Champions Trophy 2025: ಪಾಕಿಸ್ತಾನಕ್ಕೆ ಐಸಿಸಿ ಭೇಟಿ ಮುಕ್ತಾಯ; ಪಿಸಿಬಿಯಿಂದ ಗುಡ್ ನ್ಯೂಸ್
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಐಸಿಸಿ ಅಧಿಕಾರಿಗಳು ಪಾಕಿಸ್ತಾನಕ್ಕೆ ಭೇಟಿ ನೀಡಿ ಅಲ್ಲಿನ ಟೂರ್ನಿ ಸಿದ್ಧತೆಗಳನ್ನು ಪರಿಶೀಲಿಸಿದ್ದರು. ಇದಾದ ಬಳಿಕ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ನಿಂದ ಗುಡ್ ನ್ಯೂಸ್ ಕೇಳಿ ಬಂದಿದೆ.
ಮುಂದಿನ ವರ್ಷ 2025ರ ಫೆಬ್ರವರಿಯಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ಐಸಿಸಿ ಅಧಿಕಾರಿಗಳು ಪಿಸಿಬಿಯ ಸಿದ್ಧತೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಐಸಿಸಿ ಆಯೋಗ ಪರಿಶೀಲನೆ
ಪಾಕಿಸ್ತಾನಕ್ಕೆ ಭೇಟಿ ನೀಡಿದ ಐಸಿಸಿ ಅಧಿಕಾರಿ ಆಯೋಗ ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಸಿದ್ಧತೆಗಳನ್ನು ಸಂಪೂರ್ಣ ಪರಿಶೀಲನೆ ನಡೆಸಿದೆ. ಆಯೋಗವು ಲಾಹೋರ್‌ನ ಪ್ರಸಿದ್ಧ ಗಡಾಫಿ ಸ್ಟೇಡಿಯಂ ಸೇರಿದಂತರ ರಾವಲ್ಪಿಂಡಿ, ಕರಾಚಿ ರಾಷ್ಟ್ರೀಯ ಕ್ರೀಡಾಂಗಣಗಳಿಗೆ ಭೇಟಿ ನೀಡಿದೆ.
ಈ ಸಂದರ್ಭದಲ್ಲಿ, ಆಯೋಗ ಕ್ರೀಡಾಂಗಣದ ಭದ್ರತಾ ಕ್ರಮಗಳು, ಮೂಲಸೌಕರ್ಯ ಮತ್ತು ಇತರ ಪ್ರಮುಖ ವ್ಯವಸ್ಥೆಗಳನ್ನು ಪರಿಶೀಲಿಸಿದೆ. ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭದ್ರತಾ ವ್ಯವಸ್ಥೆಗಳ ಬಗ್ಗೆಯೂ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರೊಂದಿಗಿನ ಸಭೆಯಲ್ಲಿ ಚರ್ಚಿಸಲಾಗಿದೆ.
ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ಕರಾಚಿ ಮತ್ತು ರಾವಲ್ಪಿಂಡಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಿಗೆ ಮಾಡಲಾದ ವ್ಯವಸ್ಥೆಗಳ ಬಗ್ಗೆ ಮತ್ತು ಭದ್ರತಾ ಕ್ರಮಗಳ ಬಗ್ಗೆ ಐಸಿಸಿ ನಿಯೋಗವು ತೃಪ್ತಿ ವ್ಯಕ್ತಪಡಿಸಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ವಿಶ್ವ ದರ್ಜೆಯ ವ್ಯವಸ್ಥೆಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ಪಾಕಿಸ್ತಾನದ ಕೈಯಲ್ಲಿ ಉಳಿಯಬಹುದು ಖಚಿತ ಎನ್ನಲಾಗುತ್ತಿದೆ.
ಪಿಸಿಬಿ ಅಧ್ಯಕ್ಷ ಹೇಳಿದ್ದೇನು?
ಐಸಿಸಿ ನಿಯೋಗದ ಭೇಟಿ ನಂತರ ಮಾತನಾಡಿರುವ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, 'ಚಾಂಪಿಯನ್ಸ್ ಟ್ರೋಫಿಗಿಂತ ಮೊದಲು ಕ್ರೀಡಾಂಗಣಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು' ಎಲ್ಲ ತಂಡಗಳಿಗೂ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗುವುದು. ಬೃಹತ್ ಟೂರ್ನಿಗಳ ಪ್ರಕಾರ ವ್ಯವಸ್ಥೆಗಳನ್ನು ಅಂತಿಮಗೊಳಿಸಲಾಗುತ್ತಿದೆ. ಎಲ್ಲಾ ತಂಡಗಳ ಆಟಗಾರರು ಶಾಂತಿಯುತ ಮತ್ತು ಸುರಕ್ಷಿತ ವಾತಾವರಣದಲ್ಲಿ ಕ್ರಿಕೆಟ್ ಆಡಿ ಆನಂದಿಸುತ್ತಾರೆ ಎಂದು ಭರವಸೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications