ICC Test Team Ranking: ಟೆಸ್ಟ್ ಕ್ರಿಕೆಟ್‌ನಲ್ಲೂ ಭಾರತ ತಂಡದ ಪ್ರಾಬಲ್ಯ: ಐಸಿಸಿ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೆ

ಎರಡನೇ ಟೆಸ್ಟ್ ಪಂದ್ಯಕ್ಕೆ ಸಿದ್ಧವಾಗುತ್ತಿರುವ ಭಾರತ ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಬಳಿಕ ಭಾರತ ತಂಡ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದೆ.
ಭಾರತ ತಂಡ ಈಗ ಏಕದಿನ, ಟಿ20 ಮತ್ತು ಟೆಸ್ಟ್ ಮೂರು ಮಾದರಿಯಲ್ಲಿ ಅಗ್ರಸ್ಥಾನಕ್ಕೇರಿದೆ. 2ನೇ ಟೆಸ್ಟ್ ಪಂದ್ಯಕ್ಕೆ ಸಿದ್ಧವಾಗುತ್ತಿರುವ ರೋಹಿತ್ ಶರ್ಮಾ ಪಡೆಗೆ ಈ ಸುದ್ದಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಎಲ್ಲಾ ಮಾದರಿ ಕ್ರಿಕೆಟ್‌ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಏಷ್ಯಾದ ಮೊದಲ ಮತ್ತು ವಿಶ್ವದ ಎರಡನೇ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುನ್ನ ಭಾರತ ತಂಡ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿತ್ತು. ಆಸ್ಟ್ರೇಲಿಯಾ ಮೊದಲನೇ ಸ್ಥಾನದಲ್ಲಿತ್ತು. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 132 ರನ್‌ಗಳ ಜಯ ಸಾಧಿಸಿದ ಬಳಿಕ ಟೀಂ ಇಂಡಿಯಾ 115 ರೇಟಿಂಗ್‌ನೊಂದಿಗೆ ಅಗ್ರಸ್ಥಾನಕ್ಕೇರಿದೆ. 111 ರೇಟಿಂಗ್‌ನೊಂದಿಗೆ ಆಸ್ಟ್ರೇಲಿಯಾ ಎರಡನೆ ಸ್ಥಾನಕ್ಕೆ ಕುಸಿದಿದೆ.
ಇತ್ತೀಚೆಗೆ ನಡೆದ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದ ಬಳಿಕ ಭಾರತ ತಂಡ ಏಕದಿನ ಮಾದರಿಯಲ್ಲಿ ಅಗ್ರಸ್ಥಾನಕ್ಕೇರಿತ್ತು.

ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತದ ಆಟಗಾರರು
ಟೆಸ್ಟ್ ಮಾದರಿಯಲ್ಲಿ ಭಾರತ ತಂಡದ ಆಟಗಾರರು ರ್‍ಯಾಂಕಿಂಗ್‌ನಲ್ಲಿ ಭರ್ಜರಿ ಏರಿಕೆ ಕಂಡಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದರೆ, ಮತ್ತೊಬ್ಬ ಸ್ಪಿನ್ನರ್ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ 2ನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಕೂಡ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಪ್ಯಾಟ್ ಕಮ್ಮಿನ್ಸ್ 867 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಅಶ್ವಿನ್ 846 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ, ದೆಹಲಿ ಟೆಸ್ಟ್‌ನಲ್ಲಿ ಅಶ್ವಿನ್ ಮಿಂಚಿದರೆ ಅಗ್ರಸ್ಥಾನಕ್ಕೇರವ ಸಾಧ್ಯತೆ ಹೆಚ್ಚಾಗಿದೆ.
ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ 8ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಬಳಿಕ ಅವರ ರ್‍ಯಾಂಕಿಂಗ್‌ನಲ್ಲಿ ಏರಿಕೆಯಾಗಿದೆ. ರಿಷಬ್ ಪಂತ್ 7ನೇ ಸ್ಥಾನದಲ್ಲಿದ್ದಾರೆ.

ಏಕದಿನ ಮಾದರಿಯಲ್ಲೂ ಪಾರಮ್ಯ
ಏಕದಿನ ಮಾದರಿಯಲ್ಲಿ ಕೂಡ ಟೀಂ ಇಂಡಿಯಾ ಭರ್ಜರಿ ಫಾರ್ಮ್‌ನಲ್ಲಿದೆ. ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧ ಸರಣಿಯನ್ನು ಗೆಲ್ಲುವ ಮೂಲಕ ಅವರು ಅಗ್ರಸ್ಥಾನಕ್ಕೇರಿದ್ದರು. ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ಸದ್ಯ ವಿಶ್ವದ ಅಗ್ರಬೌಲರ್ ಆಗಿದ್ದಾರೆ.
ಬ್ಯಾಟಿಂಗ್‌ನಲ್ಲಿ ಶುಭಮನ್ ಗಿಲ್ 6ನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 7ನೇ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9ನೇ ಸ್ಥಾನದಲ್ಲಿದ್ದಾರೆ.

ಟಿ20 ಮಾದರಿಯಲ್ಲಿ ನಂಬರ್ 1 ಸ್ಥಾನದತ್ತ ಪಾಂಡ್ಯ
ದೀರ್ಘಕಾಲದಿಂದ ಟೀಂ ಇಂಡಿಯಾ ಟಿ20 ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಮಿಸ್ಟರ್ 360 ಬ್ಯಾಟರ್ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 906 ಅಂಕಗಳನ್ನು ಪಡೆಯುವ ಮೂಲಕ ಅವರು ನಂಬರ್ 1 ಆಗಿದ್ದಾರೆ.
ಆಲ್‌ರೌಂಡರ್ ವಿಭಾಗದಲ್ಲಿ ಪಾಂಡ್ಯ ಎರಡನೇ ಸ್ಥಾನಕ್ಕೇ ಜಿಗಿದಿದ್ದಾರೆ. ಶಕೀಬ್ ಅಲ್ ಹಸನ್ 252 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಪಾಂಡ್ಯ 250 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications