Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಸಿಸಿ ಶ್ರೇಯಾಂಕ: ನಾಲ್ಕನೇ ಸ್ಥಾನಕ್ಕೆ ಕುಸಿದ ಸ್ಮೃತಿ ಮಂಧಾನಾ

ICC Women ODI Ranking: Smriti Mandhana Drops To No 4 Position

ಭಾರತದ ಸ್ಟಾರ್ ಬ್ಯಾಟ್ಸ್‌ವುಮನ್ ಸ್ಮೃತಿ ಮಂಧಾನಾ ಅವರು ಐಸಿಸಿ ಏಕದಿನ ಶ್ರೇಯಾಂಕದ ಮಹಿಳಾ ಆಟಗಾರರ ಪಟ್ಟಿಯಲ್ಲಿ ಒಂದು ಸ್ಥಾನ ಕಳೆದುಕೊಂಡು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಮಾಜಿ ನಾಯಕಿ ಮಿಥಾಲಿ ರಾಜ್ ಹತ್ತನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಮಹಿಳಾ ಕ್ರಿಕೆಟ್‌ನ ಏಕದಿನ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ನಾಯಕಿ ಮೆಗ್ ಲ್ಯಾನಿಂಗ್ ಮೊದಲ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ಮಹಿಳಾ ತಂಡದ ವಿರುದ್ಧ ನಡೆದ ಏಕದಿನ ಸರಣಿಯನ್ನು 3-0 ಅಂತರದಲ್ಲಿ ವೈಟ್ ವಾಷ್ ಮಾಡುವ ಮೂಲಕ ಸತತ 21 ಪಂದ್ಯಗಳನ್ನು ಗೆದ್ದ ದಾಖಲೆ ನಿರ್ಮಿಸಿದ ಬಳಿಕ ಲ್ಯಾನಿಂಗ್ ಮೊದಲ ಸ್ಥಾನಕ್ಕೇರಿದ್ದಾರೆ.

28 ವರ್ಷದ ಲ್ಯಾನಿಂಗ್ ಎರಡು ಪಂದ್ಯಗಳಿಂದ 163 ರನ್ ಗಳಿಸಿದ್ದಾರೆ. ಎರಡನೆಯ ಪಂದ್ಯದಲ್ಲಿ ಔಟಾಗದೆ 101 ರನ್ ಗಳಿಸಿದ್ದರು. ಈ ಇನ್ನಿಂಗ್ಸ್ ಅವರು ಮೊದಲ ಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ ನಾಯಕಿ ಸ್ಟಫಾನಿ ಟೇಲರ್ ಅವರನ್ನು ಹಿಂದಿಕ್ಕಿ ನಾಲ್ಕು ಸ್ಥಾನ ಮೇಲೆ ಜಿಗಿಯಲು ನೆರವಾಗಿದೆ. 2014ರಿಂದ ಈವರೆಗೆ ಐದನೇ ಬಾರಿ ಅವರು ಮೊದಲ ಸ್ಥಾನ ಪಡೆದಂತಾಗಿದೆ.

ಬೌಲರ್ ಶ್ರೇಯಾಂಕದಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದಿರುವ ಜೂಲನ್ ಗೋಸ್ವಾಮಿ ಐದನೇ ಸ್ಥಾನದಲ್ಲಿದ್ದಾರೆ. ಪೂನಮ್ ಯಾದವ್ 6 ಮತ್ತು ಶಿಖಾ ಪಾಂಡೆ 7ನೇ ಸ್ಥಾನದಲ್ಲಿದ್ದಾರೆ. ದೀಪ್ತಿ ಶರ್ಮಾ 10ನೇ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಎಡಗೈ ಸ್ಪಿನ್ನರ್ ಜೆಸ್ ಜೊನಾಸೆನ್ ಮೊದಲ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ದೀಪ್ತಿ ಮತ್ತು ಶಿಖಾ ಇಬ್ಬರೂ ಕ್ರಮವಾಗಿ 4 ಮತ್ತು 9ನೇ ಸ್ಥಾನದಲ್ಲಿದ್ದಾರೆ. ತಂಡಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೆಯ ಸ್ಥಾನವನ್ನು ಉಳಿಸಿಕೊಂಡಿದೆ.

Story first published: Friday, October 9, 2020, 10:16 [IST]
Other articles published on Oct 9, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+