ICC Test Rankings: ಬುಮ್ರಾ ನಂಬರ್ 1 ಬೌಲರ್; ಶತಕದ ನಂತರ ಕೊಹ್ಲಿ 9 ಸ್ಥಾನ ಜಿಗಿತ
ಪ್ರಸ್ತುತ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಪರ್ತ್ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 295 ರನ್‌ಗಳಿಗೆ ಭಾರತ ಸೋಲಿಸಿದೆ. ಭಾರತದ ಗೆಲುವಿಗೆ ನಾಯಕ ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಬೌಲಿಂಗ್ ಪ್ರದರ್ಶನ ಪ್ರಮುಖವಾಗಿತ್ತು. ಈ ಗೆಲುವಿನ ನಂತರ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ಆಟಗಾರರ ಪ್ರಾಬಲ್ಯ ಸಾಧಿಸಿದ್ದಾರೆ.
ಐಸಿಸಿ ಇತ್ತೀಚಿನ ಟೆಸ್ಟ್ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದ್ದು, ಪರ್ತ್ ಟೆಸ್ಟ್ ಗೆಲುವಿನ ನಂತರ ಜಸ್ಪ್ರೀತ್ ಬುಮ್ರಾ ತಮ್ಮ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಬುಮ್ರಾ ನಂಬರ್ 1 ಬೌಲರ್ ಎನಿಸಿಕೊಂಡಿದ್ದಾರೆ. ಅವರು ನಂಬರ್-1 ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಅವರನ್ನು ಹಿಂದಿಕ್ಕಿದ್ದಾರೆ. ಮತ್ತೊಂದೆಡೆ ಪರ್ತ್ ಟೆಸ್ಟ್ ಭರ್ಜರಿ ಶತಕ ಬಾರಿಸಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ 9 ಸ್ಥಾನಗಳನ್ನು ಜಿಗಿದಿದ್ದು, 13ನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಹಿಂದೆ ಅವರು 22ನೇ ಸ್ಥಾನದಲ್ಲಿದ್ದರು.

ಆಸ್ಟ್ರೇಲಿಯಾ ವಿರುದ್ಧ ಪರ್ತ್ ಟೆಸ್ಟ್‌ನಲ್ಲಿ 161 ರನ್‌ಗಳನ್ನು ಕಲೆ ಹಾಕಿದ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟಾಪ್-5ರಲ್ಲಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‌ನ ಜೋ ರೂಟ್ ನಂಬರ್-1 ಸ್ಥಾನದಲ್ಲಿದ್ದರೆ, ಜೈಸ್ವಾಲ್ ಕೇನ್ ವಿಲಿಯಮ್ಸನ್ ಮತ್ತು ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಉಳಿದಿರುವ ನಾಲ್ಕು ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ ಮತ್ತಷ್ಟು ದಾಖಲೆ ಬರೆಯುವ ಸಾಧ್ಯತೆಯಿದ್ದು, ನಂಬರ್-1 ಟೆಸ್ಟ್ ಬ್ಯಾಟರ್ ಆಗುವ ಅವಕಾಶವನ್ನು ಹೊಂದಿದ್ದಾರೆ.
ಕಾಂಗೂರು ಪಡೆಗೆ ಕಾಡಿದ ಬುಮ್ರಾ
ಪರ್ತ್ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅನುಪಸ್ಥಿಯಲ್ಲಿ ನಾಯಕನಾಗಿ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾವನ್ನು ಮುನ್ನಡೆಸಿದರು. ಪರ್ತ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಪಡೆದು ಮಿಂಚಿದರು. ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಉರಿ ಬೌಲಿಂಗ್ ದಾಳಿ ಮುಂದುವರೆಸಿದ ಬುಮ್ರಾ 3 ವಿಕೆಟ್ ಕಬಳಿಸಿ ಟೀಮ್ ಇಂಡಿಯಾ ಗೆಲುವಿಗೆ ಕೊಡುಗೆ ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications