IND vs PAK: ಹರ್ಮನ್‌ಪ್ರೀತ್ ಕೌರ್ ಪಡೆಗೆ ಪಾಕಿಸ್ತಾನ ನಾಯಕಿಯಿಂದ 'ರೆಡ್ ಅಲರ್ಟ್'
ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಗೆಲುವಿನ ಶುಭಾರಂಭವನ್ನು ಮಾಡಿದೆ. ತನ್ನ ಮೊದಲ ಪಂದ್ಯದಲ್ಲಿ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಶ್ರೀಲಂಕಾವನ್ನು 31 ರನ್‌ಗಳಿಂದ ಸೋಲಿಸಿದೆ. ಪಾಕಿಸ್ತಾನದ ಮುಂದಿನ ಪಂದ್ಯದಲ್ಲಿ ಭಾರತವನ್ನು ಎದುರಿಸಲಿದೆ.
ಟಿ20 ವಿಶ್ವಕಪ್ ಎ ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡವು 20 ಓವರ್‌ನಲ್ಲಿ 9 ವಿಕೆಟ್ ಕಳೆದುಕೊಂಡು 85 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂರಿಗೆ ಪಾಕಿಸ್ತಾನ 31 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಹರ್ಮನ್‌ಪ್ರೀತ್ ಪಡೆಗೆ ಎಚ್ಚರಿಕೆ
ನಾಯಕಿ ಫಾತಿಮಾ ಸನಾ ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಒಂದೆಡೆ ವಿಕೆಟ್‌ಗಳನ್ನು ಕಳೆದುಕೊಂಡು ಪಾಕಿಸ್ತಾನ ಸಂಕಷ್ಟದಲ್ಲಿ. ಈ ವೇಳೆ
7ನೇ ಕ್ರಮಾಂಕದಲ್ಲಿ ಬಂದ ಫಾತಿಮಾ ಸನಾ 20 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 30 ರನ್ ಗಳಿಸಿದರು. ಈ ಮೂಲಕ ಅವರು ಪಾಕಿಸ್ತಾನಕ್ಕೆ ಗರಿಷ್ಠ ರನ್ ಕೊಡುಗೆ ನೀಡಿದರು.
ಇದಲ್ಲದೆ, ಮಧ್ಯಮ ವೇಗದಲ್ಲಿ ಬೌಲಿಂಗ್ ಮಾಡುವ ಫಾತಿಮಾ 10 ರನ್ ನೀಡಿ ಎರಡು ವಿಕೆಟ್ ಪಡೆದು ಮಿಂಚಿದರು. ಈ ಅದ್ಭುತ ಪ್ರದರ್ಶನದೊಂದಿಗೆ ಫಾತಿಮಾ ಸನಾ ಅವರು ಭಾನುವಾರ ನಡೆಯಲಿರುವ ಭಾರತ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಹರ್ಮನ್‌ಪ್ರೀತ್ ಕೌರ್ ಪಡೆಗೆ ಎಚ್ಚರಿಕೆ ನೀಡಿದ್ದಾರೆ.
ಶ್ರೀಲಂಕಾ ವಿರುದ್ಧ ಸೋಲುವ ಪಂದ್ಯವನ್ನು ಪಾಕಿಸ್ತಾನ ಗೆಲ್ಲಲು ಪ್ರಮುಖ ಕಾರಣ ಫಾತಿಮಾ ಸನಾ. ಒಂದು ಕಡೆ ಪಾಕಿಸ್ತಾನ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಿದ್ದರೆ, ಫಾತಿಮ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡುವ ಮೂಲಕ 30 ರನ್‌ಗಳನ್ನು ಕಲೆ ಹಾಕಿದರು. ಇದು ಪಾಕಿಸ್ತಾನ 116 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.
ಈಗ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 4 ರಂದು ಆಡಲಿದೆ. ಆದರೆ ಭಾರತ ಮತ್ತ ಪಾಕಿಸ್ತಾನ ನಡುವಿನ ರೋಚಕ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಅಕ್ಟೋಬರ್ 6 ರಂದು ಉಭಯ ತಂಡಗಳ ನಡುವೆ ರೋಚಕ ಪಂದ್ಯ ನಡೆಯಲಿದೆ.
ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಪ್ರಾಬಲ್ಯ ಸಾಧಿಸಿದೆ. ಆದರೂ ಪಾಕಿಸ್ತಾನ ತಂಡವನ್ನು ಭಾರತ ಕಡೆಗಣಿಸುವಂತಿಲ್ಲ. ಪಾಕಿಸ್ತಾನ ವನಿತೆಯರ ಬೌಲಿಂಗ್ ವಿಭಾಗ ಅದ್ಭುತವಾಗಿದೆ. ಇತ್ತ ಟೀಮ್ ಇಂಡಿಯಾಕ್ಕೆ ಆಪ್ ಆರ್ಡರ್ ಬ್ಯಾಟರ್‌ಗಳ ಫಾರ್ಮ್ ಸಮಸ್ಯೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ವಿರುದ್ಧ ಭಾರತ ಗೆದ್ದು ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications