For Quick Alerts
ALLOW NOTIFICATIONS  
For Daily Alerts
 

ICC Test Rankings: ಡಕೆಟ್‌, ಪಂತ್‌ ಬಡ್ತಿ: ರಾಹುಲ್‌ 10 ಸ್ಥಾನ ಏರಿಕೆ

ಹೆಡಿಂಗ್ಲಿ ಮೈದಾನದಲ್ಲಿ ಅಮೋಘ ಪ್ರದರ್ಶನ ನೀಡಿ ಇಂಗ್ಲೆಂಡ್‌ ಗೆಲುವಿಗೆ ಕಾರಣವಾದ ಆರಂಭಿಕ ಆಟಗಾರ ಬೆನ್ ಡಕೆಟ್‌ ಅವರ ಐಸಿಸಿ ಶ್ರೇಯಾಂಕದಲ್ಲಿ ಜೀವನ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇನ್ನು ಮೊದಲ ಟೆಸ್ಟ್‌ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ರಿಷಭ್‌ ಪಂತ್‌ ಅವರ ಶ್ರೇಯಾಂಕದಲ್ಲೂ ಏರಿಕೆ ಆಗಿದೆ. ಹಾಗಿದ್ದಾರೆ ಏನು ಹೇಳುತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ನೂತನವಾಗಿ ಬಿಡುಗಡೆ ಆದ ಶ್ರೇಯಾಂಕ ಪಟ್ಟಿ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಲೀಡ್ಸ್‌ನ ಹೆಡಿಂಗ್ಲಿ ಮೈದಾನದಲ್ಲಿ ಭಾರತ ನೀಡಿದ್ದ 371 ರನ್‌ಗಳ ಗುರಿಯನ್ನು ಇಂಗ್ಲೆಂಡ್ ತಂಡ ಸುಲಭವಾಗಿ ಚೇಸ್ ಮಾಡಿ ಗೆದ್ದಿತು. ಈ ವೇಳೆ ತಂಡದ ಭರವಸೆಯ ಬ್ಯಾಟರ್‌ ಜೋ ರೂಟ್‌ ಕಮಾಲ್ ಪ್ರದರ್ಶನ ನೀಡಿದರು. ಎರಡನೇ ಇನಿಂಗ್ಸ್‌ನಲ್ಲಿ ರೂಟ್‌ ಅರ್ಧಶತಕ ಬಾರಿಸಿ ತಂಡದ ಗೆಲುವಿನಲ್ಲಿ ಮಹತ್ವದ ಕಾಣಿಕೆ ನೀಡಿದ್ದರು. ಇವರು ಟೆಸ್ಟ್‌ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಐಸಿಸಿ ಹೊರಡಿಸಿರುವ ಶ್ರೇಯಾಂಕದಲ್ಲಿ ರೂಟ್‌ 889 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ICC Test Rankings kl Rahul Pant and Duckett Make Waves

ಮೊದಲ ಇನಿಂಗ್ಸ್‌ನಲ್ಲಿ ಒಂದು ರನ್‌ಗಳಿಂದ ಶತಕ ವಂಚಿತರಾಗಿದ್ದ ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಹ್ಯಾರಿ ಬ್ರೂಕ್‌ 874 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡದ ಭರವಸೆಯ ಆಟಗಾರ ಕೇನ್‌ ವಿಲಿಯಮ್ಸನ್‌ 867 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.


ರಿಷಭ್‌ಗೆ ಬಡ್ತಿ

ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಇಂಗ್ಲೆಂಡ್ ಬೌಲರ್‌ಗಳನ್ನು ಬಹುವಾಗಿ ಕಾಡಿದ್ದ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ 851 ರೇಟಿಂಗ್ ನಿಂದ ನಾಲ್ಕನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇನ್ನು ಹೆಡಿಂಗ್ಲಿಯಲ್ಲಿ ಎರಡೂ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ದಾಖಲೆ ಬರೆದ ಟೀಮ್ ಇಂಡಿಯಾದ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್‌ ಪಂತ್‌ ಸಹ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ. ಇವರು 801 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದ್ದಾರೆ.

ICC Test Rankings kl Rahul Pant and Duckett Make Waves

ಇಂಗ್ಲೆಂಡ್‌ ಪರ ಎರಡನೇ ಇನಿಂಗ್ಸ್‌ನಲ್ಲಿ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಆರಂಭಿಕ ಬೆನ್‌ ಡಕೆಟ್‌ ಅವರ ಸರ್ವ ಶ್ರೇಷ್ಠ ಶ್ರೇಯಾಂಕ ಪಡೆದಿದ್ದಾರೆ. ಇವರು ಸದ್ಯ 8ನೇ ಸ್ಥಾನದಲ್ಲಿದ್ದಾರೆ. ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ ಇಂಗ್ಲೆಂಡ್‌ನ ಒಲಿ ಪೋಪ್‌ 19ನೇ ಸ್ಥಾನದಲ್ಲಿದ್ದಾರೆ. ಇನ್ನು ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್ ಸಹ ಮೊದಲ ಇನಿಂಗ್ಸ್‌ನಲ್ಲಿ ಮೂರಂಕಿ ಮುಟ್ಟಿದ್ದರು. ಹೀಗಾಗಿ ಇವರು 5 ಸ್ಥಾನ ಬಡ್ತಿ ಪಡೆದಿದ್ದು, 20ನೇ ಸ್ಥಾನ ತಲುಪಿದ್ದಾರೆ.

10 ಸ್ಥಾನ ಬಡ್ತಿ ಪಡೆದ ರಾಹುಲ್

ಟೀಮ್ ಇಂಡಿಯಾದ ಭರವಸೆಯ ಆರಂಭಿಕ ಆಟಗಾರ ಕೆಎಲ್ ರಾಹುಲ್‌ ಎರಡನೇ ಇನಿಂಗ್ಸ್‌ನಲ್ಲಿ ಕೆಚ್ಚೆದೆಯ ಬ್ಯಾಟಿಂಗ್ ಮಾಡಿ ಶತಕ ಸಿಡಿಸಿದ್ದರು. ಇದರ ಪರಿಣಾಮ ಇವರ ಶ್ರೇಯಾಂಕದಲ್ಲೂ ಏರಿಕೆ ಆಗಿದ್ದು, ಸದ್ಯ ಇವರು 38ನೇ ಸ್ಥಾನದಲ್ಲಿದ್ದಾರೆ.

ICC Test Rankings kl Rahul Pant and Duckett Make Waves

ಟೀಮ್ ಇಂಡಿಯಾದ ಸ್ಟಾರ್ ಬೌಲರ್‌ ಜಸ್ಪ್ರೀತ್ ಬುಮ್ರಾ 907 ರೇಟಿಂಗ್‌ನೊಂದಿಗೆ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

Story first published: Wednesday, June 25, 2025, 14:38 [IST]
Other articles published on Jun 25, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+