For Quick Alerts
ALLOW NOTIFICATIONS  
For Daily Alerts
 

Harmanpreet Kaur: ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬಗ್ಗೆ ಟೀಮ್ ಇಂಡಿಯಾ ನಾಯಕಿ ಹೇಳಿದ್ದೇನು?

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಉತ್ತಮ ಆರಂಭ ಪಡೆಯಲಿಲ್ಲ. ತನ್ನ ಮೊದಲ ಗುಂಪಿ ಹಂತದಪಂದ್ಯದಲ್ಲಿ ಹರ್ಮನ್‌ಪ್ರೀತ್ ನೇತೃತ್ವದ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 58 ರನ್‌ಗಳಿಂದ ಹೀನಾಯ ಸೋಲನ್ನು ಎದುರಿಸಬೇಕಾಯಿತು.

ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್‌ಗಳ ಫಾರ್ಮ್ ಸಮಸ್ಯೆ ಮತ್ತೆ ಮುನ್ನಲೆಗೆ ಬಂದಿದೆ. ಸುಲಭವಾಗಿ ಗೆಲ್ಲುವ ಪಂದ್ಯವನ್ನು ಭಾರತ ತಂಡದ ವನಿತೆಯರು ಕಳೆದುಕೊಂಡರು. ತಂಡ ಬಲಿಷ್ಠವಾಗಿದ್ದರೂ ಆಟಗಾರರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರಲಿಲ್ಲ.

ICC Women T20 World Cup 2024 What did Harmanpreet Kaur say about the loss against New Zealand

ಭಾನುವಾರ ಅಕ್ಟೋಂಬರ್ 6 ರಂದು ಭಾರತ ತನ್ನ ಮುಂದಿನ ಪಂದ್ಯವನ್ನು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ನ್ಯೂಜಿಲೆಂಡ್ ವಿರುದ್ಧದ ಸೋಲಿನ ನಂತರ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ತಂಡದಲ್ಲಿರುವ ಕೆಲವು ತಪ್ಪುಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಹರ್ಮನ್‌ಪ್ರೀತ್ ಕೌರ್ ಹೇಳಿದ್ದೇನು?

'ನಾವು ಅತ್ಯುತ್ತಮ ಕ್ರಿಕೆಟ್ ಆಡಲಿಲ್ಲ. ಆದರೆ, ಇದು ನಾವು ನಿರೀಕ್ಷಿಸಿದ ಆರಂಭವಲ್ಲ. ಮುಂದಿನ ಪಂದ್ಯಕ್ಕೂ ತಂಡದಲ್ಲಿ ಎಲ್ಲಿ ಸುಧಾರಣೆ ತರಬೇಕು ಎಂದು ಯೋಚಿಸಬೇಕಾಗಿದೆ. ಈಗ ಪ್ರತಿಯೊಂದು ಪಂದ್ಯವೂ ಮಹತ್ವದ್ದಾಗಿದ್ದು, ನಾವು ನಮ್ಮ ಅತ್ಯುತ್ತಮ ಕ್ರಿಕೆಟ್ ಆಡಬೇಕಿದೆ. ನಾವು ಪಂದ್ಯದ ಸಂದರ್ಭದಲ್ಲಿ ಕೆಲವು ಅವಕಾಶಗಳನ್ನು ಸೃಷ್ಟಿಸಿದ್ದೇವೆ. ಆದರೂ, ಅವರು ನಮಗಿಂತ ಉತ್ತಮವಾಗಿ ಆಟವಾಡಿದ್ದಾರೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ನಾವು ಹಲವು ಬಾರಿ 160 ರಿಂದ 170 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದೇವೆ. ಆದರೆ ಆ ಪಿಚ್‌ನಲ್ಲಿ ಹೆಚ್ಚು ರನ್‌ಗಳಿಸುವುದು ಕಷ್ಟ. ಒಂದು ಹಂತದಲ್ಲಿ ನ್ಯೂಜಿಲೆಂಡ್ ಆರಂಭಿಸಿದ ರೀತಿ ನೋಡಿ ಟಾರ್ಗೆಟ್ 180 ರನ್‌ ಆಗಬಹುದು ಎಂದುಕೊಂಡಿದ್ದೆ' ಎಂದು ಪಂದ್ಯ ಮುಗಿದ ಬಳಿಕ ಹರ್ಮನ್‌ಪ್ರೀತ್ ಕೌರ್ ಸೋಲಿನ ಬಗ್ಗೆ ಮಾತನಾಡಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 160 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ಚೇಸಿಂಗ್ ಆರಂಭಿಸಿದ ಭಾರತ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ 102 ರನ್‌ಗಳಿಗೆ ಆಲೌಟಾಯಿತು. ಈ ಮೂಲಕ 58 ರನ್‌ಗಳಿಂದ ಭಾರತ ಸೋಲು ಕಾಣಬೇಕಾಯಿತು.

ಮಂದಿನ ಪಂದ್ಯ ಯಾವಾಗ?

ಭಾರತ ಮತ್ತ ಪಾಕಿಸ್ತಾನ ನಡುವಿನ ರೋಚಕ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಅಕ್ಟೋಬರ್ 6 ರಂದು ಉಭಯ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಾಕಿಸ್ತಾನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಇತ್ತ ಭಾರತ ತಂಡ ಪಾಕಿಸ್ತಾನ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿದೆ.

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡವು 20 ಓವರ್‌ನಲ್ಲಿ 9 ವಿಕೆಟ್ ಕಳೆದುಕೊಂಡು 85 ರನ್ ಗಳಿಸಲಷ್ಟೇ ಶಕ್ತವಾಯಿತು. ಪಾಕಿಸ್ತಾನ 31 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

Story first published: Saturday, October 5, 2024, 7:30 [IST]
Other articles published on Oct 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+