ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC Test Ranking: ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡ ಅಯ್ಯರ್, ಅಶ್ವಿನ್; ವಿರಾಟ್ ಕೊಹ್ಲಿ 2 ಸ್ಥಾನ ಕುಸಿತ

ICC Test Rankings: Ravichandran Ashwin & Shreyas Iyer Moved Up In Rankings; Virat Kohli Slips

ಇತ್ತೀಚೆಗೆ ಮುಕ್ತಾಯಗೊಂಡ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ 14ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಬಾಂಗ್ಲಾದೇಶದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ 4 ಇನ್ನಿಂಗ್ಸ್‌ಗಳಲ್ಲಿ ಕೇವಲ 45 ರನ್ ಗಳಿಸಿದ ನಂತರ ವಿರಾಟ್ ಕೊಹ್ಲಿ 2 ಸ್ಥಾನಗಳನ್ನು ಕಳೆದುಕೊಂಡರು.

PAK vs NZ: ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ನ್ಯೂಜಿಲೆಂಡ್‌ನ ವೇಗದ ಬ್ಯಾಟರ್ ಡೆವೊನ್ ಕಾನ್ವೆPAK vs NZ: ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ನ್ಯೂಜಿಲೆಂಡ್‌ನ ವೇಗದ ಬ್ಯಾಟರ್ ಡೆವೊನ್ ಕಾನ್ವೆ

ಬಾಂಗ್ಲಾದೇಶ ವಿರುದ್ಧ ಭಾರತ ತಂಡ 2-0 ಅಂತರದಲ್ಲಿ ಸರಣಿ ಗೆದ್ದುಕೊಂಡಿದ್ದರೂ ಬಾಂಗ್ಲಾದ ಸ್ಪಿನ್ನರ್‌ಗಳು ಮಾಜಿ ನಂ.1 ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ತೊಂದರೆ ನೀಡಿದರು.

ಮತ್ತೊಂದೆಡೆ ಮೀರ್‌‌ಪುರ ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ 73 ರನ್ ಗಳಿಸಿದ ಬಾಂಗ್ಲಾದೇಶದ ವಿಕೆಟ್‌ಕೀಪರ್- ಬ್ಯಾಟರ್ ಲಿಟನ್ ದಾಸ್ ಬುಧವಾರ ನೂತನ ಐಸಿಸಿ ಬ್ಯಾಟಿಂಗ್ ಪಟ್ಟಿಯಲ್ಲಿ ಎರಡು ಸ್ಥಾನ ಮೇಲಕ್ಕೇರುವ ಮೂಲಕ ವಿರಾಟ್ ಕೊಹ್ಲಿಯ 12ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಶ್ರೇಯಸ್ ಅಯ್ಯರ್ 10 ಸ್ಥಾನಗಳನ್ನು ಜಿಗಿದು 16ನೇ ಸ್ಥಾನಕ್ಕೆ

ಶ್ರೇಯಸ್ ಅಯ್ಯರ್ 10 ಸ್ಥಾನಗಳನ್ನು ಜಿಗಿದು 16ನೇ ಸ್ಥಾನಕ್ಕೆ

2022ರಲ್ಲಿ 6 ಟೆಸ್ಟ್‌ ಪಂದ್ಯಗಳಲ್ಲಿ 25ಕ್ಕಿಂತ ಕಡಿಮೆ ಸರಾಸರಿಯಲ್ಲಿ 265 ರನ್‌ಗಳನ್ನು ಗಳಿಸಿರುವ ವಿರಾಟ್ ಕೊಹ್ಲಿ ಟೆಸ್ಟ್‌ನಲ್ಲಿ ಫಾರ್ಮ್‌ಗಾಗಿ ಹೋರಾಡುತ್ತಿದ್ದಾರೆ.

ಭಾರತದ ಶ್ರೇಯಸ್ ಅಯ್ಯರ್ ಐಸಿಸಿ ಟೆಸ್ಟ್ ಬ್ಯಾಟಿಂಗ್ ಪಟ್ಟಿಯಲ್ಲಿ 10 ಸ್ಥಾನಗಳನ್ನು ಜಿಗಿದು 16ನೇ ಸ್ಥಾನಕ್ಕೆ ತಲುಪಿದ್ದಾರೆ. ಇದು ಅವರ ವೃತ್ತಿಜೀವನದ ಅತ್ಯುತ್ತಮ ರ್‍ಯಾಂಕಿಂಗ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬಾಂಗ್ಲಾದೇಶದಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದರು ಮತ್ತು 2 ಟೆಸ್ಟ್‌ಗಳಲ್ಲಿ 202 ರನ್ ಗಳಿಸಿದರು.

ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರಸ್ಥಾನ

ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರಸ್ಥಾನ

ಮೀರ್‌ಪುರದಲ್ಲಿ ನಡೆದ 2ನೇ ಟೆಸ್ಟ್‌ನಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದ ರವಿಚಂದ್ರನ್ ಅಶ್ವಿನ್ ಅವರೊಂದಿಗೆ ಮುರಿಯದ 71 ರನ್‌ಗಳ ಜೊತೆಯಾಟದಲ್ಲಿ ಪಾಲುದಾರರಾದ ಶ್ರೇಯಸ್ ಅಯ್ಯರ್, ನಿಧಾನವಾಗಿ ಟೆಸ್ಟ್ ತಂಡದ ಅನಿವಾರ್ಯ ಆಟಗಾರನಾಗಿ ತಮ್ಮನ್ನು ತಾವು ಸ್ಥಾಪಿಸಿಕೊಳ್ಳುತ್ತಿದ್ದಾರೆ. ಅವರು ಎರಡೂ ಟೆಸ್ಟ್‌ಗಳಲ್ಲಿ ಶತಕಗಳನ್ನು ತಪ್ಪಿಸಿಕೊಂಡರು ಆದರೆ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಭಾರತದ ರಿಷಭ್ ಪಂತ್ 6ನೇ ಕ್ರಮಾಂಕದಲ್ಲಿ ಅಗ್ರ ಶ್ರೇಯಾಂಕದ ಭಾರತೀಯ ಬ್ಯಾಟರ್ ಆಗಿದ್ದು, ಬೆರಳಿನ ಗಾಯದಿಂದಾಗಿ ಬಾಂಗ್ಲಾದೇಶ ಟೆಸ್ಟ್‌ ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ 9ನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್ ಶ್ರೇಯಾಂಕದಲ್ಲಿ 2ನೇ ಸ್ಥಾನ ಪಡೆದ ರವಿಚಂದ್ರನ್ ಅಶ್ವಿನ್

ಆಲ್‌ರೌಂಡರ್ ಶ್ರೇಯಾಂಕದಲ್ಲಿ 2ನೇ ಸ್ಥಾನ ಪಡೆದ ರವಿಚಂದ್ರನ್ ಅಶ್ವಿನ್

ಈ ಮಧ್ಯೆ, ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2 ಟೆಸ್ಟ್‌ ಪಂದ್ಯಗಳಲ್ಲಿ 7 ವಿಕೆಟ್‌ಗಳನ್ನು ಪಡೆದ ನಂತರ ಬೌಲಿಂಗ್ ಶ್ರೇಯಾಂಕದಲ್ಲಿ ಜಂಟಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಇನ್ನು ಮೀರ್‌ಪುರ ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ ಬ್ಯಾಟಿಂಗ್‌ನಲ್ಲಿ ವೀರೋಚಿತ ಪ್ರದರ್ಶನವು ಆಲ್‌ರೌಂಡರ್ ಶ್ರೇಯಾಂಕದಲ್ಲಿ ಅವರ ಎರಡನೇ ಸ್ಥಾನವನ್ನು ಇನ್ನಷ್ಟು ಬಲಪಡಿಸಲು ನೆರವಾಯಿತು. ಬಾಂಗ್ಲಾದೇಶ ಪ್ರವಾಸದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಆಲ್‌ರೌಂಡರ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ.

ಭಾರತದ ವೇಗದ ಬೌಲರ್ ಉಮೇಶ್ ಯಾದವ್ ಐದು ಸ್ಥಾನಗಳನ್ನು ಹೆಚ್ಚಿಸಿಕೊಂಡು 33ನೇ ಸ್ಥಾನಕ್ಕೆ ತಲುಪಿದ್ದಾರೆ. ಬೌಲರ್‌ಗಳ ಶ್ರೇಯಾಂಕದಲ್ಲಿ ಪ್ಯಾಟ್ ಕಮ್ಮಿನ್ಸ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಲಿಟನ್ ದಾಸ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಥಾನ

ಲಿಟನ್ ದಾಸ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಥಾನ

ಬಾಂಗ್ಲಾದ ಲಿಟನ್ ದಾಸ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಸ್ಥಾನವನ್ನು ಸಾಧಿಸಿದರೆ, ಮೊಮಿನುಲ್ ಹಕ್ ಐದು ಸ್ಥಾನ ಮೇಲಕ್ಕೇರಿ 68ನೇ ಸ್ಥಾನಕ್ಕೆ ಜಿಗಿದರು. ಝಾಕಿರ್ ಹಸನ್ ಏಳು ಸ್ಥಾನ ಮೇಲೇರಿ ಜಂಟಿ 70ನೇ ಸ್ಥಾನಕ್ಕೆ ಏರಿಕೆ ಕಂಡರು ಮತ್ತು ನೂರುಲ್ ಹಸನ್ ಐದು ಸ್ಥಾನ ಮೇಲೇರಿ 93ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ಬಾಂಗ್ಲಾದೇಶ ಸ್ಪಿನ್ನರ್‌ಗಳಾದ ತೈಜುಲ್ ಇಸ್ಲಾಂ ಮತ್ತು ಮೆಹಿದಿ ಹಸನ್ ಮಿರಾಜ್ ತಲಾ ಎರಡು ಸ್ಥಾನಗಳ ಏರಿಕೆ ಕಂಡು ಕ್ರಮವಾಗಿ 28 ಮತ್ತು 29ನೇ ಸ್ಥಾನಕ್ಕೆ ತಲುಪಿದ್ದಾರೆ. ನಾಯಕ ಶಕೀಬ್ ಅಲ್ ಹಸನ್ ಒಂದು ಸ್ಥಾನವನ್ನು ಗಳಿಸಿ 32ನೇ ಸ್ಥಾನದಲ್ಲಿದ್ದಾರೆ. ತೈಜುಲ್ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸಿದ್ದರೆ, ಮೆಹಿದಿ ಮತ್ತು ಶಕೀಬ್ ಪಂದ್ಯದಲ್ಲಿ ತಲಾ ಆರು ವಿಕೆಟ್‌ಗಳನ್ನು ಪಡೆದರು.

ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕಗಳು

ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕಗಳು

1. ಮಾರ್ನಸ್ ಲ್ಯಾಬುಸ್ಚಾಗ್ನೆ (ಆಸ್ಟ್ರೇಲಿಯಾ)

2. ಬಾಬರ್ ಅಜಂ (ಪಾಕಿಸ್ತಾನ)

3. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)

4. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)

5. ಜೋ ರೂಟ್ (ಇಂಗ್ಲೆಂಡ್)

6. ರಿಷಭ್ ಪಂತ್ (ಭಾರತ)

7. ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್)

8. ದಿಮುತ್ ಕರುಣಾರತ್ನೆ (ಶ್ರೀಲಂಕಾ)

9. ರೋಹಿತ್ ಶರ್ಮಾ (ಭಾರತ)

10. ಉಸ್ಮಾನ್ ಖವಾಜಾ (ಆಸ್ಟ್ರೇಲಿಯಾ)

Story first published: Wednesday, December 28, 2022, 17:15 [IST]
Other articles published on Dec 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X