ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ; ಟಿ20 ವಿಶ್ವಕಪ್ ಯುಎಇಗೆ ಶಿಫ್ಟ್
ನವದೆಹಲಿ: ಬಹುನಿರೀಕ್ಷಿತ ಮಹಿಳೆಯರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಸ್ಥಳಾಂತರಗೊಂಡಿದೆ. ಈ ಹಿಂದೆ ಬಾಂಗ್ಲಾದೇಶದಲ್ಲಿ ನಡೆಸಲು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸಿದ್ಧತೆ ಮಾಡಿಕೊಂಡಿತ್ತು.
ಇದೀಗ ಬಾಂಗ್ಲಾದೇಶದಲ್ಲಿ ದಿನದಿಂದ ದಿನಕ್ಕೆ ಮೀಸಲಾತಿ ಹಿಂಸಾಚಾರ ಹೆಚ್ಚಾಗುತ್ತಿದ್ದು, ಸಂಪೂರ್ಣ ರಾಜಕೀಯ ವ್ಯವಸ್ಥೆ ಹದಗೆಟ್ಟಿದೆ. ಈ ಕಾರಣದಿಂದಾಗಿ ಟಿ20 ವಿಶ್ವಕಪ್ ಟೂರ್ನಿಯನ್ನು ಬಾಂಗ್ಲಾದೇಶದಿಂದ ಯುಎಇಗೆ ಸ್ಥಳಾಂತರ ಮಾಡಲಾಗಿದೆ.

ಇದಕ್ಕೂ ಮುನ್ನ ವಿಶ್ವಕಪ್ ಟೂರ್ನಿಯನ್ನು ಭಾರತದಲ್ಲಿ ಆಯೋಜಿಸುವಂತೆ ಐಸಿಸಿ ಕೇಳಿಕೊಳ್ಳಲಾಗಿತ್ತು. ಆದರೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕರಿಸಿತ್ತು. ಹೀಗಾಗಿ ಈ ಟೂರ್ನಿಯನ್ನು ಯುಎಇನಲ್ಲಿ ನಡೆಸಲು ಐಸಿಸಿ ನಿರ್ಧಾರ ಮಾಡಿದೆ.
ಹೋಸ್ಟಿಂಗ್ ಆಫರ್ ತಿರಸ್ಕಾರ
ಮಾಧ್ಯಮಗಳಿಗೆ ಮಹಿಳೆಯರ ಟಿ20 ವಿಶ್ವಕಪ್ ಆಯೋಜನೆ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪ್ರತಿಕ್ರಿಯಿಸಿದ್ದರು. 'ಐಸಿಸಿ ವಿಶ್ವಕಪ್ ಆಯೋಜಿಸಲು ನಮಗೆ ಪ್ರಸ್ತಾಪಿಸಿದ್ದರು. ಆದರೆ ನಾವು ಸ್ಪಷ್ಟವಾಗಿ ನಿರಾಕರಿಸಿದ್ದೇವೆ. ನಮ್ಮ ದೇಶದಲ್ಲಿ ಮಳೆಗಾಲ ಸಮಯವಾಗಿದ್ದು, ಮುಂದಿನ ವರ್ಷ ಮಹಿಳಾ ಏಕದಿನ ವಿಶ್ವಕಪ್ ಅನ್ನು ಆಯೋಜಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಸತತ ಎರಡು ವಿಶ್ವಕಪ್‌ಗಳನ್ನು ಆಯೋಜಿಸಿದ್ದೇವೆ ಎಂಬ ತಪ್ಪು ಸಂದೇಶವನ್ನು ಯಾರಿಗೂ ನೀಡಲು ಬಯಸುವುದಿಲ್ಲ' ಎಂದು ತಿಳಿಸಿದ್ದರು.
ಯುಎಇ ಆತಿಥ್ಯದಲ್ಲಿ ಶಾರ್ಜಾ ಸ್ಟೇಡಿಯಂನಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 20 ರವರೆಗೆ ಮಹಿಳೆಯರ ಟಿ20 ವಿಶ್ವಕಪ್ ನಡೆಯಲಿದೆ. 2021 ರಲ್ಲಿ ಐಸಿಸಿ ಪುರುಷರ ಟಿ 20 ವಿಶ್ವಕಪ್ ಟೂರ್ನಿಯನ್ನು ಯುಎಇಯಲ್ಲೇ ನಡೆಸಲಾಗಿತ್ತು.
ಮಹಿಳಾ ಟಿ20 ವಿಶ್ವಕಪ್‌ನ ಸ್ವರೂಪ
ಮಹಿಳಾ ವಿಶ್ವಕಪ್‌ನಲ್ಲಿ 2 ಗುಂಪುಗಳಿರುತ್ತವೆ. ಈ ಎರಡು ಗುಂಪುಗಳಲ್ಲಿ ತಲಾ ಐದು ತಂಡಗಳು ಇರಲಿವೆ. ಗುಂಪು ಹಂತದಲ್ಲಿ ಪ್ರತಿ ತಂಡವು ಒಟ್ಟು 4 ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಎರಡೂ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.
ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯ ಅಕ್ಟೋಬರ್ 17 ರಂದು ಮತ್ತು ಎರಡನೇ ಸೆಮಿಫೈನಲ್ ಅಕ್ಟೋಬರ್ 18 ರಂದು ನಡೆಯಲಿದೆ. ಸೆಮಿಫೈನಲ್‌ನಲ್ಲಿ ಗೆದ್ದ ಎರಡು ತಂಡಗಳು ಅಕ್ಟೋಬರ್ 20 ರಂದು ನಡೆಯಲಿರುವ ಫೈನಲ್‌ನಲ್ಲಿ ಸೆಣಾಸಾಡಲಿವೆ.
ಟಿ20 ವಿಶ್ವಕಪ್‌ನ ಗುಂಪುಗಳು
ಗುಂಪು ಎ: ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ, ಕ್ವಾಲಿಫೈಯರ್ 1
ಗುಂಪು ಬಿ: ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಕ್ವಾಲಿಫೈಯರ್ 2
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications