ICC Test Rankings: ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತೀಯರದ್ದೇ ಪಾರುಪತ್ಯ; ಏರಿಕೆ ಕಂಡ ಅಕ್ಷರ್ ಪಟೇಲ್!

ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೂ ಮುನ್ನ ಭಾರತ ಟೆಸ್ಟ್ ತಂಡಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಟೆಸ್ಟ್ ಕ್ರಿಕೆಟ್‌ನ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೆ ಏರಿದೆ. ಈ ಮೂಲಕ ಭಾರತ ತಂಡ ಟೆಸ್ಟ್, ಏಕದಿನ ಮತ್ತು ಟಿ20 ಮಾದರಿಗಳಲ್ಲಿ ಅಗ್ರಸ್ಥಾನದಲ್ಲಿದೆ.
ಇನ್ನು ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರ 10ರೊಳಗೆ ಭಾರತದ ಮತ್ತೊಬ್ಬ ಆಲ್‌ರೌಂಡರ್ ಅಕ್ಷರ್ ಪಟೇಲ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ 84 ರನ್ ಬಾರಿಸಿದ ಅಕ್ಷರ್ ಪಟೆಲ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಜಿಗಿದಿದ್ದಾರೆ.

13ನೇ ಸ್ಥಾನದಿಂದ 6 ಸ್ಥಾನಗಳ ಜಿಗಿತ
ಅಕ್ಷರ್ ಪಟೇಲ್ 13ನೇ ಸ್ಥಾನದಿಂದ 6 ಸ್ಥಾನಗಳ ಜಿಗಿತ ಕಂಡು ಐಸಿಸಿ ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದ 3ನೇ ಭಾರತೀಯ ಆಟಗಾರನಾಗಿದ್ದಾರೆ. ಹೀಗಾಗಿ ಟಾಪ್ 10 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತೀಯ ಆಟಗಾರರ ಪಾರುಪತ್ಯ ಮುಂದುವರೆದಿದೆ.
ಆಸ್ಟ್ರೇಲಿಯಾ ವಿರುದ್ಧ ನಾಗ್ಪುರದ ಮೊದಲ ಟೆಸ್ಟ್ ಪಂದ್ಯದಲ್ಲಿ ಕುಲದೀಪ್ ಯಾದವ್ ಬದಲಾಗಿ ಸ್ಥಾನ ಪಡೆದ ಅಕ್ಷರ್ ಪಟೇಲ್ ಬ್ಯಾಟಿಂಗ್‌ನಲ್ಲಿ ನಿರ್ಣಾಯಕ 84 ರನ್ ಗಳಿಸುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. ಇದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

ಟೆಸ್ಟ್ ಕ್ರಿಕೆಟ್ ವೃತ್ತಿಜೀವನದ ಎರಡನೇ ಅರ್ಧಶತಕ
2021ರಲ್ಲಿ ನ್ಯೂಜಿಲೆಂಡ್ ವಿರುದ್ಧ ಮುಂಬೈನಲ್ಲಿ 52 ರನ್ ಗಳಿಸಿದ ನಂತರ ಗುಜರಾತ್‌ನ 29 ವರ್ಷದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್ ವೃತ್ತಿಜೀವನದ ಎರಡನೇ ಅರ್ಧಶತಕ ಬಾರಿಸಿದರು.
ಟೆಸ್ಟ್ ಕ್ರಿಕೆಟ್‌ನಲ್ಲಿ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಕ್ಷರ್ ಪಟೇಲ್ ಅಗ್ರ 10ರೊಳಗೆ ಪ್ರವೇಶಿಸುವುದರೊಂದಿಗೆ, ಐಸಿಸಿ ಟೆಸ್ಟ್ ಶ್ರೇಯಾಂಕದ ಅಗ್ರ 10 ಆಲ್‌ರೌಂಡರ್‌ಗಳ ರ್‍ಯಾಂಕಿಂಗ್‌ನಲ್ಲಿ ಮೂರು ಭಾರತೀಯರಿಯರಿದ್ದಾರೆ.
ನಾಗ್ಪುರ ಮೊದಲ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಮತ್ತು 70 ರನ್ ಗಳಿಸಿದ ರವೀಂದ್ರ ಜಡೇಜಾ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇನ್ನು ರವಿಚಂದ್ರನ್ ಅಶ್ವಿನ್ 2ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಬೇರೆ ಯಾವುದೇ ಟೆಸ್ಟ್ ಆಡುವ ದೇಶವು ಟಾಪ್ 10ರಲ್ಲಿ 2ಕ್ಕಿಂತ ಹೆಚ್ಚು ಆಲ್‌ರೌಂಡರ್‌ಗಳನ್ನು ಹೊಂದಿಲ್ಲ ಎಂಬುದು ವಿಶೇಷ.

ಐಸಿಸಿ ಟೆಸ್ಟ್ ಆಲ್‌ರೌಂಡರ್ ಶ್ರೇಯಾಂಕ ಪಟ್ಟಿ
1. ರವೀಂದ್ರ ಜಡೇಜಾ (ಭಾರತ)
2. ರವಿಚಂದ್ರನ್ ಅಶ್ವಿನ್ (ಭಾರತ)
3. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ)
4. ಬೆನ್ ಸ್ಟೋಕ್ಸ್ (ಇಂಗ್ಲೆಂಡ್)
5. ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)
6. ಜೇಸನ್ ಹೋಲ್ಡರ್ (ವೆಸ್ಟ್ ಇಂಡೀಸ್)
7. ಅಕ್ಷರ್ ಪಟೇಲ್ (ಭಾರತ)
8. ಕೈಲ್ ಮೇಯರ್ಸ್ (ವೆಸ್ಟ್ ಇಂಡೀಸ್)
9. ಪ್ಯಾಟ್ ಕಮ್ಮಿನ್ಸ್ (ಆಸ್ಟ್ರೇಲಿಯಾ)
10. ಜೋ ರೂಟ್ (ಇಂಗ್ಲೆಂಡ್)
ಶುಕ್ರವಾರ, ಫೆಬ್ರವರಿ 17ರಂದು ದೆಹಲಿಯಲ್ಲಿ ನಡೆಯುವ 2ನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಪರ ಮಿಚೆಲ್ ಸ್ಟಾರ್ಕ್ ಮತ್ತು ಕ್ಯಾಮರೂನ್ ಗ್ರೀನ್ ಮರಳುವ ನಿರೀಕ್ಷೆಯಿದೆ. ಆದರೆ ಜೋಶ್ ಹ್ಯಾಜಲ್‌ವುಡ್ ಎರಡನೇ ಪಂದ್ಯಕ್ಕೆ ಸಿದ್ಧರಾಗಿಲ್ಲ ಎನ್ನಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications