For Quick Alerts
ALLOW NOTIFICATIONS  
For Daily Alerts
 

ICC Women's T20 World Cup 2024: ಕೈಗೆಟಕುವ ದರದಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್‌ಗಳು

ಐಸಿಸಿ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ 2024ರ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಮೆಗಾ ಟೂರ್ನಿ ಭಾಗವಹಿಸಲು ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ದುಬೈಗೆ ತಲುಪಿದೆ. ಭಾರತ ಪುರುಷರ ತಂಡದಂತೆ ಚಾಂಪಿಯನ್ ಆಗುವ ನಿರೀಕ್ಷೆಯಲ್ಲಿರುವ ಹರ್ಮನ್‌ಪ್ರೀತ್ ಕೌರ್ ಪಡೆಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಬೆಂಬಲ ಜೋರಾಗಿದೆ.

ಈ ಬಾರಿಯ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತಿವೆ. ಇದರಲ್ಲಿ ತಂಡಗಳನ್ನು ತಲಾ 5ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ತಂಡ ಎ ಗುಂಪಿನಲ್ಲಿದ್ದು, ನ್ಯೂಜಿಲೆಂಡ್, ಪಾಕಿಸ್ತಾನ, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಆಡಬೇಕಿದೆ.

ICC Women s T20 World Cup 2024 India vs Pakistan match tickets at affordable prices

ಇದಕ್ಕೂ ಮುನ್ನ ಅಕ್ಟೋಬರ್ 3 ರಿಂದ ಪ್ರಾರಂಭವಾಗುವ ಟಿ20 ವಿಶ್ವಕಪ್‌ಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆನ್‌ಲೈನ್ ಟಿಕೆಟ್ ಬುಕಿಂಗ್ ಅನ್ನು ಪ್ರಾರಂಭಿಸಿದೆ. ಜೊತೆಗೆ ವಿಶ್ವಕಪ್ ಪಂದ್ಯಗಳ ಟಿಕೆಟ್ ದರವನ್ನು ಪ್ರಕಟಿಸಿದೆ. ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ದರವನ್ನು ಸಹ ಪ್ರಕಟಿಸಲಾಗಿದೆ. ಎರಡು ದೇಶಗಳ ಅಭಿಮಾನಿಗಳು ಕೈಗೆಟಕುವ ದರದಲ್ಲಿ ಟಿಕೆಟ್ ಖರೀದಿಸುವ ಮೂಲಕ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಟಿಕೆಟ್ ಬೆಲೆ ಎಷ್ಟು?

ಅಕ್ಟೋಬರ್ 6 ರಂದು ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 3.30 ಗಂಟೆಗೆ ಪಂದ್ಯ ಆರಂಭವಾಗಲಿದೆ. ಅದೇ ದಿನ ವೆಸ್ಟ್ ಇಂಡೀಸ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕೂಡ ಅದೇ ಮೈದಾನದಲ್ಲಿ ಸಂಜೆ ಸೆಣಸಾಡಲಿವೆ. ಎರಡೂ ಪಂದ್ಯಗಳಿಗೆ ಐಸಿಸಿ ಒಂದೇ ಟಿಕೆಟ್ ನೀಡಿದ್ದು, ಬೆಲೆ ಕೂಡ ಒಂದೇ ಆಗಿದೆ. ಆದರೆ, ಸ್ಟ್ಯಾಂಡ್‌ಗಳಿಗೆ ಅನುಗುಣವಾಗಿ ಟಿಕೆಟ್ ದರಗಳು ವಿಭಿನ್ನವಾಗಿವೆ.

ಕಡಿಮೆ ದರದ ಟಿಕೆಟ್ ಕೇವಲ 15 ದಿರ್ಹಮ್ಸ್ ಅಂದರೆ ಸುಮಾರು 342 ಭಾರತೀಯ ರೂಪಾಯಿಗಳು. ಕೆಲವು ಸ್ಟ್ಯಾಂಡ್‌ಗಳ ಟಿಕೆಟ್ ದರ 25 ದಿರ್ಹಮ್ಸ್ ಅಂದರೆ ಸುಮಾರು 570 ಭಾರತೀಯ ರೂಪಾಯಿಗಳು. t20worldcup.platinumlist.net ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಭಿಮಾನಿಗಳು ಮೈದಾನದಲ್ಲಿ ಪಂದ್ಯವನ್ನು ವೀಕ್ಷಿಸಲು ಟಿಕೆಟ್‌ಗಳನ್ನು ಕಾಯ್ದಿರಿಸಬಹುದಾಗಿದೆ. 18 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಸ್ಟೇಡಿಯಂನಲ್ಲಿ ಪಂದ್ಯವನ್ನು ವೀಕ್ಷಿಸಲು ಐಸಿಸಿ ಉಚಿತ ಪ್ರವೇಶ ವ್ಯವಸ್ಥೆಯನ್ನು ಮಾಡುತ್ತಿದೆ.

ಹೆಡ್-ಟು-ಹೆಡ್

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೆ ಭಾರತ ಮತ್ತು ಪಾಕಿಸ್ತಾನ ವನಿತೆಯರ ನಡುವೆ 15 ಪಂದ್ಯಗಳು ನಡೆದಿವೆ. 12 ಪಂದ್ಯಗಳನ್ನು ಭಾರತ ಗೆದ್ದಿದ್ದು, ಕೇವಲ ಮೂರರಲ್ಲಿ ಸೋಲನ್ನು ಎದುರಿಸಿದೆ. ಹೀಗಾಗಿ ಚುಟುಕು ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಎದುರು ಭಾರತ ಪ್ರಾಬಲ್ಯ ಸಾಧಿಸಿದೆ. ಕೊನೆಯ ಬಾರಿಗೆ 2023ರ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು.

Story first published: Friday, September 27, 2024, 21:33 [IST]
Other articles published on Sep 27, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+