ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC Test Rankings: ಏರಿಕೆ ಕಂಡ ವಿರಾಟ್ ಕೊಹ್ಲಿ; ಮತ್ತೆ ಟಾಪ್ 10ಗೆ ಲಗ್ಗೆಯಿಟ್ಟ ಬೂಮ್ರಾ

ICC Test Rankings: Virat Kohli climbs two spots to No. 7 in batting rankings

ಐಸಿಸಿ ಬಿಡುಗಡೆಗೊಳಿಸಿದ ನೂತನ ಟೆಸ್ಟ್ ಶ್ರೇಯಾಂಕಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು ಏಳನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಈ ಪ್ರದರ್ಶನದ ಕಾರಣದಿಂದಾಗಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ.

ಕೇಪ್‌ಟೌನ್‌ನಲ್ಲಿ ನಡೆದಿದ್ದ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಬ್ಯಾಟರ್‌ಗಳಿಗೆ ಇದ್ದ ಸವಾಲಿನ ಪರಿಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 79 ರನ್‌ಗಳಿಸಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ 29 ರನ್‌ಗಳಿಸಿದ್ದರು. ವಿರಾಟ್ ಕೊಹ್ಲಿಯ ಈ ಪ್ರಯತ್ನದ ಹೊರತಾಗಿಯೂ ಭಾರತ ಅಂತಿಮ ಟೆಸ್ಟ್‌ನಲ್ಲಿ 7 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿತು. ಈ ಸೋಲಿನೊಂದಿಗೆ ಭಾರತ 1-2 ಅಂತರದಿಂದ ಸರಣಿ ಕಳೆದುಕೊಂಡಿತು.

ಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿ

ಈ ಮಧ್ಯೆ ಗಾಯದ ಕಾರಣದಿಂದಾಗಿ ಈ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಅನುಭವಿ ಆಟಗಾರ ರೋಹಿತ್ ಶರ್ಮಾ 5ನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲವಾಗಿದ್ದಾರೆ. ಬ್ಯಾಟಿಂಗ್ ಶ್ರೇಯಾಂಕಪಟ್ಟಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮಾತ್ರವೇ ಟಾಪ್ 10ರಲ್ಲಿ ಸ್ಥಾನ ಉಳಿಸಿಕೊಂಡಿರುವ ಭಾರತೀಯ ಆಟಗಾರರಾಗಿದ್ದಾರೆ. ಇನ್ನು ಆಸ್ಟ್ರೇಲಿಯಾದ ಆಟಗಾರ ಮಾರ್ನಾಸ್ ಲ್ಯಾಬುಶೈನ್ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದರೆ ನಂತರ ಇಂಗ್ಲೆಂಡ್ ತಂಡದ ನಾಯಕ ಜೋರೂಟ್, ಆಸಿಸ್ ಅನುಭವಿ ಸ್ಟೀವ್ ಸ್ಮಿತ್ ಹಾಗೂ ಕೇನ್ ವಿಲಿಯಮ್ಸನ್ ಇದ್ದಾರೆ.

ಟಾಪ್ 10ಗೆ ಮರಳಿದ ಬೂಮ್ರಾ: ಮತ್ತೊಂದೆಡೆ ಬೌಲರ್‌ಗಳ ಶ್ರೇಯಾಂಕಪಟ್ಟಿಯಲ್ಲಿ ಭಾರತದ ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಪ್ರಮುಖ ಸಾಧನೆಯೊಂದನ್ನು ಮಾಡಿದ್ದಾರೆ. ಟಾಪ್‌ 10ರಲ್ಲಿ ಬೂಮ್ರಾ ಮರಳಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ದಕ್ಷಿಣ ಆಪ್ರಿಕಾ ವಿರುದ್ಧದ ಮೂರು ಟೆಸ್ಟ್‌ನಲ್ಲಿ ಬೂಮ್ರಾ 12 ವಿಕೆಟ್ ಪಡೆದುಕೊಂಡಿದ್ದಾರೆ.

ನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್‌ಮನ್‌ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್‌ಮನ್‌ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿ

ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧಧ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ಪರ ಮಿಂಚಿದ ಕಗಿಸೋ ರಬಡಾ ಶ್ರೇಯಾಂಕಪಟ್ಟಿಯಲ್ಲಿ ಎರಡು ಸ್ಥಾನಗಳ ಏರಿಕೆ ಕಂಡಿದ್ದಾರೆ. ಈ ಮೂಲಕ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತ ವಿರುದ್ಧಧ ಟೆಸ್ಟ್ ಸರಣಿಯ ಮೂರು ಪಂದ್ಯಗಳಲ್ಲಿ ಕಗಿಸೋ ರಬಾಡ 20 ವಿಕೆಟ್‌ಗಳನ್ನು ಕಬಳಿಸಿ ಭಾರತಕ್ಕೆ ಆಘಾತ ನೀಡಿದ್ದರು. ಇನ್ನು ಬೌಲರ್‌ಗಳ ಶ್ರೇಯಾಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅಗ್ರ ಸ್ಥಾನದಲ್ಲಿದ್ದಾರೆ. ಭಾರತದ ಆರ್ ಅಶ್ವಿನ್ 2ನೇ ಸ್ಥಾನದಲ್ಲಿದ್ದಾರೆ.

Story first published: Wednesday, January 19, 2022, 17:01 [IST]
Other articles published on Jan 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X