ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌: ಬೆನ್ ಸ್ಟೋಕ್ಸ್ ಹಿಂದಿಕ್ಕಿದ ರವೀಂದ್ರ ಜಡೇಜಾ, ಏರಿಕೆ ಕಂಡ ರೋಹಿತ್

ICC Test Rankings: Jadeja rises to No. 2 in all-rounders list
ಟೆಸ್ಟ್ ಕ್ರಿಕೆಟ್ ನಲ್ಲಿ ಕಮಾಲ್ ಮಾಡಿದ ಜಡೇಜಾ | Oneindia Kannada

ಭಾರತದ ಪ್ರಮುಖ ಆಲ್‌ರೌಂಡರ್ ರವೀಂದ್ರ ಜಡೇಜಾ ಇತ್ತೀಚೆಗಿನ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅನ್ನು ಹಿಂದಿಕ್ಕುವುದರ ಮೂಲಕ ಅತ್ಯುತ್ತಮ ಆಲ್‌ರೌಂಡರ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. 386 ಅಂಕಗಳನ್ನು ಪಡೆದಿರುವ ರವೀಂದ್ರ ಜಡೇಜಾ ಎರಡನೇ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಐಸಿಸಿ ಟೆಸ್ಟ್ ಆಲ್‌ರೌಂಡರ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್‌ನ ಈ ಬೌಲರ್‌ಗೆ ಕೊಹ್ಲಿ ಹೆದರುತ್ತಾರೆ; ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್!

ಇನ್ನು ಭಾರತ ತಂಡದ ಮತ್ತೋರ್ವ ಆಟಗಾರ ರವಿಚಂದ್ರನ್ ಅಶ್ವಿನ್ ಐಸಿಸಿ ಟೆಸ್ಟ್ ಆಲ್‌ರೌಂಡರ್ ಶ್ರೇಯಾಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ ಹಾಗೂ ಇದೇ ರವಿಚಂದ್ರನ್ ಅಶ್ವಿನ್ ಐಸಿಸಿ ಟೆಸ್ಟ್ ಅತ್ಯುತ್ತಮ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಕೂಡ ಪಡೆದುಕೊಂಡಿದ್ದಾರೆ.

ಐಪಿಎಲ್ ಟೂರ್ನಿ ವಿಸ್ತರಿಸುವ ಬಿಸಿಸಿಐ ಕನಸಿಗೆ ಐಸಿಸಿ ತಣ್ಣೀರು

ಇನ್ನು ಐಸಿಸಿ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ನ್ಯೂಜಿಲೆಂಡ್ ತಂಡದ ಹೆನ್ರಿ ನಿಕೊಲ್ಸ್ ಅನ್ನು ಹಿಂದಿಕ್ಕಿ 7ನೇ ಸ್ಥಾನವನ್ನು ಅಲಂಕರಿಸಿಕೊಂಡಿದ್ದರೆ ಉಳಿದಂತೆ ರಿಷಭ್ ಪಂತ್ 6ನೇ ಮತ್ತು ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದಾರೆ. ಹಾಗೂ ಐಸಿಸಿ ಅತ್ಯುತ್ತಮ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಅಗ್ರಸ್ಥಾನದಲ್ಲಿದ್ದಾರೆ.

Story first published: Tuesday, July 27, 2021, 15:39 [IST]
Other articles published on Jul 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X