For Quick Alerts
ALLOW NOTIFICATIONS  
For Daily Alerts
 

ICC Test Ranking: ಟ್ರಾವಿಸ್ ಹೆಡ್‌ ಜಿಗಿತ, ಯಶಸ್ವಿ ಜೈಸ್ವಾಲ್‌, ಪಂತ್‌ ಕುಸಿತ

ಡಿಸೆಂಬರ್‌ 26 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯ ನಡೆಯಲಿದೆ. ಈ ಟೆಸ್ಟ್‌ ಪಂದ್ಯಕ್ಕೂ ಇನ್ನು ಒಂದು ದಿನ ಮುನ್ನ ಐಸಿಸಿಯ ನೂತನ ಟೆಸ್ಟ್‌ ಶ್ರೇಯಾಂಕ ಪಟ್ಟಿ ಬಿಡುಗಡೆ ಆಗಿದೆ. ಈ ಪಟ್ಟಿಯಲ್ಲಿ ಆರಂಭಿಕ ಮೂರು ಸ್ಥಾನಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ನತರದ ಸ್ಥಾನಗಳಲ್ಲಿ ಹಲವು ಬದಲಾವಣೆಗಳು ಕಂಡು ಬಂದಿವೆ. ಹಾಗಿದ್ದರೆ, ಈ ಬಾರಿ ಶ್ರೇಯಾಂಕ ಪಟ್ಟಿಯಲ್ಲಿ ಆದ ಬದಲಾವಣೆ ಏನು? ಭಾರತದ ಪರ ಟಾಪ್ ಬ್ಯಾಟರ್ ಯಾರು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಟ್ರಾವಿಸ್‌ ಹೆಡ್‌ ಬ್ಯಾಕ್‌ ಟು ಬ್ಯಾಕ್‌ ಶತಕ ಬಾರಿಸಿ ತಂಡಕ್ಕೆ ನೆರವಾಗಿದ್ದಾರೆ. ಆಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಹಾಗೂ ಬ್ರಿಸ್ಬೇನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಹೆಡ್‌ ಮೂರಂಕಿ ಮುಟ್ಟಿ ಅಬ್ಬರಿಸಿದ ಫಲವಾಗಿ ಅವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ. ಇವರು 825 ಅಂಕಗಳನ್ನು ಕಲೆ ಹಾಕಿದ್ದು, ಶ್ರೇಯಾಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇನ್ನು ಸರಣಿಯಲ್ಲಿ ಮೊದಲ ಟೆಸ್ಟ್‌ ಪಂದ್ಯದಲ್ಲಿ ಶತಕ ಬಾರಿಸಿದ ಬಳಿಕ ರನ್‌ ಕಲೆ ಹಾಕುವಲ್ಲಿ ಹೆಣಗಾಡುತ್ತಿರುವ ಟೀಮ್ ಇಂಡಿಯಾದ ಯಶಸ್ವಿ ಜೈಸ್ವಾಲ್‌ ಒಂದು ಸ್ಥಾನ ಕುಸಿತ ಕಂಡು ನಾಲ್ಕನೇ ಸ್ಥಾನ ತಲುಪಿದ್ದಾರೆ.

ICC Test Rankings Travis Head 4th Jaiswal 5th Pant Out of Top 10

ಇಂಗ್ಲೆಂಡ್ ಬ್ಯಾಟರ್‌ಗಳ ಅಧಿಪತ್ಯ

ಐಸಿಸಿ ಟೆಸ್ಟ್‌ ಶ್ರೇಯಾಂಕದಲ್ಲಿ ಇಂಗ್ಲೆಂಡ್ ತಂಡದ ಇಬ್ಬರು ಬ್ಯಾಟರ್‌ಗಳು ಅಗ್ರ ಎರಡು ಸ್ಥಾನಗಳನ್ನು ಪಡೆದಿದ್ದಾರೆ. ಪ್ರಸಕ್ತ ವರ್ಷ ಅಮೋಘ ಫಾರ್ಮ್‌ನಲ್ಲಿರುವ ಜೋ ರೂಟ್‌ 895 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನವನ್ನು ಪಡೆದಿದ್ದಾರೆ. ಎರಡನೇ ಸ್ಥಾನದಲ್ಲಿ ಇವರದ್ದೇ ತಂಡದ ಹ್ಯಾರಿ ಬ್ರೂಕ್‌ ಇದ್ದು, ಇವರು 876 ಅಂಕಗಳನ್ನು ಕಲೆ ಹಾಕಿದ್ದಾರೆ. ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್ ತಂಡದ ಕೇನ್‌ ವಿಲಿಯಮ್ಸನ್‌ ಇದ್ದು ಇವರ ತೆಕ್ಕೆಯಲ್ಲಿ 867 ಅಂಕಗಳು ಇವೆ.

ಟಾಪ್‌ 10ರಿಂದ ಪಂತ್‌ ಔಟ್

ಟೀಮ್ ಇಂಡಿಯಾದ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್‌ ಪಂತ್‌ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇವರು 708 ರೇಟಿಂಗ್ ಪಾಯಿಂಟ್‌ಗಳಿಂದ ಒಂದು ಸ್ಥಾನ ಕುಸಿತ ಕಂಡಿದ್ದು 11ನೇ ಸ್ಥಾನದಲ್ಲಿದ್ದಾರೆ. ಸುಮಾರು 500ಕ್ಕೂ ಹೆಚ್ಚು ದಿನಗಳ ಬಳಿಕ ಬ್ರಿಸ್ಬೇನ್‌ನಲ್ಲಿ ನಡೆದ ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಸ್ಟೀವನ್‌ ಸ್ಮಿತ್ ಒಂದು ಸ್ಥಾನ ಜಿಗಿತ ಕಂಡಿದ್ದು, 10ನೇ ಸ್ಥಾನಕ್ಕೆ ತಲುಪಿದ್ದಾರೆ.

ICC Test Rankings Travis Head 4th Jaiswal 5th Pant Out of Top 10

ಟಾಪ್‌ 20ಯಲ್ಲಿ ಇಲ್ಲ ಕೊಹ್ಲಿ

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಇವರು ಒಂದು ಸ್ಥಾನ ಕುಸಿತ ಕಂಡು 21 ಸ್ಥಾನದಲ್ಲಿದ್ದರೆ, ಶುಭಮನ್‌ ಗಿಲ್ 4 ಸ್ಥಾನ ಕುಸಿತ ಕಂಡು 20ನೇ ಸ್ಥಾನದಲ್ಲಿದ್ದಾರೆ. ರೋಹಿತ್‌ ಶರ್ಮಾ ಐದು ಸ್ಥಾನ ಹಿನ್ನಡೆ ಅನುಭವಿಸಿದ್ದು, 35ನೇ ಶ್ರೇಯಾಂಕದಲ್ಲಿದ್ದಾರೆ.

ಪ್ರಸಕ್ತ ಬಾರ್ಡರ್ ಗವಾಸ್ಕರ್‌ ಟೆಸ್ಟ್‌ ಸರಣಿಯಲ್ಲಿ ಟೀಮ್ ಇಂಡಿಯಾದ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ 10 ಸ್ಥಾನ ಏರಿಕೆ ಕಂಡಿದ್ದು, 40ನೇ ಸ್ಥಾನ ತಲುಪಿದ್ದಾರೆ.

Story first published: Wednesday, December 25, 2024, 17:00 [IST]
Other articles published on Dec 25, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+