Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸ್ಟೀವ್ ಸ್ಮಿತ್ ನಂಬರ್ ಒಂದು, ವಿರಾಟ್ ಕೊಹ್ಲಿ ಹನ್ನೊಂದು

ದುಬೈ, ಜೂ.15: ಐಸಿಸಿ ಪ್ರಕಟಿಸಿರುವ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆಟಗಾರ ಸ್ಟೀವ್ ಸ್ಮಿತ್ ನಂ.1 ಸ್ಥಾನಕ್ಕೇರಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 11ನೇ ಸ್ಥಾನದಲ್ಲಿದ್ದಾರೆ. ಟೆಸ್ಟ್ ಬ್ಯಾಟ್ಸ್ ಮನ್ ಹಾಗೂ ಬೌಲಿಂಗ್ ಪಟ್ಟಿಯ ಮೊದಲ ಹತ್ತು ಸ್ಥಾನಗಳಲ್ಲಿ ಯಾವೊಬ್ಬ ಭಾರತೀಯ ಆಟಗಾರರು ಸ್ಥಾನ ಪಡೆದುಕೊಂಡಿಲ್ಲ.

ಭಾನುವಾರ ಮುಕ್ತಾಯವಾದ ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಅವರು 199 ರನ್ ಹಾಗೂ ಅಜೇಯ 54 ರನ್ ಗಳಿಸಿ ಆಸ್ಟ್ರೇಲಿಯಾ ತಂಡಕ್ಕೆ 2-0 ಸರಣಿ ಜಯ ತಂದುಕೊಡುವಲ್ಲಿ ಮಹತ್ವದ ಕೊಡುಗೆ ನೀಡಿದರು. [ದ್ವಿಶತಕ ವಂಚಿತರ ಪಟ್ಟಿ ಸೇರಿದ ಸ್ಟೀವನ್ ಸ್ಮಿತ್]

26 ವರ್ಷ ವಯಸ್ಸಿನ ಸ್ಮಿತ್ ಅವರು ಒಟ್ಟು 913 ಅಂಕಗಳನ್ನು ಕಲೆಹಾಕಿ ಟೆಸ್ಟ್ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ 17 ಪಂದ್ಯಗಳಲ್ಲಿ 9 ಶತಕಗಳನ್ನು ಸಿಡಿಸಿದ್ದಾರೆ. ಕಿಂಗ್ಸ್ ಟನ್ ಟೆಸ್ಟ್ ಪಂದ್ಯದಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Steve Smith becomes No. 1

ಭಾರತದ ವಿರುದ್ಧ ಟೆಸ್ಟ್ ಸರಣಿ ನಂತರ ನಿವೃತ್ತಿ ಹೊಂದುವುದಾಗಿ ಘೋಷಿಸಿರುವ ಶ್ರೀಲಂಕಾದ ದಿಗ್ಗಜ ಕುಮಾರ್ ಸಂಗಕ್ಕಾರ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಅದ್ಭುತ ಆಟಗಾರ ಎಬಿ ಡಿ ವಿಲೆಯರ್ಸ್ ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಹಶೀಂ ಆಮ್ಲಾ, ಶ್ರೀಲಂಕಾದ ಏಂಜೆಲೋ ಮ್ಯಾಥ್ಯೂಸ್ ನಂತರದ ಸ್ಥಾನದಲ್ಲಿದ್ದಾರೆ. [ಟೆಸ್ಟ್ ಡ್ರಾ, ಭಾರತದ ಐಸಿಸಿ ಶ್ರೇಯಾಂಕ ಕುಸಿತ]

ಟಾಪ್ 10 ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್ ಮನ್ ಗಳಿಲ್ಲ. 11ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ಐಸಿಸಿ ಟೆಸ್ಟ್ ಬೌಲರ್ ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಭಾರತದ ಪರ ಆರ್ ಅಶ್ವಿನ್ 12ನೇ ಸ್ಥಾನದಲ್ಲಿದ್ದಾರೆ. (ಒನ್ ಇಂಡಿಯಾ ಸುದ್ದಿ)

Story first published: Wednesday, January 3, 2018, 10:03 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+