸಿದ ಭಾರತದ ವನಿತೆಯರು: ಪಾಯಿಂಟ್ಸ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿತಇಂಗ್ಲೆಂಡ್ ವಿರುದ್ಧ ಮುಗ್ಗರಿಸಿದ ಭಾರತದ ವನಿತೆಯರು: ಪಾಯಿಂಟ್ಸ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿತ

ವಿರಾಟ್ ಕೊಹ್ಲಿ ಕುಸಿತ

ವಿರಾಟ್ ಕೊಹ್ಲಿ ಕುಸಿತ

ಇತ್ತ ಬ್ಯಾಟಿಂಗ್‌ನಲ್ಲಿ ವೈಫಲ್ಯವನ್ನು ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿಯೂ ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ವಿಫಲವಾದರು. ಹೀಗಾಗಿ ಬ್ಯಾಟರ್‌ಗಳ ಶ್ರೇಯಾಂಕಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕು ಸ್ಥಾನಗಳ ಕುಸಿತ ಕಂಡಿದ್ದಾರೆ. ಆದರೆ ಕೊಹ್ಲಿ ಅಗ್ರ 10ರಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ 10ನೇ ಸ್ಥಾನದಲ್ಲಿದ್ದಾರೆ.

ಭಾರತದ ಪರ ರೋಹಿತ್ ಅಗ್ರ

ಭಾರತದ ಪರ ರೋಹಿತ್ ಅಗ್ರ

ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕೊಹ್ಲಿ 45 ರನ್ ಬಾರಿಸಿದ್ದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ ಕ್ರಮವಾಗಿ 23 ಹಾಗೂ 13 ರನ್ ಗಳಿಸಿ ಔಟಾದರು. 2019ರ ನವೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ವಿರಾಟ್ ಕೊಹ್ಲಿ 136 ರನ್ ಗಳಿಸಿದ ಬಳಿಕ ಶತಕ ಬಾರಿಸಲು ಸತತವಾಗಿ ವಿಫಲವಾಗುತ್ತಾ ಬಂದಿದ್ದಾರೆ. ಇನ್ನು ಭಾರತದ ನಾಯಕ ರೋಹಿತ್ ಶರ್ಮಾ 6ನೇ ಸ್ಥಾನದಲ್ಲಿದ್ದು ಬ್ಯಾಟರ್‌ಗಳ ಪಟ್ಟಿಯಲ್ಲಿ ಭಾರತದ ಅಗ್ರ ಶ್ರೇಯಾಂಕದ ಆಟಗಾರ ಎನಿಸಿಕೊಂಡಿದ್ದಾರೆ.

ಶ್ರೇಯಸ್ ಭರ್ಜರಿ ಪ್ರಗತಿ

ಶ್ರೇಯಸ್ ಭರ್ಜರಿ ಪ್ರಗತಿ

ಇನ್ನು ಪಿಂಕ್‌ ಬಾಲ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿರುವ ಶ್ರೇಯಸ್ ಐಯ್ಯರ್ ಭರ್ಜರಿ ಪ್ರಗತಿ ಸಾಧಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಟಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 92 ರನ್ ಗಳಿಸಿದ್ದ ಶ್ರೇಯಸ್ ಐಯ್ಯರ್ ಎರಡನೇ ಇನ್ನಿಂಗ್ಸ್‌‌ನಲ್ಲಿ 67 ಬಾರಿಸಿದ್ದರು. ಈ ಪ್ರದರ್ಶನಕ್ಕೆ ಐಯ್ಯರ್ ಶ್ರೇಯಾಂಕ ಪಟ್ಟಿಯಲ್ಲಿ ಉಡುಗೊರೆ ಪಡೆದುಕೊಂಡಿದ್ದಾರೆ. 40 ಸ್ಥಾನಗಳ ಏರಿಕೆ ಕಂಡಿರುವ ಐಯ್ಯರ್ 37ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಶ್ರೀಲಂಕಾ ನಾಯಕ ದಿಮುತ್ ಕರುಣರತ್ನೆ ಬೆಂಗಳೂರು ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಶತಕ ಬಾರಿಸಿದ್ದು ತಮ್ಮ ವೃತ್ತಿ ಜೀವನದ ಅತ್ಯುನ್ನತ 3ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ದೇಶಕ್ಕಾಗಿ ಅಲ್ಲ ಹುಡುಗಿಯರಿಗಾಗಿ ಕ್ರಿಕೆಟ್ ಆಡಿದ್ರಾ ಶಾಯಬ್ ಅಕ್ತರ್? | Oneindia Kannada
ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡ್ಡು ಕುಸಿತ

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡ್ಡು ಕುಸಿತ

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದ ರವೀಂದ್ರ ಜಡೇಜಾ ಮೊದಲ ಸ್ಥಾನವನ್ನು ಮತ್ತೊಮ್ಮೆ ವೆಸ್ಟ್ ಇಂಡೀಸ್ ಆಲ್‌ರೌಂಡರ್ ಜೇಸನ್ ಹೋಲ್ಡರ್‌ಗೆ ಬಿಟ್ಟುಕೊಟ್ಟಿದ್ದಾರೆ. ಭಾರತದ ಆರ್ ಅಶ್ವಿನ್ ಶಕೀಬ್ ಅಲ್ ಹಸನ್ ಮತ್ತು ಬೆನ್ ಸ್ಟೋಕ್ಸ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಟಾಪ್ 5ರಲ್ಲಿರುವ ಇತರ ಆಟಗಾರರಾಗಿದ್ದಾರೆ.
ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ಭಾರತದ ಮತ್ತೋರ್ವ ಆಟಗಾರ ರವೀಂದ್ರ ಜಡೇಜಾ ಅವರನ್ನು ಹಿಂದಿಕ್ಕಿ 17ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೌಲರ್‌ಗಳಲ್ಲಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದರೆ ಆರ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಕಗಿಸೋ ರಬಾಡಾ ಮೂರನೇ ಸ್ಥಾನವಲ್ಲಿ ಮುಂದುವರಿದಿದ್ದಾರೆ.

Story first published: Thursday, March 17, 2022, 21:21 [IST]
Other articles published on Mar 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X