ಐಪಿಎಲ್ ಟೂರ್ನಿ ವಿಸ್ತರಿಸುವ ಬಿಸಿಸಿಐ ಕನಸಿಗೆ ಐಸಿಸಿ ತಣ್ಣೀರು

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಯಾವುದೇ ಅಡಚಣೆಗಳಿಲ್ಲದೇ 29 ಪಂದ್ಯಗಳನ್ನು ಯಶಸ್ವಿಯಾಗಿ ಪೂರೈಸಿತ್ತು. ಆದರೆ ನಂತರದ ದಿನಗಳಲ್ಲಿ ಕೊರೊನಾ ಐಪಿಎಲ್ ಬಯೋಬಬಲ್ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಮಧ್ಯದಲ್ಲಿಯೇ ಐಪಿಎಲ್ ಟೂರ್ನಿಯನ್ನು ಮೊಟಕುಗೊಳಿಸಿ ಮುಂದೂಡಲಾಯಿತು.
ನ್ಯೂಜಿಲೆಂಡ್‌ನ ಈ ಬೌಲರ್‌ಗೆ ಕೊಹ್ಲಿ ಹೆದರುತ್ತಾರೆ; ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್!
ಹೀಗೆ ಮುಂದೂಡಲ್ಪಟ್ಟ ಪ್ರಸಕ್ತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಸೆಪ್ಟೆಂಬರ್ ತಿಂಗಳಿನಿಂದ ಯುಎಇಯಲ್ಲಿ ಪುನರಾರಂಭಿಸುವ ಕಾರ್ಯಕ್ಕೆ ಬಿಸಿಸಿಐ ಕೈಹಾಕಿದೆ. ಸೌರವ್ ಗಂಗೂಲಿ ಈಗಾಗಲೇ ದುಬೈ ತಲುಪಿದ್ದು ಐಪಿಎಲ್ ಟೂರ್ನಿಯನ್ನು ಮುಂದುವರೆಸುವುದರ ಕುರಿತು ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಹಿಂದೆ ನಡೆದ ಬಿಸಿಸಿಐನ ವಿಶೇಷ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ 18 ಅಥವಾ 19ರಿಂದ ಅಕ್ಟೋಬರ್ 10ರವರೆಗೆ ಐಪಿಎಲ್ ಟೂರ್ನಿಯನ್ನು ನಡೆಸುವುದಾಗಿ ತೀರ್ಮಾನ ಮಾಡಲಾಗಿತ್ತು.
ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ನಲ್ಲಿ ಭಾರತದ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್!
ಬಿಸಿಸಿಐ ನಿಗದಿಪಡಿಸಿದ್ದ ಈ ಅವಧಿಯಲ್ಲಿ ಪ್ರಸಕ್ತ ಐಪಿಎಲ್ ಟೂರ್ನಿಯ ಉಳಿದ 31 ಪಂದ್ಯಗಳನ್ನು ಆಯೋಜಿಸಿದರೆ ಡಬಲ್ ಹೆಡರ್ ಪಂದ್ಯಗಳನ್ನು ಹೆಚ್ಚಾಗಿ ನಡೆಸಬೇಕಾಗುತ್ತದೆ. ಹೀಗಾಗಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವನ್ನು ಅಕ್ಟೋಬರ್ 10ರ ಬದಲು ಅಕ್ಟೋಬರ್ 15ರಂದು ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸುತ್ತಿರುವುದಾಗಿ ಬಲ್ಲ ಮೂಲವೊಂದು ತಿಳಿಸಿತ್ತು. ಆದರೆ ಇದೀಗ ಬಿಸಿಸಿಐನ ಈ ಕನಸಿಗೆ ಐಸಿಸಿ ತಣ್ಣೀರೆರೆಚಿದ್ದು ಅಕ್ಟೋಬರ್ 10ರ ನಂತರದ ದಿನಗಳಲ್ಲಿ ಐಪಿಎಲ್ ಫೈನಲ್ ಪಂದ್ಯವನ್ನು ಆಯೋಜನೆ ಮಾಡಲು ಅವಕಾಶ ನೀಡುವುದಿಲ್ಲ ಎನ್ನಲಾಗುತ್ತಿದೆ.

ಐಪಿಎಲ್ ಫೈನಲ್ ಪಂದ್ಯಕ್ಕೆ ಐಸಿಸಿ ಅಡ್ಡಿಪಡಿಸಲು ಟಿ ಟ್ವೆಂಟಿ ವಿಶ್ವಕಪ್ ಕಾರಣ
ಈ ಹಿಂದೆಯೇ ತೀರ್ಮಾನಿಸಿರುವಂತೆ ಅಕ್ಟೋಬರ್ 18ರಿಂದ ನವೆಂಬರ್ 14ರವರೆಗೆ ಟಿ ಟ್ವೆಂಟಿ ವಿಶ್ವಕಪ್ ನಡೆಯಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅಕ್ಟೋಬರ್ 10ರ ನಂತರದ ದಿನಗಳಲ್ಲಿ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವನ್ನು ಆಯೋಜನೆ ಮಾಡಲು ಐಸಿಸಿ ಒಪ್ಪಿಗೆ ನೀಡುವುದಿಲ್ಲ ಎನ್ನಲಾಗುತ್ತಿದೆ.

ಉಳಿದಿರುವ ಪಂದ್ಯಗಳೆಷ್ಟು?
ಸೆಪ್ಟೆಂಬರ್ ತಿಂಗಳಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯಲಿದ್ದು 31 ಬಾಕಿ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ನಡೆಸಲಾಗುತ್ತದೆ.

ಟಿ ಟ್ವೆಂಟಿ ವಿಶ್ವಕಪ್ ಕೂಡಾ ದುಬೈಗೆ ಸ್ಥಳಾಂತರವಾಗುವ ಸಾಧ್ಯತೆ
ಭಾರತದಲ್ಲಿ ಕೊರೊನಾವೈರಸ್ ಭೀತಿ ಇನ್ನೂ ಕೂಡ ಇದೆ. ಹೀಗಾಗಿ ಭಾರತದಲ್ಲಿ ನಡೆಸಬೇಕಾಗಿದ್ದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಕೂಡ ಐಪಿಎಲ್ ರೀತಿಯಲ್ಲಿಯೇ ಯುಎಇಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ದುಬೈ ತಲುಪಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಐಪಿಎಲ್ ಟೂರ್ನಿಯ ಜೊತೆಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಬಗ್ಗೆ ಕೂಡ ಎಮಿರೇಟ್ಸ್ ಕ್ರಿಕೆಟ್ ಬೋರ್ಡ್‌ನ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications