Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ: ಮೊದಲ ಸ್ಥಾನ ಕಳೆದುಕೊಂಡ ಕೊಹ್ಲಿ, ಬೂಮ್ರಾಗೂ ಶಾಕ್!

ICC Test Rankings Virat Kohli Loses No.1 Rank

ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತಿರುವ ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಬೇಕೆಂದು ಪಣತೊಟ್ಟಿದೆ. ಆದರೆ ಈ ಮಧ್ಯೆ ಐಸಿಸಿ ಹೊಸ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ನಂಬರ್ 1 ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯವನ್ನು ಟೀಮ್ ಇಂಡಿಯಾ 10 ವಿಕೆಟ್‌ಗಳಿಂದ ಶರಣಾಗಿತ್ತು. ಟೀಮ್ ಇಮಡಿಯಾ ನಾಯಕ ವಿರಾಟ್ ಕೊಹ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಉತ್ತಮ ಪ್ರದರ್ಶನವನ್ನು ತೋರಿಸಲಿಲ್ಲ. ಇದೀಗ ಈ ಕೆಟ್ಟ ಪ್ರದರ್ಶನಕ್ಕೆ ವಿರಾಟ್ ದೊಡ್ಡ ಬೆಲೆಯನ್ನೇ ತೆತ್ತಿದ್ದಾರೆ.

ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದ್ದ ವಿರಾಟ್ ಕೊಹ್ಲಿ ಈಗ ಆ ಸ್ಥಾನದಿಂದ ಕೆಳಗಿಳಿದಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮತ್ತೆ ಮೊದಲ ಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

911 ಅಂಕಗಳನ್ನು ಗಳಿಸಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮೊದಲ ಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನವನ್ನು ಕೆಳಗಿಳಿದು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿರುವ ಸ್ಟೀವ್ ಸ್ಮಿತ್‌ಗಿಂತ 5 ಅಂಕ ಹಿಂದಿದ್ದಾರೆ. 906 ಅಂಕ ವಿರಾಟ್ ಬತ್ತಳಿಕೆಯಲ್ಲಿದೆ.

ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರ ಅವರು ಟಾಪ್ 10 ರಿಂದಲೂ ಕೆಳಗೆ ಜಾರಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಆರ್‌.ಅಶ್ವಿನ್ ಮಾತ್ರ ಟಾಪ್ 10ನಲ್ಲಿರವ ಟೀಮ್ ಇಂಡಿಯಾ ಆಟಗಾರನಾಗಿದ್ದಾರೆ.

Story first published: Wednesday, February 26, 2020, 16:28 [IST]
Other articles published on Feb 26, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+