ICC Ranking: ಸಿರಾಜ್, ಯಶಸ್ವಿಗೆ ಬಡ್ತಿ: ಗಿಲ್ ಶ್ರೇಯಾಕ ಕುಸಿತ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯವಾಗಿದೆ. ಈ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಯುವ ಪಡೆ ಸ್ಥಿರ ಪ್ರದರ್ಶನ ನೀಡಿ ಸರಣಿಯಲ್ಲಿ ಸಮಬಲ ಸಾಧಿಸಿದೆ. ಈ ವೇಳೆ ಸ್ಟಾರ್ ಆಟಗಾರರು ಆರ್ಭಟ ನಡೆಸಿದ್ದಾರೆ. ಈ ಆಟಗಾರರ ಪ್ರದರ್ಶನ ಈಗ ಇವರ ಐಸಿಸಿ ಶ್ರೇಯಾಂಕದ ಮೇಲೆ ಕಾಣಿಸಿಕೊಂಡಿದೆ. ಟೂರ್ನಿಯಲ್ಲಿ ಅಬ್ಬರದ ಬೌಲಿಂಗ್ ಪ್ರದರ್ಶನ ನೀಡಿ ಅತಿ ಹೆಚ್ಚು ವಿಕೆಟ್ ಪಡೆದು ಬೀಗಿರುವ ಮೊಹಮ್ಮದ್ ಸಿರಾಜ್ ಅವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಸಾಧನೆ ಮಾಡಿರುವ ಮೊಹಮ್ಮದ್ ಸಿರಾಜ್, ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇವರು 674 ಅಂಕಗಳೊಂದಿಗೆ 12 ಸ್ಥಾನ ಏರಿಕೆ ಕಂಡಿದ್ದು, ಸದ್ಯ ಐಸಿಸಿ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 15ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಬ್ಯಾಟಿಂಗ್‌ನಲ್ಲಿ ಸೊಗಸಾದ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ, ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 3 ಸ್ಥಾನ ಕುಸಿತ ಕಂಡಿದ್ದು, 17ನೇ ಸ್ಥಾನದಲ್ಲಿದ್ದಾರೆ.

ಓವಲ್ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇವರು 889 ಅಂಕಗಳನ್ನು ಕಲೆ ಹಾಕಿದ್ದು, ಅಗ್ರಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಎರಡನೇ, ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮೂರನೇ ಸ್ಥಾನದಲ್ಲಿದ್ದಾರೆ.
ಯಶಸ್ವಿ ಬಡ್ತಿ
ಇಂಗ್ಲೆಂಡ್ ಪ್ರವಾಸದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಮಿಂಚಿದ್ರು. ಇವರ ಸ್ಥಿರ ಬ ಬ್ಯಾಟಿಂಗ್ ಪ್ರದರ್ಶನವನ್ನು ಯಶಸ್ವಿ ಸರಣಿಯುದ್ದಕ್ಕೂ ಮುಂದುವರೆಸಿದ ಸ್ಥಿರ ಬ್ಯಾಟಿಂಗ್‌ಗೆ ಇವರ ರಿವಾರ್ಡ್ ಸಿಕ್ಕಿದೆ. ಇವರು ಮೂರು ಸ್ಥಾನ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದು, 792 ಅಂಕಗಳೊಂದಿಗೆ ಯಶಸ್ವಿ ಐದನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ 725 ಅಂಕಗಳೊಂದಿಗೆ 13ನೇ ಸ್ಥಾನ, 768 ಅಂಕಗಳೊಂದಿಗೆ ರಿಷಭ್ ಪಂತ್ 8ನೇ ಸ್ಥಾನದಲ್ಲಿದ್ದಾರೆ.

ಸರಣಿಯುದ್ದಕ್ಕೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಜೋ ರೂಟ್ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಇನ್ನು ಐದನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಹ್ಯಾರಿ ಬ್ರೂಕ್ ಎರಡನೇ ಸ್ಥಾನ, ನ್ಯೂಜಿಲೆಂಡ್ ಕೇನ್ ವಿಲಿಯಮ್ಸನ್ 3, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ 4ನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications