ICC Test Team: ಐಸಿಸಿ ಟೆಸ್ಟ್ ತಂಡದಲ್ಲಿ ವಿರಾಟ್‌ಗಿಲ್ಲ ಸ್ಥಾನ: ಸ್ಥಾನ ಪಡೆದಿರುವ ಇಬ್ಬರು ಭಾರತೀಯರು
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 2023 ರ ವರ್ಷದ ಅತ್ಯುತ್ತಮ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಐಸಿಸಿ ಟೆಸ್ಟ್ ತಂಡವನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಜೇತ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮಾಡಲಿದ್ದಾರೆ.
ಈ ತಂಡದಲ್ಲಿ ಭಾರತದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ. ಟಿ20ಯಂತೆ ಪಾಕಿಸ್ತಾನದ ಯಾವುದೇ ಆಟಗಾರ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ.

2023 ರ ಐಸಿಸಿಯ ಅತ್ಯುತ್ತಮ ಟೆಸ್ಟ್ ತಂಡದಲ್ಲಿ ಆಸ್ಟ್ರೇಲಿಯಾದ ಐದು ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಮೂಲಕ ತಮ್ಮ ಅಬ್ಬರವನ್ನು ಮುಂದುವರೆಸಿದ್ದಾರೆ. ಭಾರತದ ಇಬ್ಬರು, ಇಂಗ್ಲೆಂಡ್‌ನ ಇಬ್ಬರು, ಶ್ರೀಲಂಕಾದ ಒಬ್ಬರು ಮತ್ತು ನ್ಯೂಜಿಲೆಂಡ್‌ನ ಒಬ್ಬ ಆಟಗಾರರನ್ನು ತಂಡ ಒಳಗೊಂಡಿದೆ.
ಆಸೀಸ್ ತಂಡದ ಐವರು ಆಟಗಾರರು
ಐಸಿಸಿ ಭಾರತದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು 2023 ರ ಅತ್ಯುತ್ತಮ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಿದೆ. ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್, ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ, ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಸ್ಥಾನ ಪಡೆದಿದ್ದಾರೆ.
ಶ್ರೀಲಂಕಾದ ದಿಮುತ್ ಕರುಣಾರತ್ನೆ, ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್, ಇಂಗ್ಲೆಂಡ್‌ನ ಜೋ ರೂಟ್ ಮತ್ತು ಸ್ಟುವರ್ಟ್ ಬ್ರಾಡ್ ಕೂಡ 2023 ರ ಅತ್ಯುತ್ತಮ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದ ಆಸ್ಟ್ರೇಲಿಯಾ ತಂಡದ ಐವರು ಸದಸ್ಯರು ಈ ತಂಡದಲ್ಲಿ ಸೇರಿದ್ದಾರೆ.

ಪ್ರತಿ ವರ್ಷ ಐಸಿಸಿ ಎಲ್ಲಾ ಮೂರು ಸ್ವರೂಪಗಳ ಉತ್ತಮ ಪುರುಷ ಮತ್ತು ಮಹಿಳಾ ತಂಡಗಳನ್ನು ಆಯ್ಕೆ ಮಾಡುತ್ತದೆ. ಉತ್ತಮ ಪ್ರದರ್ಶನ ನೀಡಿದ ವಿಶ್ವದಾದ್ಯಂತ 11 ಆಟಗಾರರು ಈ ತಂಡಗಳಲ್ಲಿ ಸ್ಥಾನ ಪಡೆಯುತ್ತಾರೆ. ಐಸಿಸಿ 2023 ರ ಅತ್ಯುತ್ತಮ ಟಿ20, ಅತ್ಯುತ್ತಮ ಏಕದಿನ ಮತ್ತು ಅತ್ಯುತ್ತಮ ಟೆಸ್ಟ್ ತಂಡವನ್ನು ಪ್ರಕಟಿಸಿದೆ.
ತಂಡದಲ್ಲಿ ಮೂವರು ವೇಗಿಗಳು
ಐಸಿಸಿ ಟೆಸ್ಟ್ ತಂಡದಲ್ಲಿ ಮೂವರು ವೇಗಿಗಳು ಸ್ಥಾನ ಪಡೆದಿದ್ದಾರೆ. ಇದರಲ್ಲಿ ಇಬ್ಬರು ಆಸೀಸ್ ತಂಡದವರೇ ಎಂಬುದು ವಿಶೇಷ. ಸ್ಟುವರ್ಟ್ ಬ್ರಾಡ್ ಮೂರನೇ ವೇಗಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಆಲ್‌ರೌಂಡರ್ ಸ್ಪಿನ್ ಬೌಲರ್ಸ್ ರೂಪದಲ್ಲಿ ಭಾರತದ ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರಿಗೆ ಸ್ಥಾನ ನೀಡಲಾಗಿದೆ.
ಐಸಿಸಿ ಟೆಸ್ಟ್ ತಂಡ : ಉಸ್ಮಾನ್ ಖವಾಜಾ, ದಿಮುತ್ ಕರುಣಾರತ್ನೆ, ಕೇನ್ ವಿಲಿಯಮ್ಸನ್, ಜೋ ರೂಟ್, ಟ್ರಾವಿಸ್ ಹೆಡ್, ರವೀಂದ್ರ ಜಡೇಜಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಆರ್ ಅಶ್ವಿನ್, ಮಿಚೆಲ್ ಸ್ಟಾರ್ಕ್ ಮತ್ತು ಸ್ಟುವರ್ಟ್ ಬ್ರಾಡ್.

ಐಸಿಸಿ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಟ್ರಾವಿಸ್ ಹೆಡ್, ವಿರಾಟ್ ಕೊಹ್ಲಿ, ಡೆರಿಲ್ ಮಿಚೆಲ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಮಾರ್ಕೊ ಯೂನ್ಸೆನ್, ಆಡಮ್ ಝಂಪಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ.
ಐಸಿಸಿ ಟಿ20 ತಂಡ: ಯಶಸ್ವಿ ಜೈಸ್ವಾಲ್, ಫಿಲ್ ಸಾಲ್ಟ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ಮಾರ್ಕ್ ಚಾಪ್ಮನ್, ಸಿಕಂದರ್ ರಜಾ, ಅಲ್ಪೇಶ್ ರಾಮ್ಜಾನಿ, ಮಾರ್ಕ್ ಅದೈರ್, ರವಿ ಬಿಷ್ಣೋಯ್, ರಿಚರ್ಡ್ ನಗರ್ವಾ ಮತ್ತು ಅರ್ಶ್ದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications