ಐಸಿಸಿ ಟೆಸ್ಟ್ ಶ್ರೇಯಾಂಕ: 3ನೇ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ
ನವದೆಹಲಿ, ಮಾರ್ಚ್. 08 : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಕ್ರಿಕೆಟ್ ಬ್ಯಾಟ್ಸ್ ಮನ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ.
ಈ ಮೊದಲು ಎರಡನೇ ಸ್ಥಾನದಲ್ಲಿದ್ದ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ಟೆಸ್ಟ್ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಸ್ಟ್ರೇಲಿಯಾದ ಸ್ಟಿವ್ ಸ್ಮಿತ್ 936 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದರೆ, ಕೊಹ್ಲಿಗಿಂತ ಕೇವಲ ಒಂದು ಅಂಕ ಮುಂದಿರುವ ಇಂಗ್ಲೆಂಡ್ ನ ಜೋ ರೂಟ್ 848 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದ್ದಾರೆ. ಇನ್ನು ವಿರಾಟ್ ಕೊಹ್ಲಿ 847 ಅಂಕಗಳೊಂದಿಗೆ ಒಂದು ಸ್ಥಾನ ಕುಸಿದು ಮೂರನೇ ಸ್ಥಾನದಲ್ಲಿದ್ದಾರೆ.[ICC RANKING : ಅಶ್ವಿನ್ ಜತೆ ನಂ. 1 ಸ್ಥಾನಕ್ಕೆ ಲಗ್ಗೆಯಿಟ್ಟ ಜಡೇಜಾ]

ಭಾರತದ ಮಧ್ಯ ಕ್ರಮಾಂಕದ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಆಸೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 17 ಮತ್ತು 92 ರನ್ ಬಾರಿಸುವ ಮೂಲಕ ಶ್ರೇಯಾಂಕ ಪಟ್ಟಿಯಲ್ಲಿ ಐದು ಸ್ಥಾನ ಬಡ್ತಿ ಪಡೆದುಕೊಂಡು 6ನೇ ಸ್ಥಾನದಲ್ಲಿದ್ದಾರೆ.
ಎರಡು ಸ್ಥಾನ ಮೇಲಕ್ಕೇರಿರುವ ಟೀಂ ಇಂಡಿಯಾದ ಮತ್ತೊಬ್ಬ ಬ್ಯಾಟ್ಸ್ ಮನ್ ಅಜಿಂಕ್ಯಾ ರಹಾನೆ 15ನೇ ಸ್ಥಾನಕ್ಕೇರಿದ್ದಾರೆ. ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಕನ್ನಡಿಗ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧ 90 ಮತ್ತು 51 ರನ್ ಬಾರಿಸುವ ಮೂಲಕ 23ನೇ ಸ್ಥಾನವನ್ನು ಅಲಂಕರಿಸಿದ್ದಾರೆ.
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಮೋಘ ಜಯಗಳಿಸಿ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಏಪ್ರಿಲ್ ಒಂದಕ್ಕೆ ಅನ್ವಯವಾಗುವಂತೆ ಟೀಂ ಇಂಡಿಯಾ ನಂಬರ್ 1 ಸ್ಥಾನದಲ್ಲೇ ಮುಂದುವರಿಯಲಿದ್ದು, ವರ್ಷಾಂತ್ಯದ ಅಗ್ರಸ್ಥಾನಕ್ಕಾಗಿ ನೀಡಲಾಗುವ 6.7 ಕೋಟಿ ರು ಬಹುಮಾನ ಭಾರತದ ಪಾಲಾಗಲಿದೆ.
ಟಾಪ್ 5 ಟೆಸ್ಟ್ ಬ್ಯಾಟ್ಸ್ ಮನ್ ಗಳು
1 ಸ್ಟಿವ್ ಸ್ಮಿತ್-ಆಸ್ಟ್ರೇಲಿಯಾ 936(ಅಂಕ)
2 ಜೋ ರೂಟ್-ಇಂಗ್ಲೆಂಡ್ 848
3 ವಿರಾಟ್ ಕೊಹ್ಲಿ- ಭಾರತ 847
4 ಕೇನ್ ವಿಲಿಯಮ್ಸನ್-ನ್ಯೂಜಿಲೆಂಡ್ 823
5 ಡೇವಿಡ್ ವಾರ್ನರ್-ಆಸ್ಟ್ರೇಲಿಯಾ 794
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications