ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ: ಜೀವಮಾನ ಶ್ರೇಷ್ಠ ಸ್ಥಾನಕ್ಕೇರಿದ ರೋಹಿತ್ ಶರ್ಮಾ, ಅಶ್ವಿನ್ ನಂಬರ್ 3

ಟೆಸ್ಟ್ ಕ್ರಿಕೆಟ್‌ನ ನೂತನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಟೆಸ್ಟ್ ವೃತ್ತಿ ಜೀವನದ ಅತ್ಯುನ್ನತ ಸ್ಥಾನಕ್ಕೇರಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು 8ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಒಂದು ಶತಕ ಸಹಿತ ಅದ್ಭುತ ಪ್ರದರ್ಶನವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದರ್ಶನದಿಂದಾಗಿ ಆರು ಸ್ಥಾನಗಳ ಏರಿಕೆಯನ್ನು ಕಂಡಿರುವ ರೋಹಿತ್ ಶರ್ಮಾ ಮೊದಲ ಬಾರಿಗೆ 8ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಟಾಪ್ 10ರಲ್ಲಿ ಟೀಮ್ ಇಂಡಿಯಾದ ಮೂವರು ಬ್ಯಾಟ್ಸ್‌ಮನ್‌ಗಳು ಇದ್ದು ವಿರಾಟ್ ಕೊಹ್ಲಿ 5 ಹಾಗೂ ಚೇತೇಶ್ವರ್ ಪೂಜಾರ 10ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 1ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಂಗ್ಲೆಂಡ್ ನಾಯಕ ಜೋ ರೂಟ್ 4ನೇ ಸ್ಥಾನದಲ್ಲಿದ್ದಾರೆ.
ಮತ್ತೊಂದೆಡೆ ಬೌಲಿಂಗ್ ವಿಭಾಗದಲ್ಲಿ ಆರ್ ಅಶ್ವಿನ್ ಅತ್ಯುತ್ತಮ ಸಾಧನೆಯನ್ನು ತೋರಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ನೀಡಿಕೊಂಡು ಬಂದಿದ್ದಾರೆ. ಹೀಗಾಗಿ ಆರ್ ಅಶ್ವಿನ್ 4 ಸ್ಥಾನಗಳ ಏರಿಕೆಯನ್ನು ಕಂಡಿದ್ದಾರೆ. ಬೌಲರ್‌ಗಳ ಶ್ರೇಯಾಂಕಪಟ್ಟಿಯಲ್ಲಿ ಅವರು 3ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇನ್ನು ಬೌಲರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಪ್ಯಾಟ್ ಕಮ್ಮಿನ್ಸ್ ಅಗ್ರ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಎರಡನೇ ಸ್ಥಾನದಲ್ಲಿರುವ ನೀಲ್ ವ್ಯಾಗ್ನಾರ್‌ಗಿಂತ ಕೇವಲ 2 ಅಂಕ ಹಿಂದಿದ್ದಾರೆ ಆರ್ ಅಶ್ವಿನ್. ಟಾಪ್ 10ರಲ್ಲಿರುವ ಇನ್ನೋರ್ವ ಭಾರತೀಯ ಬೌಲರ್ ಜಸ್ಪ್ರೀತ್ ಬೂಮ್ರಾ ಒಂದು ಸ್ಥಾನಗಳ ಕುಸಿತ ಕಂಡು 9ನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications