ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಅಗ್ರ ಸ್ಥಾನಕ್ಕೇರಿದ ನ್ಯೂಜಿಲೆಂಡ್

ICC Test Rankings: New Zealand Join Australia At Top in history of test cricket

ವೆಸ್ಟ್ ಇಂಡೀಸ್ ಕ್ರಿಎಕಟ್ ತಂಡವನ್ನು ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲೂ ನ್ಯೂಜಿಲೆಂಡ್ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ತವರಿನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಕೀವಿಸ್ ಪಡೆ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಟೆಸ್ಟ್ ಶ್ರೇಯಾಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ಜೊತೆಗೆ ಅಗ್ರಸ್ಥಾನದಲ್ಲಿ ಸ್ಥಾನ ಪಡೆದುಕೊಂಡಿದೆ.

ನ್ಯೂಜಿಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್‌ಗಳಿಗೆ ಪ್ರತಿಯಾಗಿ ವೆಸ್ಟ್ ಇಂಡೀಸ್ 131 ರನ್‌ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಫಾಲೋಆನ್‌ಗೆ ಗುರಿಯಾದ ವಿಂಡೀಸ್ ನಾಲ್ಕನೇ ದಿನದಂತ್ಯಕ್ಕೆ ವೆಸ್ಟ್ ಇಂಡೀಸ್ ತಂಡ 244 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡಿತ್ತು. ನ್ಯೂಜಿಲೆಂಡ್ ತಂಡವನ್ನು ಮತ್ತೊಮ್ಮೆ ಬ್ಯಾಟಿಂಗ್‌ಗೆ ಇಳಿಸಬೇಕಿದ್ದರೂ ವೆಸ್ಟ್ ಇಂಡೀಸ್ ಅಂತಿಮ ದಿನ 86ಕ್ಕೂ ಅಧಿಕ ರನ್ ಗಳಿಸಬೇಕಿತ್ತು.

ಫ್ಲ್ಯಾಶ್‌ಬ್ಯಾಕ್ 2020: ಐಪಿಎಲ್‌ನಲ್ಲಿ ಫ್ಲಾಪ್ ಆದ ವಿಶ್ವಶ್ರೇಷ್ಠ ತಾರೆಯರುಫ್ಲ್ಯಾಶ್‌ಬ್ಯಾಕ್ 2020: ಐಪಿಎಲ್‌ನಲ್ಲಿ ಫ್ಲಾಪ್ ಆದ ವಿಶ್ವಶ್ರೇಷ್ಠ ತಾರೆಯರು

ಆದರೆ ಅಂತಿಮ ದಿನ ವೆಸ್ಟ್ ಇಂಡೀಸ್ ಕೇವಲ 73 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡ 317 ರನ್ ಗಳಿಸಿ ಆಲೌಟ್ ಆಗಿತ್ತು. 12 ರನ್‌ಗಳ ಅಂತಿರದಿಂದ ನ್ಯೂಜಿಲೆಮಡ್‌ಗೆ ಮಣದಿದ್ದು ಮಾತ್ರವಲ್ಲದೆ ಆತಿಥೇಯರಿಗೆ ಟೆಸ್ಟ್ ಸರಣಿಯನ್ನು ಕ್ಲೀನ್‌ಸ್ವೀಪ್‌ಆಗಿ ನೀಡಿತ್ತು.

ಈ ಸರಣಿಯನ್ನು 2-1 ಅಂತರದಿಂದ ಗೆದ್ದ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ತಂಡ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಗಣನೀಯ ಸಾಧನೆ ಮಾಡಿತು. 116 ಅಂಕಗಳನ್ನು ಖಾತೆಯಲ್ಲಿ ಹೊಂದಿರುವ ನ್ಯೂಜಿಎಲಂಡ್ ಆಸ್ಟ್ರೇಲಿಯಾ ತಂಡದ ಜೊತೆಗೆ ಅಗ್ರಸ್ಥಾನವನ್ನು ಅಲಂಕರಿಸಿದೆ. ಇದು ನ್ಯೂಜಿಲೆಂಡ್ ತಂಡ ಟೆಸ್ಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಸಾಧನೆಯನ್ನು ಮಾಡಿದಂತಾಗಿದೆ. ಟೆಸ್ಟ್ ಕ್ರಿಕೆಟ್‌ಗೆ ಮಾನ್ಯತೆ ಪಡೆದ ಬಳಿಕ ನ್ಯೂಜಿಲೆಂಡ್ ತಂಡ ಈವರೆಗೂ ಟೆಸ್ಟ್ ಮಾದರಿಯಲ್ಲಿ ಅಗ್ರ ಸ್ಥಾನಕ್ಕೆ ಏರಿರಲಿಲ್ಲ.

ಆತ ನಿಮಗೆ ಆಡಮ್ ಗಿಲ್‌ಕ್ರಿಸ್ಟ್ ಆಟವನ್ನು ನೆನಪಿಸುತ್ತಾನೆ ಎಂದ ಆಕಾಶ್ ಚೋಪ್ರಆತ ನಿಮಗೆ ಆಡಮ್ ಗಿಲ್‌ಕ್ರಿಸ್ಟ್ ಆಟವನ್ನು ನೆನಪಿಸುತ್ತಾನೆ ಎಂದ ಆಕಾಶ್ ಚೋಪ್ರ

ನ್ಯೂಜಿಲೆಂಡ್ ಈ ಮೂಲಕ ತವರಿನಲ್ಲಿ ಕಳೆದ 15 ಟೆಸ್ಟ್ ಪಂದ್ಯಗಳಲ್ಲಿ ಅಜೇಯವಾಗಿ ಉಳಿದುಕೊಂಡಿದೆ. ಇನ್ನು ಭಾರತ ಈಗ ಎರಡನೇ ಸ್ಥಾನದಲ್ಲಿದ್ದು ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗೆಲುವು ಸಾಧಿಸಿದರೆ ಮತ್ತೆ ಅಗ್ರ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಯಿದೆ.

Story first published: Monday, December 14, 2020, 11:04 [IST]
Other articles published on Dec 14, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X