Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಮತ್ತೆ ಟಾಪ್ 10ರಲ್ಲಿ ಸ್ಥಾನ ಪಡೆದ ರೋಹಿತ್ ಶರ್ಮಾ

ಐಸಿಸಿ ನೂತನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಟೀಮ್ ಇಂಡಿಯಾ ಅಭಿಮಾನಿಗಳಿಗೆ ಖುಷಿ ನೀಡವಂತಾ ಬೆಳವಣಿಗೆಯಾಗಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಮತ್ತೊಮ್ಮೆ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಶತಕ ಸಿಡಿಸುವ ಮೂಲಕ ಟೆಸ್ಟ್‌ನಲ್ಲಿ 10ನೇ ಶತಕ ಸಿಡಿಸಿದ ರೋಹಿತ್ ಶರ್ಮಾ ಇದೀಗ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇನ್ನು ರೋಹಿತ್ ಶರ್ಮಾ ಅವರ ಈ ಸಾಧನೆ ಮಾತ್ರವಲ್ಲದೆ ಮೊದಲ ಪಂದ್ಯದಲ್ಲಿ ಟೆಸ್ಟ್ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ಕೂಡ ಶ್ರೇಯಾಂಕ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಗಮನಾರ್ಹ ಅಂಶ. ಮೊದಲ ಪಂದ್ಯದಲ್ಲಿಯೇ ದಾಖಲೆಯ ಶತಕ ಸಿಡಿಸಿರುವ ಯಶಸ್ವಿ ಜೈಸ್ವಾಲ್ ಬ್ಯಾಟರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ 73ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ICC Test Rankings: Rohit Sharma back in top 10 list, R Ashwin continues as no. 1 bowler

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಡೊಮೆನಿಕಾದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೃಹತ್ ಗೆಲುವು ಸಾಧಿಸಿತು. ಮೂರೇ ದಿನದಲ್ಲಿ ಅಂತ್ಯವಾದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸರ್ವಾಂಗೀಣ ಪ್ರದರ್ಶನ ನೀಡಿದ ಕಾರಣ ಇನ್ನಿಂಗ್ಸ್ ಹಾಗೂ 141 ರನ್‌ಗಳ ಅಂತರದ ಗೆಲುವು ಸಾಧಿಸಿತು. ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಇಬ್ಬರು ಕೂಡ ಈ ಪಂದ್ಯದಲ್ಲಿ ಶತಕ ಸಿಡಿಸಿ ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು.

ಟೀಮ್ ಇಂಡಿಯಾ ಆಟಗಾರರ ಪೈಕಿ ಬ್ಯಾಟರ್‌ಗಳ ಪಟ್ಟಿಯಲ್ಲಿ ಟಾಪ್ 10ರಲ್ಲಿ ಸ್ಥಾನ ಪಡೆದುಕೊಂಡಿರುವ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ ರೋಹಿತ್ ಶರ್ಮಾ. ಅದಾದ ಬಳಿಕ ಯುವ ಆಟಗಾರ ರಿಷಭ್ ಪಂತ್ ಇದ್ದು 11ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ 14ನೇ ಸ್ಥಾನದಲ್ಲಿಯೇ ಮುಂದಿವರಿದಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಮೊದಲನೇ ಸ್ಥಾನದಲ್ಲಿಯೇ ಮುಂದಿವರಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಒಟ್ಟು 12 ವಿಕೆಟ್‌ಗಳನ್ನು ಪಡೆದುಕೊಂಡು ಅನೇಕ ಮೈಲಿಗಲ್ಲುಗಳನ್ನು ದಾಖಲಿಸಿದ ಆರ್ ಅಶ್ವಿನ್ 24 ಅಂಕಗಳನ್ನು ಏರಿಸಿಕೊಂಡಿದ್ದು ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಈ ಮೂಲಕ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರಿಗಿಂತ 56 ಅಂಕಗಳಷ್ಟು ಮುಂದಿದ್ದಾರೆ.

ಇನ್ನು ಟೀಮ್ ಇಂಡಿಯಾದ ಮತ್ತೋರ್ವ ಸ್ಪಿನ್ನರ್ ರವೀಂದ್ರ ಜಡೇಜಾ ಕೂಡ ಈ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆರ್ ಅಶ್ವಿನ್‌ಗೆ ಉತ್ತಮ ಸಾಥ್ ನೀಡಿರುವ ರವೀಂದಗ್ರ ಜಡೇಜಾ ಮೂರು ಸ್ಥಾನಗಳ ಏರಿಕೆ ಕಂಡಿದ್ದು 7ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಪ್ರಮುಖ ಬದಲಾವನೆಗಳು ಆಗಿಲ್ಲ. ರವೀಂದ್ರ ಜಡೇಜಾ ಮೊದಲ ಸ್ಥಾನದಲ್ಲಿಯೇ ಮುಂದುವರಿದಿದ್ದು ಆರ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.

Story first published: Wednesday, July 19, 2023, 15:14 [IST]
Other articles published on Jul 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+