Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup: ಮಿಂಚಿದ ದೀಪ್ತಿ ಶರ್ಮಾ; ಭಾರತ ಮಹಿಳೆಯರಿಗೆ ಸಾಧಾರಣ ಗುರಿ ನೀಡಿದ ವೆಸ್ಟ್ ಇಂಡೀಸ್

ICC Womens T20 World Cup 2023: India Womens Need 119 Runs To Against West Indies Womens

ಬುಧವಾರ, ಫೆಬ್ರವರಿ 15ರಂದು ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ 2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಬಿ ಗುಂಪಿನ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹೀಲಿ ಮ್ಯಾಥ್ಯೂಸ್ ನಾಯಕತ್ವದ ವೆಸ್ಟ್ ಇಂಡೀಸ್ ಮಹಿಳಾ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿದ್ದು, ಭಾರತ ಮಹಿಳಾ ತಂಡಕ್ಕೆ 119 ರನ್‌ಗಳ ಸಾಧಾರಣ ಗುರಿ ನೀಡಿದೆ.

ಬಿಗಿ ಬೌಲಿಂಗ್ ಪ್ರದರ್ಶನ ನೀಡಿದ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ, ವೆಸ್ಟ್ ಇಂಡೀಸ್ ಬ್ಯಾಟರ್‌ಗಳನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದರು.

ICC Womens T20 World Cup 2023: India Womens Need 119 Runs To Against West Indies Womens

ವೆಸ್ಟ್ ಇಂಡೀಸ್ ತಂಡದ ಪರ ಬ್ಯಾಟಿಂಗ್‌ನಲ್ಲಿ ಸ್ಟೆಫಾನಿ ಟೇಲರ್ (42 ರನ್), ಶೆಮೈನ್ ಕ್ಯಾಂಪ್‌ಬೆಲ್ಲೆ (30 ರನ್), ಚೆಡಿಯನ್ ನೇಷನ್ (21 ರನ್) ಮತ್ತು ಶಬಿಕಾ ಗಜ್ನಾಬಿ (15 ರನ್) ಗಳಿಸಿದ್ದು ಬಿಟ್ಟರೆ ಉಳಿದರಾರು ಎರಡಂಕಿ ಮೊತ್ತ ಗಳಿಸಲಿಲ್ಲ.

ಇನ್ನು ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಸ್ಪಿನ್ನರ್ ದೀಪ್ತಿ ಶರ್ಮಾ 4 ಓವರ್‌ಗಳಲ್ಲಿ 15 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ರೇಣುಕಾ ಸಿಂಗ್ ಠಾಕೂರ್ ಮತ್ತು ಪೂಜಾ ವಸ್ತ್ರಾಕರ್ ತಲಾ ಒಂದೊಂದು ವಿಕೆಟ್ ಪಡೆದರು.

ಭಾರತ ಮಹಿಳೆಯರು vs ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಭಾರತ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ರಿಚಾ ಘೋಷ್(ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ದೇವಿಕಾ ವೈದ್ಯ, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್ ಠಾಕೂರ್.

ವೆಸ್ಟ್ ಇಂಡೀಸ್: ಹೇಲಿ ಮ್ಯಾಥ್ಯೂಸ್ (ನಾಯಕಿ), ಸ್ಟೆಫಾನಿ ಟೇಲರ್, ಶೆಮೈನ್ ಕ್ಯಾಂಪ್‌ಬೆಲ್ಲೆ, ಶಬಿಕಾ ಗಜ್ನಾಬಿ, ಚಿನೆಲ್ಲೆ ಹೆನ್ರಿ, ಚೆಡಿಯನ್ ನೇಷನ್, ಅಫಿ ಫ್ಲೆಚರ್, ಶಾಮಿಲಿಯಾ ಕಾನ್ನೆಲ್, ರಶಾದಾ ವಿಲಿಯಮ್ಸ್ (ವಿಕೆಟ್ ಕೀಪರ್), ಕರಿಷ್ಮಾ ರಾಮ್ಹರಾಕ್, ‍ಷೇಕೆರಾ ಸೆಲ್ಮನ್.

Story first published: Wednesday, February 15, 2023, 20:10 [IST]
Other articles published on Feb 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+